ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನಸ್ನೇಹಿ ಆಡಳಿತಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ತಿಪಟೂರಿನ ಸಮಗ್ರ ಅಭಿವೃದ್ಧಿಯ ಕನಸು ಕಂಡಿರುವ ನನಗೆ ನಿಮ್ಮಗಳ ಆಶೀರ್ವಾದಬೇಕೆಂದು ಕಾಂಗ್ರೆಸ್ ಮುಖಂಡ ಸಿ.ಬಿ. ಶಶಿಧರ್ ಮನವಿ ಮಾಡಿದರು.
ತಿಪಟೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನಸ್ನೇಹಿ ಆಡಳಿತಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ತಿಪಟೂರಿನ ಸಮಗ್ರ ಅಭಿವೃದ್ಧಿಯ ಕನಸು ಕಂಡಿರುವ ನನಗೆ ನಿಮ್ಮಗಳ ಆಶೀರ್ವಾದಬೇಕೆಂದುಮುಖಂಡ ಸಿ.ಬಿ. ಶಶಿಧರ್ ಮನವಿ ಮಾಡಿದರು.
ತಾಲೂಕಿನ ವಿವಿಧ ಗ್ರಾಮಗಳಾದ ಮುದ್ದೇನಹಳ್ಳಿ, ಬಳುವನೇರಲು, ರುದ್ರಾಪುರ, ಹೂಲಿಹಳ್ಳಿ ಹಾಗೂ ನಗರ ವ್ಯಾಪ್ತಿಯ ಹಳೇಪಾಳ್ಯ ಮತ್ತು ಸುತ್ತಮುತ್ತಗಳ ಬಡಾವಣೆಗಳಿಗೆ ಭೇಟಿ ನೀಡಿ ಜನತೆಯ ಕುಂದುಕೊರತೆಗಳನ್ನು ಆಲಿಸಿ ಜನತೆಯನ್ನುದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಜೊತೆಗೆ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ನಾನು ಹಲವು ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಈಗಾಗಲೇ ಎಲ್ಲ ಹೋಬಳಿಗಳಲ್ಲಿ ಆರೋಗ್ಯ ಕೇಂದ್ರಗಳನ್ನು ತೆರೆದು ಉಚಿತ ಸಮಾಲೋಚನೆ ನೀಡಿ ಅಗತ್ಯವಿರುವವರಿಗೆ ಚಿಕಿತ್ಸೆಗಳನ್ನು ಕೊಡಿಸಲಾಗುತ್ತಿದೆ. ಯುವಕ-ಯುವತಿಯರಿಗೆ ಉದ್ಯೋಗಕ್ಕಾಗಿ ಯುವ ಜನಸ್ಪಂದನ ಉಚಿತ ಕೌಶಲ್ಯ ಕೇಂದ್ರಗಳನ್ನು ತೆರೆದು ಅಲ್ಲಿ ವಿದ್ಯಾರ್ಹತೆಗೆ ತಕ್ಕಂತೆ ಅಗತ್ಯ ತರಬೇತಿ ನೀಡಿ ವಿವಿಧ ಕಂಪನಿಗಳಲ್ಲಿ ಉದ್ಯೋಗವಕಾಶ ಸೃಷ್ಟಿಸಲಾಗುವುದು. ಹಲವು ಕನಸಗಳನ್ನು ಕಟ್ಟಿಕೊಂಡು ಅಭಿವೃದ್ಧಿಯತ್ತ ಸಾಗುತ್ತಿರುವ ನನಗೆ ನಿಮ್ಮ ಆಶೀರ್ವಾದದ ಅವಶ್ಯಕತೆ ಇದೆ. ಈ ಬಾರಿ ನನಗೊಂದು ಅವಕಾಶ ಕಲ್ಪಿಸಿಕೊಡಬೇಕೆಂದು ಜನತೆಯಲ್ಲಿ ಮನವಿ ಮಾಡಿದರು.
ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರಲಿದ್ದಾರೆ ಎಂಬ ದಟ್ಟವದಂತಿ
ಬೆಂಗಳೂರು (ಮಾ.15) : ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರಲಿದ್ದಾರೆ ಎಂಬ ದಟ್ಟವದಂತಿಗಳು ಹರಿದಾಡುತ್ತಿರುವ ನಡುವೆಯೇ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದುವರೆಗೂ ಸೋಮಣ್ಣ ಅವರು ಕಾಂಗ್ರೆಸ್‌ಗೆ ಬರುವುದಾಗಿ ಅವರೂ ಹೇಳಿಲ್ಲ. ನಾನೂ ಕೂಡ ಬನ್ನಿ ಎಂದು ಅವರನ್ನು ಕರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ವದಂತಿಯ ನಡುವೆಯೇ ಡಿ.ಕೆ.ಶಿವಕುಮಾರ್(DK Shivakumar) ಮತ್ತು ಸೋಮಣ್ಣ(V Somanna) ಅವರು ಒಟ್ಟಿಗೆ ವಿಮಾಣದಲ್ಲಿ ಪ್ರಯಾಣಿಸಿರುವ ಫೋಟೋವೊಂದು ವೈರಲ್ಲಾಗಿದ್ದು ವದಂತಿಗಳಿಗೆ ಇನ್ನಷ್ಟುಪುಷ್ಟಿನೀಡಿದಂತಾಗಿದೆ. ಈ ಸಂಬಂಧ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ನಾನು ಮತ್ತು ಸೋಮಣ್ಣ ಕಳೆದ ಬೆಳಗಾವಿ ಅಧಿವೇಶನ ಮುಗಿಸಿಕೊಂಡು ಒಟ್ಟಿಗೆ ವಿಮಾಣದಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡಿದ್ದೆವು. ಆಗ ತೆಗೆದಿರುವ ಫೋಟೋವನ್ನು ಈಗ ಯಾರೋ ವೈರಲ್ ಮಾಡಿದ್ದಾರೆ ಎಂದರು.
Assembly Election: ಸಚಿವ ಸೋಮಣ್ಣ ಜೊತೆ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ?
ಅಲ್ಲದೆ, ಸೋಮಣ್ಣ ಅವರು ನಮ್ಮ ತಾಲೂಕಿನವರು. ಧರ್ಮ ಹಾಗೂ ತಾಲೂಕಿನ ಕೆಲಸಗಳಲ್ಲಿ ನಾವು ಒಟ್ಟಾಗಿ ಕೆಲಸ ಮಾಡಿಕೊಂಡು ಬಂದಿದ್ದೇವೆ. ಅವರು ನಮ್ಮ ಊರಿಗೆ ಆಗಾಗ್ಗೆ ಬರುತ್ತಿರುತ್ತಾರೆ. ನಮ್ಮಿಬ್ಬರ ನಡುವೆ ಬಾಂಧವ್ಯವಿದೆ. ನಾವಿಬ್ಬರೂ ಒಟ್ಟಿಗೆ ಪ್ರಯಾಣಿಸಬಾರದಾ. ರಾಜಕಾರಣವೇ ಬೇರೆ, ಬಾಂಧ್ಯವ್ಯವೇ ಬೇರೆ. ಕಾಂಗ್ರೆಸ್ ಸೇರುವುದಾಗಿ ಅವರೂ ಎಂದೂ ಹೇಳಿಲ್ಲ, ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ನಾನೂ ಅವರಿಗೆ ಹೇಳಿಲ್ಲ. ನಾವು ನಮ್ಮ ಕೆಲಸ ಮಾಡಿಕೊಂಡು ಇದ್ದೇವೆ ಎಂದರು.
ಇನ್ನು ಕೆಲ ಹಾಲಿ ಸಚಿವರು ಕಾಂಗ್ರೆಸ್ ಸೇರಲಿದ್ದಾರಂತಲ್ಲ ಎಂಬ ಪ್ರಶ್ನೆಗೆ, ಈ ವಿಚಾರವಾಗಿ ನಾನು ಈಗ ಏನನ್ನೂ ಹೇಳುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ. ಈ ವಿಚಾರವಾಗಿ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಆದರೆ ನಾನು ಯಾವುದೇ ಸಚಿವರ ಜತೆ ಸಂಪರ್ಕ ಮಾಡಿಲ್ಲ. ಆದರೆ ಹಾಲಿ ಶಾಸಕರುಗಳು ಕಾಂಗ್ರೆಸ್ ಪಕ್ಷದ ಟಿಕೆಟ್ ಕೇಳುತ್ತಿದ್ದು, ಆ ಕ್ಷೇತ್ರಗಳಲ್ಲಿ ನಮ್ಮದೇ ಪಕ್ಷದ ನಾಯಕರು ಕಾರ್ಯಕರ್ತರು ಇದ್ದಾರೆ. ಹೀಗಾಗಿ ಈಗ ಪಕ್ಷಕ್ಕೆ ಅವರ ಅಗತ್ಯವಿಲ್ಲ. ನಾವು ಕೆಲವು ಕ್ಷೇತ್ರಗಳ ಬಗ್ಗೆ ಮಾತ್ರ ಈ ವಿಚಾರವಾಗಿ ಚಿಂತನೆ ಮಾಡುತ್ತಿದ್ದು, ನಾವು ಈಗಲೇ ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ ಎಂದರು.