ಯೋಗದಲ್ಲೂ ರಾಜಕಾರಣ: ಮಾಧ್ಯಮಗಳ ಮುಂದೆಯೇ ಪ್ರತಾಪ್ ಸಿಂಹ- ರಾಮದಾಸ್ ಜಟಾಪಟಿ

Published : Jun 12, 2022, 01:04 PM IST
ಯೋಗದಲ್ಲೂ ರಾಜಕಾರಣ: ಮಾಧ್ಯಮಗಳ ಮುಂದೆಯೇ ಪ್ರತಾಪ್ ಸಿಂಹ- ರಾಮದಾಸ್ ಜಟಾಪಟಿ

ಸಾರಾಂಶ

*  ಪ್ರಧಾನಿಯೊಂದಿಗೆ ಪಾಲ್ಗೊಳ್ಳುವ ಯೋಗಪಟುಗಳ ಸಂಖ್ಯೆ ವಿಚಾರದಲ್ಲಿ ದ್ವಂದ್ವವಾಗಿದೆ *  7 ರಿಂದ 8 ಸಾವಿರ ಜನರು ಭಾಗವಹಿಸುತ್ತಾರೆ: ಪ್ರತಾಪ್ ಸಿಂಹ *  ನಮ್ಮ ನಡುವೆ ಯಾವುದೇ ಮನಸ್ತಾಪ ಇಲ್ಲ: ರಾಮದಾಸ್  

ಮೈಸೂರು(ಜೂ.12):  ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರು ಮಾಧ್ಯಮಗಳ ಮುಂದೆಯೇ ಜಟಾಪಟಿ ನಡೆಸಿದ ಘಟನೆ ಇಂದು(ಭಾನುವಾರ) ನಗರದ ಅರಮನೆ ಆವರಣದಲ್ಲಿ ನಡೆದಿದೆ. 

ಯೋಗ ತಾಲೀಮು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಅವರು, ಪ್ರಧಾನಿಯೊಂದಿಗೆ ಪಾಲ್ಗೊಳ್ಳುವ ಯೋಗಪಟುಗಳ ಸಂಖ್ಯೆ ವಿಚಾರದಲ್ಲಿ ದ್ವಂದ್ವವಾಗಿದೆ.  7 ರಿಂದ 8 ಸಾವಿರ ಜನರು ಭಾಗವಹಿಸುತ್ತಾರೆ ಅಂತ ಪ್ರತಾಪ್ ಸಿಂಹ ಹೇಳಿದ್ದಾರೆ. ‌

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು: ಎಂ.ಬಿ. ಪಾಟೀಲ್‌ ವಿಶ್ವಾಸ

ಪ್ರತಾಪ್ ಸಿಂಹ ಮಾತಿನ ಮಧ್ಯ ಪ್ರವೇಶಿಸಿದ ರಾಮದಾಸ್ ಅವರು, ಈಗಾಗಲೇ 13 ಸಾವಿರ ನೋಂದಣಿಯಾಗಿದೆ ಅಂತ ತಿಳಿಸಿದ್ದಾರೆ. ನಾನು ಮಾತನಾಡುತ್ತಿದ್ದೇನೆ, ರಾಮದಾಸ್‌ಜೀ ಸುಮ್ಮನಿರಬೇಕು ಎಂದು ಪ್ರತಾಪ್ ಸಿಂಹ ಸಿಡಿಮಿಡಿಗೊಂಡಿದ್ದಾರೆ. 

ಇದಕ್ಕೆ ಸಂಬಂಧಿಸಿದಂತೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮದಾಸ್ ಅವರು, ಪ್ರತಾಪ್ ಸಿಂಹ ಅವರಿಗೆ ಸರಿಯಾದ ಮಾಹಿತಿ ಇರಲಿಲ್ಲ. ಸ್ಪಷ್ಟನೆ ವಿವರಣೆ ನೀಡಲು ಯತ್ನಿಸಿದೆ. ನಮ್ಮ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 

PREV
Read more Articles on
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು