ಹಾವೇರಿಗೂ ವಂದೇ ಭಾರತ ರೈಲು ನಿಲುಗಡೆಗೆ ಅಗತ್ಯ ಕ್ರಮ ವಹಿಸಿ: ಸಂಸದ ಬೊಮ್ಮಾಯಿ

By Kannadaprabha News  |  First Published Sep 28, 2024, 11:37 PM IST

ಹಾವೇರಿಗೂ ವಂದೇ ಭಾರತ ರೈಲು ನಿಲುಗಡೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಗದಗ ರಸ್ತೆಯಲ್ಲಿರುವ ರೈಲ್‌ ಸೌಧದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚಾಲನೆಯಲ್ಲಿರುವ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
 


ಹುಬ್ಬಳ್ಳಿ (ಸೆ.28): ಹಾವೇರಿಗೂ ವಂದೇ ಭಾರತ ರೈಲು ನಿಲುಗಡೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಗದಗ ರಸ್ತೆಯಲ್ಲಿರುವ ರೈಲ್‌ ಸೌಧದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚಾಲನೆಯಲ್ಲಿರುವ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಹಾವೇರಿ ಮತ್ತು ಗದಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾಲನೆಯಲ್ಲಿರುವ ರೈಲ್ವೆ ಯೋಜನೆಗಳ ಪ್ರಗತಿ ಹಾಗೂ ನೂತನ ರೈಲು ಮಾರ್ಗ ಆರಂಭಿಸಲು ತ್ವರಿತಗತಿಯಲ್ಲಿ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು. 

ಹಾವೇರಿಯಲ್ಲಿ ವಂದೇ ಭಾರತ್‌ ರೈಲು ನಿಲುಗಡೆಯಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿ ವರ್ಗ ಕ್ರಮಕೈಗೊಳ್ಳಬೇಕು ಎಂದರು. ಗದಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಗದಗ-ಹೊಂಬಳ ರಸ್ತೆಯಲ್ಲಿರುವ ರೈಲ್ವೆ ಸೇತುವೆ, ಗದಗ–ಯಲವಿಗಿ ನೂತನ ರೇಲ್ವೆ ಮಾರ್ಗ, ಮುಂಡರಗಿ ತಾಲೂಕಿನ ಹಳ್ಳಿಕೇರಿ ಹತ್ತಿರ ಕೆಳ ಸೇತುವೆ ನಿರ್ಮಾಣ, ಗದಗ-ಗಜೇಂದ್ರಗಡ-ವಾಡಿ ಮಾರ್ಗ ಕಾಮಗಾರಿ, ಗದಗ-ಬೆಟಗೇರಿ ಮಧ್ಯೆ ಬಳ್ಳಾರಿ ಗೇಟ್ ಕೆಳಭಾಗದ ಸೇತುವೆ ದುರಸ್ತಿ, ಗದಗ-ನವಲಗುಂದ-ನರಗುಂದ ರೈಲ್ವೆ ಕಾಮಗಾರಿಗೆ ನಕ್ಷೆ ತಯಾರಿಸಿ ಅನುಮೋದಿಸುವುದು.  ಕಣವಿ ಗ್ರಾಮದ ಹುಲಕೋಟಿ-ಯಲವಿಗಿ ಹೊಸ ರೈಲುಗಳ ಸಮೀಕ್ಷೆ ಮಾಡಿದ್ದು ಈ ಸ್ಥಳ ಬದಲಾವಣೆ ಕುರಿತು ಸಾರ್ವಜನಿಕರಿಂದ ಮನವಿ ಬಂದಿದೆ. 

Latest Videos

undefined

ಈ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಗದಗ ಪಟ್ಟಣದ ಗಂಗಾಪುರ ಪೇಟೆಯ ಗೇಟ್ ನಂ 2ಎಗೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವುದು, ಗದಗ-ಶಿರಹಟ್ಟಿ – ಯಲವಿಗಿ ರೈಲ್ವೆ ಮಾರ್ಗ ಕಾಮಗಾರಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸುವುದು, ಗದಗ-ಹರಪನಹಳ್ಳಿ ನೂತನ ರೈಲು ಮಾರ್ಗ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇನ್ನು ಹಾವೇರಿ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ರೈಲು ಮಾರ್ಗಗಳಲ್ಲಿ ಯಲವಿಗಿ-ಹಾವೇರಿ-ಬ್ಯಾಡಗಿ–ರಾಣಿಬೆನ್ನೂರ–ಚಳಗೇರಿ ರೈಲ್ವೆ ಸ್ಟೇಷನ್ ನವೀಕರಣ, ಲಕ್ಷ್ಮೇಶ್ವರ-ಸವಣೂರ ಮಧ್ಯ ಯಲವಿಗಿ ಹತ್ತಿರದ ರೈಲ್ವೆ ಸೇತುವೆ.

ತನಿಖೆ ಮಾಡುವವರ ವಿರುದ್ಧ ಆರೋಪ ಮಾಡುವುದು ಎಷ್ಟು ಸರಿ: ಎ.ಎಸ್.ಪೊನ್ನಣ್ಣ ಅಸಮಾಧಾನ

ರಾಣಿಬೆನ್ನೂರ-ಶಿಕಾರಿಪುರ ನೂತನ ರೈಲ್ವೆ ಮಾರ್ಗ ಭೂಸ್ವಾಧೀನ, ರಾಣಿಬೆನ್ನೂರ ತಾಲೂಕಿನ ಕೋನಬೇವು-ಶಿಡಗನಾಳ ಮಧ್ಯ ರೈಲ್ವೆ ಸೇತುವೆ ನಿರ್ಮಾಣ, ಸವಣೂರ ತಾಲೂಕು ಯಲವಿಗಿ ಗ್ರಾಮದ ಹತ್ತಿರ ಸದ್ಯದ ಕೆಳ ಸೇತುವೆ ಬದಲಾಗಿ ಮೇಲ್ಸೇತುವೆ ನಿರ್ಮಿಸಲು ಸೂಚಿಸಿದರು. ಇನ್ನು ಜನಶತಾಬ್ದಿ, ಕಿತ್ತೂರ ರಾಣಿ ಚೆನ್ನಮ್ಮ, ಯಶವಂತಪುರ-ವಾಸ್ಕೋ ಎಕ್ಸ್‌ಪ್ರೆಸ್, ಮಂಗಳೂರ-ವಿಜಯಪುರ ಎಕ್ಸ್‌ಪ್ರೆಸ್ ರೈಲನ್ನು ಯಲವಿಗಿ ಸ್ಟೇಷನ್‌ನಲ್ಲಿ ನಿಲ್ಲಿಸಲು ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದರು. ಈ ವೇಳೆ ನೈಋತ್ಯ ರೈಲ್ವೆ ಇಲಾಖೆಯ ಜನರಲ್ ಮ್ಯಾನೇಜರ್ ಅರವಿಂದ ಶ್ರೀವಾಸ್ತವ್ ಸೇರಿದಂತೆ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

click me!