ಸಿದ್ದರಾಮಯ್ಯನವರ ಕೈಬಲಪಡಿಸಲು ಕಾಂಗ್ರೆಸ್‌ ಬೆಂಬಲಿಸಿ

By Kannadaprabha News  |  First Published Mar 31, 2023, 6:34 AM IST

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಕಾಂಗ್ರೆಸ್‌ನ್ನು ಬೆಂಬಲಿಸುವುದರೊಂದಿಗೆ ನನಗೆ ಆಶೀರ್ವಾದ ಮಾಡಬೇಕೆಂದು ಚಾಮುಂಡೇಶ್ವರಿ ಕ್ಷೇತ್ರದ ಸಂಭಾವ್ಯಅಭ್ಯರ್ಥಿ ಮಾವಿನಹಳ್ಳಿ ಎಸ್‌. ಸಿದ್ದೇಗೌಡ ಮನವಿ ಮಾಡಿದರು.


  ಮೈಸೂರು :  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಕಾಂಗ್ರೆಸ್‌ನ್ನು ಬೆಂಬಲಿಸುವುದರೊಂದಿಗೆ ನನಗೆ ಆಶೀರ್ವಾದ ಮಾಡಬೇಕೆಂದು ಚಾಮುಂಡೇಶ್ವರಿ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಮಾವಿನಹಳ್ಳಿ ಎಸ್‌. ಸಿದ್ದೇಗೌಡ ಮನವಿ ಮಾಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಡಿ. ಸಾಲುಂಡಿ, ಜಯಪುರ, ಹಾರೋಹಳ್ಳಿ, ಮಾರ್ಬಳ್ಳಿ, ಸಿಂಧುವಳ್ಳಿ, ಕಡಕೊಳ ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Latest Videos

undefined

ಬಿಜೆಪಿ ಸರ್ಕಾರ ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದ್ದು, ಬಡವರು ಮತ್ತು ಮಧ್ಯಮ ವರ್ಗದವರ ಜೇಬನ್ನು ಖಾಲಿ ಮಾಡುತ್ತಿದ್ದಾರೆ. ಇಂತಹವರಿಗೆ ತಕ್ಕ ಪಾಠ ಕಲಿಸಬೇಕಾದರೆ ಈ ಬಾರಿ ಕಾಂಗ್ರೆಸ್‌ನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲೇಬೇಕು ಎಂದರು.

ಜೆಡಿಎಸ್‌ ಅತಂತ್ರಕ್ಕಾಗಿ ಹೋರಾಟ ಮಾಡುತ್ತಿದ್ದಾರೆಯೇ ಹೊರತು ಸ್ವತಂತ್ರವಾಗಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲವಾದ್ದರಿಂದ ಕಾಂಗ್ರೆಸ್‌ನ್ನು ಪ್ರತಿಯೊಬ್ಬರು ಬೆಂಬಲಿಸಬೇಕು ಎಂದು ಅವರು ಹೇಳಿದರು.

ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ, ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮಾದೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಬಂಡಿಪಾಳ್ಯ ಬಸವರಾಜು, ಸಿ.ಎಂ. ಸಿದ್ದರಾಮೇಗೌಡ, ಕೆಂಚಪ್ಪ, ದೊಡ್ಡಹುಂಡಿ ಸೋಮಣ್ಣ, ನಾಗಣ್ಣ, ಪುಟ್ಟಬಸವೇಗೌಡ, ಗಡ್ಡಬಸಪ್ಪ, ಮಹಾದೇವ, ಬಸವರಾಜು, ಚಂದ್ರ, ಕೆಂಪನಾಯ್ಕ, ಸಂದೀಪ್‌ ಸಿದ್ದೇಗೌಡ, ಹುಚ್ಚೇಗೌಡ ಇದ್ದರು.

ಈ ಸಲ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ: ಜಗದೀಶ್‌ ಶೆಟ್ಟರ್‌ ಅಭಿಮತ

ಸಿದ್ದರಾಮಯ್ಯ ದೇವೇಗೌಡರನ್ನು ಹೆದರಿಸುತ್ತಿದ್ದರು

ಬೆಂಗಳೂರು (ಮಾ.31): ಜೆಡಿಎಸ್‌ ಬಗ್ಗೆ ಲಘುವಾಗಿ ಮಾತನಾಡುವುದು ಬೇಕಾಗಿಲ್ಲ, ತಾಕತ್ತಿದ್ದರೆ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷ ಕಟ್ಟಿಎರಡು ಸೀಟು ತರಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಗುರುವಾರ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕುರಿತು ಸಿದ್ದರಾಮಯ್ಯ ಹೇಳಿಕೆಯು ವಿಶ್ವದ ಎಂಟನೇ ಅದ್ಭುತ. ಜೆಡಿಎಸ್‌ನಲ್ಲಿ ಯಾರು ಪಾಳೆಗಾರಿಕೆ ಮಾಡಿದರು ಎಂಬುದು ಗೊತ್ತಿದೆ. ಅವರು ನಮ್ಮ ಪಕ್ಷದಲ್ಲಿದ್ದಾಗ ನಾವು ಸ್ಟೇಜ್‌ ಹಾಕಬೇಕಿತ್ತು, ಜನ ಸೇರಿಸಬೇಕಿತ್ತು. 

