Hubballi: ಮಹಿಳೆಯ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್ ಹೊರ ತೆಗೆದ ವೈದ್ಯರು

By Govindaraj S  |  First Published Aug 19, 2022, 1:50 AM IST

ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್‌ವೊಂದನ್ನು ಹೊರ ತೆಗೆಯುವಲ್ಲಿ ಹುಬ್ಬಳ್ಳಿ ಕಿಮ್ಸ್ ವೈದ್ಯರು ಯಶಸ್ವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ 28 ವರ್ಷದ ಮಹಿಳೆಯ ಕಣ್ಣಿನಲ್ಲಿ ಮುರಿದ 7 ಇಂಚಿನ ಟೂತ್ ಬ್ರಶ್ ಕಣ್ಣಿನ ಕೆಳಗೆ ಸಿಲುಕಿತ್ತು.


ಹುಬ್ಬಳ್ಳಿ (ಆ.19): ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್‌ವೊಂದನ್ನು ಹೊರ ತೆಗೆಯುವಲ್ಲಿ ಹುಬ್ಬಳ್ಳಿ ಕಿಮ್ಸ್ ವೈದ್ಯರು ಯಶಸ್ವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ 28 ವರ್ಷದ ಮಹಿಳೆಯ ಕಣ್ಣಿನಲ್ಲಿ ಮುರಿದ 7 ಇಂಚಿನ ಟೂತ್ ಬ್ರಶ್ ಕಣ್ಣಿನ ಕೆಳಗೆ ಸಿಲುಕಿತ್ತು. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಿರೂರು ಗ್ರಾಮದ ಗೃಹಿಣಿ ವಿನೋದಾ ತಳವರ್ (28) ಅವರ ನಾಲ್ಕು ವರ್ಷದ ಮಗಳಿಗೆ  ಆಗಸ್ಟ್ 14ರಂದು ಬೆಳಗ್ಗೆ ಹಲ್ಲು ಉಜ್ಜುವಾಗ ಇದ್ದಕ್ಕಿದ್ದಂತೆ ಟೂತ್ ಬ್ರಶ್, ಆಕೆಯ ಬಾಯಿಯ ಎಡಗಣ್ಣಿನ ಕೆಳಗೆ ಸಿಲುಕಿದೆ. 

ನಂತರ ಕುಟುಂಬ ಸದಸ್ಯರು ಅದನ್ನು ತೆಗೆಯಲು ಪ್ರಯತ್ನಿಸಿದಾಗ ಮುರಿದಿದೆ. ಕೂಡಲೇ ಅವರು ಮಹಿಳೆಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೋಗಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಶಿಫಾರಸು ಮಾಡಿದ್ದರು. ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಮುಖದ ಸಿಟಿ ಸ್ಕ್ಯಾನ್, ಸಿಟಿ ಆಂಜಿಯೋಗ್ರಾಮ್ ಮಾಡಿದಾಗ ಕಣ್ಣಿನ ಕೆಳಗೆ ಬ್ರಶ್ ಸಿಲುಕಿರುವುದು ತಿಳಿದು ಬಂದಿದೆ.  ಸ್ಕ್ಯಾನ್ ವರದಿ ತನಿಖೆ ವೇಳೆ ಎಡಗಣ್ಣು ಸಂಪೂರ್ಣವಾಗಿ ಹಾನಿಯಾಗಿರುವುದು ಕಂಡುಬಂದಿತ್ತು. 

Tap to resize

Latest Videos

ಗಣೇಶ ಹಬ್ಬಕ್ಕೆ ಧಾರವಾಡ ಸಜ್ಜು: ಫ್ಲೆಕ್ಸ್, ಬ್ಯಾನರ್ ನಿಷೇಧ, ಮೈಕ್‌ ಬಳಕೆಗೆ ರಾತ್ರಿ 10ರವರೆಗೆ ಅವಕಾಶ

