ಗ್ರಾ.ಪಂ ಅಧ್ಯಕ್ಷೆ ಮೇಲೆ ತಾ.ಪಂ ಉಪಾಧ್ಯಕ್ಷನಿಂದ ಮನೆಗೆ ನುಗ್ಗಿ ಹಲ್ಲೆ

Suvarna News   | Asianet News
Published : Dec 31, 2019, 11:59 AM IST
ಗ್ರಾ.ಪಂ ಅಧ್ಯಕ್ಷೆ ಮೇಲೆ ತಾ.ಪಂ ಉಪಾಧ್ಯಕ್ಷನಿಂದ ಮನೆಗೆ ನುಗ್ಗಿ ಹಲ್ಲೆ

ಸಾರಾಂಶ

ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಆಕೆಯ ಕುಟುಂಬದ ಮೇಲೆ ತಾಲೂಕು ಪಂಚಾಯತ್ ಉಪಾಧ್ಯಕ್ಷ ಆತನ ಬೆಂಬಲಿಗರು ಮನೆಗೆ ನುಗ್ಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. 

ವಿಜಯ[ಡಿ.31]: ತಾಲೂಕು ಪಂಚಾಯತಿ ಉಪಾಧ್ಯಕ್ಷ ಹಾಗೂ ಅವರ ಬೆಂಬಲಿಗರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮನೆಯವರ ಮೇಲೆ ಹಲ್ಲೆ ಮಾಡಿ ಪುಂಡಾಟಿಕೆ ಮೆರೆಯಲಾಗಿದೆ. 

ವಿಜಯ ಪುರದ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುದ್ದೇ ಬಿಹಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ್ ಮತ್ತು ಸಹೋದರ ರವಿಗೌಡ ಪಾಟೀಲ್
 ಗುಂಪು ಕಟ್ಟಿಕೊಂಡು ಹೋಗಿ ಬಸರಕೋಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದಾ ಮನೆ ಮುಂದೆ ಗಲಾಟೆ ಮಾಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದಾ ಹಾಗೂ ಅವರ ಕುಟುಂಬದವರ ಮೇಲೆಯೂ ಹಲ್ಲೆ ಮಾಡಿದ್ದಾರೆನ್ನುವ ಆರೋಪ ಕೇಳಿ ಬಂದಿದೆ. ಮನೆಯಲ್ಲಿದ್ದ ಮಕ್ಕಳ‌ ಮೇಲೂ ಹಲ್ಲೆ‌ ನಡೆಸಿದ್ದಾರೆ ಎನ್ನಲಾಗಿದೆ. 

ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕ್ಷುಲ್ಲಕ ಕಾರಣಕ್ಕೆ ವೈಷಮ್ಯ ಬೆಳೆಸಿಕೊಂಡು ಹಲ್ಲೆ ನಡೆಸಿದ್ದಾರೆ. ಸುನಂದಾ ಮನೆಗೆ ನುಗ್ಗಿ ಕಟ್ಟಿಗೆಯಿಂದ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.  ಆದರೆ ಈ ಸಂಬಂಧ ಯಾವುದೇ ದೂರು ದಾಖಲಿಸಲಾಗಿಲ್ಲ.

PREV
click me!

Recommended Stories

ಆತಂಕದ ವಿಷಯ: ಬೆಂಗಳೂರಿನಲ್ಲಿ 11 ವರ್ಷದ ಮಕ್ಕಳಿಗೂ ಡ್ರಗ್ಸ್‌ ಚಟ!
ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!