ಇವರು ಬಂದು ಕಾಲು ಮೇಲೆ ಕಾಲು ಹಾಕಿಕೊಂಡು ಕೂರುತ್ತಿದ್ದರು. ಅವರನ್ನು ವೇದಿಕೆಯೇರಿಸಿ ನಾವು ರಸ್ತೆಯಲ್ಲಿ ನಿಲ್ಲುತ್ತಿದ್ದೆವು. ಸಿದ್ದರಾಮಯ್ಯ ಪಾಳೆಗಾರಿಕೆ ಮಾಡುತ್ತಾ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಹೆದರಿಸಿಕೊಂಡು ಇದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್‌ನಲ್ಲಿ ಫೋಟೋ ಇಲ್ಲದಿದ್ದರೆ ಸಭೆಗೆ ಬರುವುದಿಲ್ಲ ಎನ್ನುತ್ತಿದ್ದರು. 2006ರಲ್ಲಿ ಪಕ್ಷ ತೊರೆದು ಮೈಸೂರು ಭಾಗದಲ್ಲಿ ಶಾಸಕರನ್ನು ಹೈಜಾಕ್‌ ಮಾಡಿದರು. ನಂತರ ಎಷ್ಟುಗೆಲ್ಲಿಸಿಕೊಂಡರು? ಅವರು ಗೆದ್ದಿದ್ದು ಕೇವಲ 200 ಮತಗಳಿಂದ. 

ಸಾಮಾಜಿಕ ಜಾಲತಾಣದ ಹಿಂದಿನ ಶಕ್ತಿಯೇ ಸ್ತ್ರೀ: ಸಂಸದ ತೇಜಸ್ವಿ ಸೂರ್ಯ

ಜೆಡಿಎಸ್‌ ಅವರನ್ನು ಬೆಳೆಸದಿದ್ದರೆ ಕಾಂಗ್ರೆಸ್‌ನವರು ಎಲ್ಲಿ ಕರೆಯುತ್ತಿದ್ದರು? ಸಿದ್ದರಾಮಯ್ಯ ಅವರನ್ನು ಮೂಸಿಯೂ ನೋಡುತ್ತಿರಲಿಲ್ಲ. ಪಕ್ಷವನ್ನು ಮುಗಿಸಲು ಹೊರಟಾಗ ನಾವು ಮಧ್ಯ ಪ್ರವೇಶಿಸಿದೆವು. ಇದೇ ಸಿದ್ದರಾಮಯ್ಯ ಹಿಂದೆ ಇಕ್ಬಾಲ್‌ ಅನ್ಸಾರಿ ಅವರನ್ನು ಸಚಿವರನ್ನಾಗಿ ಮಾಡಬೇಡಿ ಎಂದು ಗಲಾಟೆ ಮಾಡಿದ್ದರು. ಸಭೆಯಿಂದ ಟವೆಲ್‌ ಕೊಡವಿಕೊಂಡು ಎದ್ದು ಹೋಗಿದ್ದರು. ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡಿದ್ದೇ ಹೆಚ್ಚು, ಯಾಕೆ ಸಚಿವರನ್ನಾಗಿ ಮಾಡುತ್ತೀರಿ ಎಂದು ಗಲಾಟೆ ಮಾಡಿದ್ದರು. ಅಂತಹ ವ್ಯಕ್ತಿ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ ಎಂದು ಹರಿಹಾಯ್ದರು.

ಎಚ್ಡಿಕೆ ಮತ್ತೊಮ್ಮೆ ಸಿಎಂ ಖಚಿತ: 2023ರಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ ಮತ್ತಷ್ಟುಯೋಜನೆ ಅನುಷ್ಠಾನಗೊಳಿಸಲಾಗುವುದು. ನಾನು ಮತ್ತೆ ಶಾಸಕನಾಗಿ ಆಯ್ಕೆಯಾಗಲು ಕ್ಷೇತ್ರದ ಜನತೆ ಸಹಕಾರ ನೀಡಬೇಕೆಂದು ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದರು. ತಾಲೂಕಿನ ಡಿಂಕಾ ಗ್ರಾಮದಲ್ಲಿ ನಡೆದ ಚಿನಕುರಳಿ ಜಿಪಂ ಕ್ಷೇತ್ರ ವ್ಯಾಪ್ತಿಯ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಶಾಸಕ, ಸಚಿವನಾಗಿ ಕ್ಷೇತ್ರದಲ್ಲಿ ಹಲವಾರು ಜನಪರ ಯೋಜನೆ ಅನುಷ್ಠಾನಗೊಳಸಿದ್ದೇವೆ. ಇನ್ನೂ ಹಲವರು ಯೋಜನೆ ಪೂರ್ಣಗೊಳ್ಳಬೇಕಾಗಿದೆ ಎಂದರು.

click me!