ಬಿಜೆಪಿ ಶಾಸಕರ ಅಮಾನತು ಖಂಡನಾರ್ಹ: ಕೃಷ್ಣಪ್ಪ

By Kannadaprabha News  |  First Published Jul 25, 2023, 5:59 AM IST

ವಿಧಾನಸಭಾ ಕಲಾಪದಿಂದ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕ್ರಮವನ್ನು ಶಾಸಕ ಎಂ.ಟಿ.ಕೃಷ್ಣಪ್ಪ ಖಂಡಿಸಿದ್ದಾರೆ.


  ತುರುವೇಕೆರೆ:  ವಿಧಾನಸಭಾ ಕಲಾಪದಿಂದ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕ್ರಮವನ್ನು ಶಾಸಕ ಎಂ.ಟಿ.ಕೃಷ್ಣಪ್ಪ ಖಂಡಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತದೊಂದಿಗೆ ಮಾತನಾಡಿದ ಅವರು ಇದು ಕಾಂಗ್ರೆಸ್‌ ಪಕ್ಷದ ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ. ಪಕ್ಷಗಳ ಮುಖಂಡರನ್ನು ಸ್ವಾಗತಿಸಲು ಮತ್ತು ಅವರಿಗೆ ತಂಗುವ ವ್ಯವಸ್ಥೆ ಮಾಡಿಸಲು ಸರ್ಕಾರದ ಸೇವೆ ಮಾಡುತ್ತಿರುವ ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಿದ ಕ್ರಮ ಪ್ರಶ್ನಾರ್ಹ. ಇದನ್ನು ಎಲ್ಲರೂ ಪ್ರಶ್ನಿಸಬೇಕಾದ ಸಂಗತಿಯೇ. ಸರ್ಕಾರ ಮಾಡಿರುವ ತಪ್ಪನ್ನು ಎತ್ತಿ ಹಿಡಿಯುವುದು ವಿರೋಧ ಪಕ್ಷಗಳ ಕರ್ತವ್ಯ. ಸರ್ಕಾರ ತಾನು ಮಾಡಿರುವ ಕ್ರಮವನ್ನು ಸಮರ್ಥಿಸಿಕೊಂಡಾಗ ವಿರೋಧ ಪಕ್ಷದವರಿಗೆ ಸಿಟ್ಟು ಬರುವುದು ಸಹ ಸಹಜ. ಹಾಗಾಗಿ ವಿಧಾನಸಭೆಯಲ್ಲಿ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಇದನ್ನೆ ನೆಪ ಮಾಡಿಕೊಂಡ ಕಾಂಗ್ರೆಸ್‌ ಸರ್ಕಾರ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿರುವುದು ಹೇಯ ಕೃತ್ಯ. ಇದೊಂದು ಪ್ರಜಾಪ್ರಭುತ್ವ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು.

Latest Videos

undefined

ತುರುವೇಕೆರೆ ವಿಧಾನಸಭಾ ಕ್ಷೇತ್ರದ 34 ಗ್ರಾಮ ಪಂಚಾಯಿತಿಗಳ ಪೈಕಿ 23 ಗ್ರಾಮ ಪಂಚಾಯಿತಿಗಳು ಜೆಡಿಎಸ್‌ ಪಾಲಾಗಿವೆ. ಇದರಿಂದಾಗಿ ಗ್ರಾಮಾಂತರ ಪ್ರದೇಶದಲ್ಲಿ ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿ ಉತ್ತಮ ಸೇವೆ ಮಾಡಲು ಸಹಕಾರಿಯಾಗಿದೆ. ಮುಂಬರುವ ದಿನಗಳಲ್ಲಿ ಎಲ್ಲಾ ಜೆಡಿಎಸ್‌ ಬೆಂಬಲಿತ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸುವ ಕಾರ್ಯ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್‌ ಅಧ್ಯಕ್ಷ ದೊಡ್ಡೇಗೌಡ, ಜೆಡಿಎಸ್‌ ವಕ್ತಾರ ವೆಂಕಟಾಪುರ ಯೋಗೀಶ್‌, ಪ್ರಧಾನ ಕಾರ್ಯದರ್ಶಿ ಸೊಪ್ಪಿನಹಳ್ಳಿ ಮಧು, ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷ ಎಚ್‌.ಆರ್‌.ರಾಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

23 ಟಿವಿಕೆ 2 - ತುರುವೇಕೆರೆಯಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

click me!