ನಂತರ ನೇತ್ರಶಾಸ್ತ್ರ ವಿಭಾಗದ ಸಹಯೋಗದೊಂದಿಗೆ  ಡಾ. ಮಂಜುನಾಥ್ ವಿಜಯಪುರ, ಡಾ. ವಸಂತ್ ಕಟ್ಟಿಮನಿ, ಡಾ. ಅನುರಾಧ ನಾಗನಗೌಡರ್, ಡಾ. ಸ್ಫೂರ್ತಿ ಶೆಟ್ಟಿ ಮತ್ತು ಅರವಳಿಕೆ ಮತ್ತು ನೇತ್ರಶಾಸ್ತ್ರ ವಿಭಾಗದ ಸಿಬ್ಬಂದಿಯ ನೆರವಿನಿಂದ ಶಸ್ತ್ರ ಚಿಕಿತ್ಸೆ  ನಡೆಸಿ, 7 ಸೆಂಟಿ ಮೀಟರ್‌ನಷ್ಟು ಉದ್ದದ ಮುರಿದು ಟೂತ್ ಬ್ರಶ್ ಚೂರೊಂದನ್ನು ಹೊರತೆಗೆಯಲಾಗಿದೆ. ಶಸ್ತ್ರ ಚಿಕಿತ್ಸೆ ನಂತರ ರೋಗಿ ಆರೋಗ್ಯವಾಗಿದ್ದು, ಮೂರ್ನಾಲ್ಕು ದಿನಗಳಲ್ಲಿ ಅವರನ್ನು ಮನೆಗೆ ಕಳುಹಿಸಲಾಗುವುದು ಎಂದು ಕಿಮ್ಸ್ ಆಸ್ಪತ್ರೆಯ ವೈದ್ಯ ಡಾ. ಮಂಜುನಾಥ್ ವಿಜಯಪುರ ತಿಳಿಸಿದ್ದಾರೆ.

ಮೆದುಳು ನಿಷ್ಕ್ರಿಯ: ಅಂಗಾಂಗ ದಾನ: ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪೊಲೀಸರು ಜೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಿ ಅಂಗಾಂಗಗಳನ್ನು ಸಾಗಿಸುವಲ್ಲಿ ನೆರವಾದರು. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿವಪುರ ತಾಂಡಾದ ನಿವಾಸಿ ಪ್ರಕಾಶ ಹನುಮಂತಪ್ಪ ಲಮಾಣಿ (42) ಆ. 12ರಂದು ಬೈಕ್‌ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಇವರನ್ನು ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಕುಟುಂಬಸ್ಥರು ಮಂಗಳವಾರ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು. 

ದೇಗುಲಕ್ಕೆಂದು ರೆಸಾರ್ಟ್‌ಗೆ ಕರೆದೊಯ್ದ ಕಾಲೇಜು ಮುಖ್ಯಸ್ಥ: ಹೆಣ್ಣುಮಕ್ಕಳ ದೂರು

ಕಿಡ್ನಿಯನ್ನು ಕಿಮ್ಸ್‌ನ ರೋಗಿಗೆ ನೀಡಿದರೆ, ಲಿವರ್‌ನ್ನು ಬೆಂಗಳೂರಿನ ಆಸ್ಟರ್‌ ಸಿಎಂಐ ಆಸ್ಪತ್ರೆಯಲ್ಲಿನ ವ್ಯಕ್ತಿಗೆ ನೀಡಲಾಗುತ್ತಿದೆ. ಬುಧವಾರ ಸಂಜೆ ಹುಬ್ಬಳ್ಳಿ ಕಿಮ್ಸ್‌ನಿಂದ ಏರ್‌ಪೋರ್ಟ್‌ವರೆಗೂ ಜೀರೋ ಟ್ರಾಫಿಕ್‌ ಮೂಲಕ ಲಿವರ್‌ನ್ನು ಸಾಗಿಸಲಾಯಿತು. ಅಲ್ಲಿಂದ ಏರ್‌ಲಿಫ್‌್ಟಮೂಲಕ ಬೆಂಗಳೂರಿಗೆ ರವಾನಿಸಲಾಯಿತು. ಈ ಸಂಬಂಧ ಕಿಮ್ಸ್‌ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಮಾತನಾಡಿ, ಅಪಘಾತದಲ್ಲಿ ಗಾಯಗೊಂಡ ಪ್ರಕಾಶ ಲಮಾಣಿ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆತನ ಅಂಗಾಂಗವನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ ಎಂದು ತಿಳಿಸಿದರು. ಪ್ರಕಾಶ ಲಮಾಣಿ ಶಿಗ್ಗಾಂವಿ ತಾಲೂಕಿನ ವಿಐಎನ್‌ಪಿ ಶುಗರ್‌ ಫ್ಯಾಕ್ಟರಿಯಲ್ಲಿ ಎಲೆಕ್ಟ್ರಿಶನ್‌ ಆಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರನಿದ್ದಾನೆ.

click me!