
ಗಂಗಾವತಿ(ಜ.26): ಎನ್‌ಟಿಎಸ್‌ಇ ಮತ್ತು ಎನ್‌ಎಂಎಂಎಸ್ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಕರ್ತವ್ಯದಲ್ಲಿ ತೊಡಗಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಗಂಗಾವತಿ ನಗರದಲ್ಲಿ ಸೋಮವಾರ ನಡೆದಿದೆ.
ನಗರದ ಗೊಟ್ಟಿಪಾಟಿ ವೆಂಕಟರತ್ನಂ ಪ್ರೌಢ ಶಾಲೆಯಲ್ಲಿ ನಡೆಯುತ್ತಿದ್ದ ಪರೀಕ್ಷೆಯಲ್ಲಿ ಮುಖ್ಯ ಅಧೀಕ್ಷಕರಾಗಿದ್ದ ಹಣವಾಳ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಗವಿಸಿದ್ದಯ್ಯಸ್ವಾಮಿ (55) ಮೃತಪಟ್ಟಿದ್ದಾರೆ.
ಗಂಗಾವತಿಯಲ್ಲಿ ಶಾರ್ಟ್ ಸರ್ಕ್ಯೂಟ್: ಐದು ಅಂಗಡಿ ಭಸ್ಮ, ಲಕ್ಷಾಂತರ ರೂ. ಹಾನಿ
ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧುಗಳಿದ್ದಾರೆ. ಯಲಬುರ್ಗಾ ತಾಲೂಕಿನ ವೀರಾಪುರ ಗ್ರಾಮದ ಗವಿಸಿದ್ದಯ್ಯಸ್ವಾಮಿ ಕಳೆದ ಮೂರು ವರ್ಷಗಳಿಂದ ತಾಲೂಕಿನ ಹಣವಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.