ಹಿರಿಯ ಯಕ್ಷಗಾನ ಕಲಾವಿದ ಹಡಿನಬಾಳು ಶ್ರೀಪಾದ ಹೆಗಡೆ ಇನ್ನಿಲ್ಲ

By Suvarna News  |  First Published Dec 4, 2020, 8:57 PM IST

ಹಿರಿಯ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಹಡಿನಬಾಳು ನಿಧನ/ ದೈತ್ಯ ಪಾತ್ರಕ್ಕೆ ಜೀವ ತುಂಬುತ್ತಿದ್ದ ಕಲಾವಿದ ಇನ್ನಿಲ್ಲ/ ಸ್ವಗೃಹದ್ದಲ್ಲೇ ನಿಧನರಾದ ಕಲಾವಿದ/ ಯಕ್ಷಲೋಕಕ್ಕೆ ತುಂಬಲಾರದ ನಷ್ಟ


ಕಾರವಾರ (  ಡಿ. 04)  ಹಿರಿಯ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಹಡಿನಬಾಳು(67)  ಗುರುವಾರ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ತಮ್ಮ ನಿವಾಸದಲ್ಲಿ ಶ್ರೀಪಾದ ಹೆಗಡೆ ಅವರು ಕೊನೆಯುಸಿರೆಳೆದಿದ್ದಾರೆ. ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀಪಾದ ಹೆಗಡೆ ಅವರು ಚೇತರಿಸಿಕೊಂಡಿದ್ದರು. ಆದರೆ ಪುನಃ ಅನಾರೋಗ್ಯ ಕಾಣಿಸಿಕೊಂಡ ಕಾರಣ ಉಡುಪಿಯ ಆಸ್ಪತ್ರೆಗೆ  ದಾಖಲಿಸಲಾಗಿತ್ತು. 

Latest Videos

undefined

ವಾಸುದೇವ ಸಾಮುಗ ಜೀವನ ಸಾಧನೆ

ಪ್ರಖ್ಯಾತ ಮೇಳಗಳಲ್ಲೂ ಅತಿಥಿ ಕಲಾವಿದರಾಗಿ ಪಾತ್ರ ಮಾಡುತ್ತಿದ್ದರು. ಇಡುಗುಂಜಿ ಮಹಾಗಣಪತಿ ಮೇಳದಲ್ಲಿ ಮೂಲ ಕಲಾವಿದರಾಗಿದ್ದರು.   ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ ಮೇಳ, ಪಂಚಲಿಂಗೇಶ್ವರ ಮೇಳ ಶಿರಸಿ, ಪೆರ್ಡೂರು, ಬಚ್ಚಗಾರು, ರಾಮನಾಥೇಶ್ವರ, ಮಂದಾರ್ತಿ, ಶಿರಸಿ ಮಾರಿಕಾಂಬ, ಸಾಲಿಗ್ರಾಮ, ಇಡಗುಂಜಿ, ನೀಲಾವರ ಮೇಳದಲ್ಲಿ ಕಲಾ ಸೇವೆ ಸಲ್ಲಿಸಿದ್ದರು.

ಕಂಸ, ಕೀಚಕ, ದುರರ್ಯೋಧನದಂತಹ ದೈತ್ಯ ಪಾತ್ರಗಳಿಗೆ ಜೀವ ತುಂಬುತ್ತಿದ್ದರು. ಮಣ್ಣಿನ ಗಣೇಶ ವಿಗ್ರಹ ತಯಾರಿಕೆಯಲ್ಲಿಯೂ ಹೆಸರು ಮಾಡಿದ್ದರು. ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳು ಸಂದಿವೆ.

click me!