ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ

Published : Dec 12, 2023, 10:03 AM IST
 ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ

ಸಾರಾಂಶ

ಜಿಲ್ಲೆಯ ಯಾವುದೇ ತಾಲೂಕು ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಎಲ್ಲಾ ತಹಶೀಲ್ದಾರ್‌ಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೂಚನೆ ನೀಡಿದರು.

 ತುಮಕೂರು :  ಜಿಲ್ಲೆಯ ಯಾವುದೇ ತಾಲೂಕು ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಎಲ್ಲಾ ತಹಶೀಲ್ದಾರ್‌ಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಮುಖ್ಯ ಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತಿಯಾಗಿರುವ ಎಲ್ಲಾ ಅರ್ಜಿಗಳನ್ನು ತಮ್ಮ ಬಳಿ ಉಳಿಸಿಕೊಳ್ಳದೆ, ತ್ವರಿತವಾಗಿ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕುಣಿಗಲ್ ಮತ್ತು ಕೊರಟಗೆರೆಯಲ್ಲಿ ನಡೆದ ಜಿಲ್ಲಾ ಜನತಾ ದರ್ಶನದಲ್ಲಿ ಸ್ವೀಕೃತಿಯಾಗಿರುವ ಅರ್ಜಿಗಳನ್ನು ಆಯಾ ಇಲಾಖೆಗಳಿಗೆ ವಿಲೇವಾರಿ ಮಾಡಬೇಕು. ವಿಲೇವಾರಿ ಮಾಡಿರುವ ಅರ್ಜಿಗಳು ಯಾವ ಹಂತದಲ್ಲಿವೆ ಎಂಬುವುದನ್ನು ಉಪವಿಭಾಗಾಧಿಕಾರಿಗಳು ಪರಿಶೀಲಿಸಬೇಕೆಂದು ಹೇಳಿದರು.

ಈಗಾಗಲೇ ಜಿ.ಪಂ.ಸಿಇಒ ಜಿಲ್ಲೆಯ 1024 ಎಕರೆ ಭೂಮಿಯನ್ನು ಆಶ್ರಯ ಯೋಜನೆಗೆ ಹಸ್ತಾಂತರಿಸಲಾಗಿದ್ದು, ಆಯಾ ತಾಲೂಕಿನ ಇಒಗಳು ತಹಸೀಲ್ದಾರ್‌ಗಳಿಂದ ಮಾಹಿತಿ ಪಡೆದುಕೊಂಡು ನಗರ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದುಕೊಂಡು ತದ ನಂತರ ಬಡವಾಣೆಗಳನ್ನಾಗಿ ಅಭಿವೃದ್ಧಿಪಡಿಸಬೇಕೆಂದು ತಿಳಿಸಿದರು.

ಭೂದಾಖಲೆಗಳ ಸಿಬ್ಬಂದಿಗೆ ಈಗಾಗಲೇ ಜಿಲ್ಲಾ ಕೇಂದ್ರದಲ್ಲಿ ನುರಿತ ಅಧಿಕಾರಿಗಳಿಂದ ತರಬೇತಿ ನೀಡಲಾಗಿರುತ್ತದೆ. ಕಚೇರಿಗೆ ನೀಡಿರುವ ಕಂಪ್ಯೂಟರ್ ಮತ್ತು ಸ್ಕ್ಯಾನರ್ ಬಳಸಿಕೊಂಡು ಎಲ್ಲಾ ಕಡತಗಳನ್ನು ಸ್ಕ್ಯಾನ್ ಮಾಡಬೇಕು. ಕೆಲಸ ಮಾಡಲು ಸಿಬ್ಬಂದಿ ಕೊರತೆಯಿರುವ ಕಡೆ ಆಯಾ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳನ್ನು ನಿಯೋಜಿಸಿಕೊಳ್ಳಬೇಕೆಂದು ತಹಸೀಲ್ದಾರ್‌ಗಳಿಗೆ ಹೇಳಿದರು.

ಸಕಾಲದಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಡಿಜಿಟಲ್ ಸಹಿ ಅವಧಿ ಮುಗಿದಿರುವ ಉಪ ತಹಸೀಲ್ದಾರ್‌ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ತ್ವರಿತ ಡಿಜಿಟಲ್ ಸಹಿ ಪಡೆಯಬೇಕೆಂದು ತಿಳಿಸಿದರು.

ಆಗ್ನೇಯ ಶಿಕ್ಷಕರ ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ ಮತದಾರರ ಮಾಹಿತಿಯನ್ನು ಎಲ್ಲಾ ತಹಸೀಲ್ದಾರ್‌ಗಳು ಸಹಿ ಮಾಡಿದ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಎಲ್ಲಾ ಶಿಕ್ಷಕ ಮತದಾರರ ಮಾಹಿತಿಯನ್ನು ಕಡ್ಡಾಯ ಡಿಜಿಟಲೀಕರಣ ಮಾಡಬೇಕೆಂದು ತಿಳಿಸಿದರು.

16ರಂದು ಸಿರಾದಲ್ಲಿ ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದುಕೊರತೆ ಸಲ್ಲಿಸಲು ಇಲಾಖಾವಾರು ಕೌಂಟರ್‌ ತೆರೆಯುವುದಕ್ಕೆ ತಾ. ಆಡಳಿತ ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಸಿರಾ ತಹಸೀಲ್ದಾರ್ ಅವರಿಗೆ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ಗೌರವ್‌ಕುಮಾರ್‌ಶೆಟ್ಟಿ ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ಕಾರವಾರದಲ್ಲಿ ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ!
ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