ಕಾಲು ನೋವಿನಿಂದ ಬೇಸತ್ತಿದ್ದ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ(ಮಾ.19): ಕಾಲು ನೋವಿನಿಂದ ಬೇಸತ್ತಿದ್ದ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅನಾರೋಗ್ಯ ಕಾರಣದಿಂದ ಅಂಗನವಾಡಿ ಶಿಕ್ಷಕಿ ಶಾಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು ಅಂಗನವಾಡಿ ಕಾರ್ಯಕರ್ತೆ ಮಾಲತಿ (33) ಆತ್ಮಹತ್ಯೆ ಮಾಡಿಕೊಂಡವರು. ಅಂಗನವಾಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಕಾಮುಕ ತಂದೆಯಿಂದ ಮಗಳ ಮೇಲೆಯೇ 3 ವರ್ಷ ನಿರಂತರ ಅತ್ಯಾಚಾರ
ಕಳೆದ ಕೆಲ ತಿಂಗಳಿಂದ ಮಣಿಪಾಲ್ ಅಸ್ಪತ್ರೆಯಲ್ಲಿ ಕಾಲು ನೋವಿಗೆ ಸಂಭಂದಿಸಿದ ಶಸ್ತಚಿಕಿತ್ಸೆ ಮಾಡಿಸಿಕೊಂಡಿದ್ದರು. ಡೆತ್ ನೋಟ್‌ನಲ್ಲಿ ನನ್ನ ಸಾವಿಗೆ ಕಾಲಿನ ನೋವು ಕಾರಣ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]