ಕರಾವಳಿಯ ಖಾಸಗಿ ಬಸ್‌ಗಳಲ್ಲೂ ಉಚಿತ ‘ಗ್ಯಾರಂಟಿ’ಗೆ ಸುನಿಲ್‌ ಆಗ್ರಹ

By Kannadaprabha News  |  First Published May 31, 2023, 7:29 AM IST

ಕರಾವಳಿ ಭಾಗದ ಮಹಿಳೆಯರಿಗೆ ಖಾಸಗಿ ಬಸ್‌ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದ ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನಿಲ್‌ ಕುಮಾರ್‌.


ಕಾರ್ಕಳ(ಮೇ.31): ಸಿದ್ದರಾಮಯ್ಯ ಸರ್ಕಾರ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ನೀಡಿದ ಗ್ಯಾರಂಟಿ ಭರವಸೆಗಳ ಪೈಕಿ ಒಂದಾದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಕರಾವಳಿ ಭಾಗದ ಮಹಿಳೆಯರಿಗೆ ಖಾಸಗಿ ಬಸ್‌ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕೆಂದು ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನಿಲ್‌ ಕುಮಾರ್‌ ಆಗ್ರಹಿಸಿದ್ದಾರೆ.

ಈ ಕುರಿತು ಎರಡು ಸರಣಿ ಟ್ವೀಟ್‌ ಮಾಡಿರುವ ಅವರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್‌ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್‌ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್‌ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದೆ ಅಂತ ತಿಳಿಸಿದ್ದಾರೆ. 

Tap to resize

Latest Videos

undefined

ಗ್ಯಾರಂಟಿ​ಗಳ ಅನು​ಷ್ಠಾ​ನದ ಬಗ್ಗೆ ಒಂದು ವಾರ ಕಾದು ನೋಡಿ: ಪರಮೇಶ್ವರ್‌

ಹೀಗಾಗಿ ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್‌ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ವಿ.ಸುನಿಲ್‌ ಕುಮಾರ್‌ ಆಗ್ರಹಿಸಿದ್ದಾರೆ.

click me!