ಉತ್ತಮ ಆಡಳಿತಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲಿಸಿ: ಮುಖ್ಯಮಂತ್ರಿ ಚಂದ್ರು

By Kannadaprabha News  |  First Published Dec 26, 2023, 9:36 AM IST

ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದು ಇದಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಎಎಪಿ ಪಕ್ಷ ಅಧಿಕಾರಕ್ಕೆ ಬಂದರೆ ಉತ್ತಮ ಆಡಳಿತ ನೀಡಲಿದೆ. ಅದು ಶಿರಾ ನಗರದಿಂದಲೇ ಪ್ರಾರಂಭವಾಗಲಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.


  ಶಿರಾ :  ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದು ಇದಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಎಎಪಿ ಪಕ್ಷ ಅಧಿಕಾರಕ್ಕೆ ಬಂದರೆ ಉತ್ತಮ ಆಡಳಿತ ನೀಡಲಿದೆ. ಅದು ಶಿರಾ ನಗರದಿಂದಲೇ ಪ್ರಾರಂಭವಾಗಲಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಶಿರಾ ನಗರಸಭೆ 9ನೇ ವಾರ್ಡಿನ ಉಪ ಚುನಾವಣೆಯ ಪಕ್ಷದ ಅಭ್ಯರ್ಥಿ ನಳಿನ ರವಿಶಂಕರ್ ಅವರ ಪರ ಮತಯಾಚಿಸಿ ನಂತರ ಮಂದಿರದಲ್ಲಿ ಮಾದ್ಯಮದೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಆಮ್ ಆದ್ಮಿ ಪಕ್ಷದ ಗ್ಯಾರಂಟಿಗಳನ್ನು ಕದ್ದು ಅಧಿಕಾರಕ್ಕೆ ಬಂದಿದೆ. ಆ ಗ್ಯಾರಂಟಿಗಳನ್ನು ಸರಿಯಾಗಿ ಜಾರಿ ಮಾಡುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ರಸ್ತೆಗಳು ಹದಗೆಟ್ಟಿದೆ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ, ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವು ಜನರನ್ನು ನೇರವಾಗಿ ಸಂಪರ್ಕಿಸಿ ಅವರ ಸಮಸ್ಯೆಗಳನ್ನು ಆಲಿಸಿ ಚರ್ಚಿಸಲು ಅರಳಿಕಟ್ಟೆ ಸಂವಾದ ಎಂಬ ಅಭಿಯಾನ ಹಮ್ಮಿಕೊಂಡಿದೆ ಎಂದರು.

Latest Videos

undefined

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಕೇಜ್ರಿವಾಲ್ ಆರೋಗ್ಯ ಶಿಕ್ಷಣ ಹಾಗೂ ಮೂಲಭೂತ ಸವಲತ್ತುಗಳನ್ನು ಒದಗಿಸುವ ನಿಟ್ಟಿನಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಸಹ ಕೇಂದ್ರ ಸರ್ಕಾರವು ರಾಜ್ಯಪಾಲರಿಗೆ ಸುಗ್ರೀವಾಜ್ಞೆಯ ಮೂಲಕ ಹೆಚ್ಚಿನ ಅಧಿಕಾರ ನೀಡುವ ಮೂಲಕ ಅಮ್ಮ ಆದ್ಮಿ ಪಕ್ಷದ ಸರ್ಕಾರಕ್ಕೆ ವಿನಾಕಾರಣ ತೊಂದರೆ ನೀಡುತ್ತಿದೆ. ದೆಹಲಿಯ ಜನರು ಅಮ್ ಆದ್ಮಿ ಪಕ್ಷಕ್ಕೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಕೇಜ್ರಿವಾಲ್ ಅವರ ಸರ್ಕಾರದ ಅಭಿವೃದ್ಧಿಯನ್ನೂ ಸ್ಪೂರ್ತಿಯಾಗಿ ತೆಗೆದುಕೊಂಡು ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವ ಮೂಲಕ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತಿದೆ ಎಂದರು.

ಮುಖಂಡ ರವಿಶಂಕರ್ ಮಾತನಾಡಿ, ಶಿರಾ ನಗರಸಭೆಯ ೯ನೇ ವಾರ್ಡಿನಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ನನ್ನ ಮೇಲೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ನ್ಯಾಯಾಲಯಕ್ಕೆ ಅಲೆಯುವಂತೆ ಮಾಡಿದರು. ಅಭಿವೃದ್ಧಿ ಕೆಲಸ ಮಾಡಲು ಬಿಡಲಿಲ್ಲ. ವಾರ್ಡಿನಲ್ಲಿ ರಸ್ತೆ, ಚರಂಡಿ, ಸರಕಾರಿ ಶಾಲೆಯ ಅಭಿವೃದ್ಧಿಯಾಗಬೇಕಿದೆ. ಆದ್ದರಿಂದ ನನ್ನ ಮೇಲೆ ನಂಬಿಕೆ ಇಟ್ಟು ಮತದಾರರು ಎಎಪಿ ಅಭ್ಯರ್ಥಿಯನ್ನು ಗೆಲ್ಲಿಸಿ ನಿಮ್ಮ ಸೇವೆಯನ್ನು ಮಾಡಲು ಅವಕಾಶ ನೀಡಿ ಎಂದರು.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಜಯರಾಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾಲಸಂದ್ರ ಮಧುಸೂದನ್, ತಾಲೂಕು ಅಧ್ಯಕ್ಷ ಗೋಮಾರದನಹಳ್ಳಿ ಮಂಜುನಾಥ್, ಎಎಪಿ ಅಭ್ಯರ್ಥಿ ನಳಿನ ರವಿಶಂಕರ್, ಎಎಪಿ ತಾಲೂಕು ಉಪಾಧ್ಯಕ್ಷ ಇಬ್ರಾಹಿಂ ಸೇರಿದಂತೆ ಹಲವರು ಹಾಜರಿದ್ದರು.

click me!