ಮಂಗಳೂರಿನ ಗೋಡೆ ಬರಹಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಕದ್ರಿ ಪೊಲೀಸರು ಅರೆಸ್ಟ್ ಮಾಡಲಾಗಿದೆ. ಮೊಬೈಲ್ ಲೊಕೇಶನ್ ಆಧರಿಸಿ ಆರೋಪಿ ಬಂಧನವಾಗಿದೆ.
ಮಂಗಳೂರು (ಡಿ.03): ಮಂಗಳೂರಿನಲ್ಲಿ ಉಗ್ರ ಗೋಡೆ ಬರಹಕ್ಕೆ ಸಂಬಂಧಿಸಿ ತೀರ್ಥಹಳ್ಳಿ ಮೂಲದ ನಝೀರ್ ಎಂಬ ವ್ಯಕ್ತಿ ಬಂಧಿಸಲಾಗಿದೆ.
undefined
ಮಹಮ್ಮದ್ ಆಗಾ(26)ಎಂಬಾತನನ್ನು ಮಂಗಳೂರಿನ ಕದ್ರಿ ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ತೀರ್ಥಹಳ್ಳಿ ನಿವಾಸಿಯಾದ ಈತ ಮಂಗಳೂರಿನಲ್ಲಿ ಫುಡ್ ಡೆಲಿವರಿ ಕೆಲಸ ನಿರ್ವಹಿಸುತ್ತಿದ್ದ.
ಈತನ ಮೊಬೈಲ್ ಲೊಕೇಶನ್ ಆಧಾರದಲ್ಲಿ ವಶಕ್ಕೆ ಪಡೆಯಲಾಗಿದೆ. ಈತನ ಜೊತೆ ಬೈಕ್‌ನಲ್ಲಿ ಬಂದು ಉಗ್ರ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
ಮಂಗಳೂರಿನಲ್ಲಿ ಎರಡನೇ ಸಲ ಗೋಡೆ ಬರಹ ಪತ್ತೆ, ಆತಂಕ ಸೃಷ್ಟಿ! ...
ಗೃಹ ಸಚಿವರ ಪ್ರತಿಕ್ರಿಯೆ :
ಇನ್ನು ಮಂಗಳೂರು ಗೋಡೆ ಬರಹಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಂಗಳೂರಿನ ಗೋಡೆ ಬರಹ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.
ಈ ಪ್ರಕರಣದ ತನಿಖೆಯಲ್ಲಿ ಸಾಕಷ್ಟು ಪ್ರಗತಿಯಾಗಿದೆ. ಈ ರೀತಿಯ ಪ್ರಕರಣ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸ್ ಬೀಟ್ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಡಿಸಿಪಿ ರೇಂಜ್ ಅಧಿಕಾರಿಗಳನ್ನು ನೈಟ್ ಬೀಟ್ ಗೆ ಹಾಕಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ನಗರದ ಡಾರ್ಕ್ ಸ್ಪಾಟ್ ಗಳಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ 1,500 ಸಿಸಿಟಿವಿ ಕ್ಯಾಮೆರಾ ಪಡೆದುಕೊಳ್ಳಲು ತೀರ್ಮಾನ ಮಾಡಲಾಗಿದೆ . ಕರಾವಳಿ ಕಾವಲು ಪಡೆಯ ಪೊಲೀಸರಿಗೆ ಸ್ಪೀಡ್ ಬೋಟ್ ಗಳನ್ನು ನೀಡಲು ತೀರ್ಮಾನ ಮಾಡಲಾಗಿದೆ ಎಂದರು.
ಲವ್ ಜಿಹಾದ್ ಬಗ್ಗೆ ಪ್ರತಿಕ್ರಿಯೆ : ಲವ್ ಜಿಹಾದ್ ಎನ್ನುವುದು ಸಾಮಾಜಿಕ ಪಿಡುಗಾಗಿದ್ದು, ಅತಿರೇಕವಾಗಿ ಸಮಾಜದಲ್ಲಿ ಆತಂಕ ಸೃಷ್ಟಿಸಿದೆ ಸಮಾಜದ ಶಾಂತಿ ಹಾಳು ಮಾಡುತ್ತಿದೆ. ಸಂವಿಧಾನದ ಚೌಕಟ್ಟಿನಡಿ ಲವ್ ಜಿಹಾದ್ ವಿರುದ್ಧ ಶೀಘ್ರ ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ. ಗೋವುಗಳ ರಕ್ಷಣೆ ಹಾಗೂ ಗೋಹತ್ಯಾ ನಿಷೇಧದ ಕುರಿತು ಶೀಘ್ರದಲ್ಲಿ ಕಠಿಣ ಕಾನೂನು ಜಾರಿಗೆ ಬರಲಿದೆ ಎಂದು ಗೃಹ ಸಚಿವರು ಹೇಳಿದರು.