ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಪ್ರಸಕ್ತ ಸಾಲಿಗೆ ವಿಶೇಷ ಚೇತನ ಮಕ್ಕಳಿಗೆ ಶಿಕ್ಷಣ ನೀಡಲು ಸಂಪನ್ಮೂಲ ಕೇಂದ್ರಗಳಿಗೆ ಬ್ಲಾಕ್ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಪ್ರಾಥಮಿಕ ಮತ್ತು ಪ್ರೌಢ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ| ಈ ಹುದ್ದೆಗಳಿಗೆ ಪ್ರಾಥಮಿಕ ವಿಭಾಗಕ್ಕೆ ವಿಶೇಷ ಡಿಇಡಿ ಹಾಗೂ ಪ್ರೌಢ ವಿಭಾಗಕ್ಕೆ ವಿಶೇಷ ಬಿಇಡಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಸೇವಾ ನಿರತ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅ. 10 ಕೊನೆಯ ದಿನವಾಗಿದೆ|
ಕೊಪ್ಪಳ(ಅ.5): ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಪ್ರಸಕ್ತ ಸಾಲಿಗೆ ವಿಶೇಷ ಚೇತನ ಮಕ್ಕಳಿಗೆ ಶಿಕ್ಷಣ ನೀಡಲು ಸಂಪನ್ಮೂಲ ಕೇಂದ್ರಗಳಿಗೆ ಬ್ಲಾಕ್ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಪ್ರಾಥಮಿಕ ಮತ್ತು ಪ್ರೌಢ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಮನ್ವಯ ಶಿಕ್ಷಣ ಮಧ್ಯವರ್ತನೆಯನ್ನು (ವಿಶೇಷ ಅಗತ್ಯತೆವುಳ್ಳ ಮಕ್ಕಳ ಶಿಕ್ಷಣಕ್ಕಾಗಿ) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿ ಬ್ಲಾಕ್ ಹಂತದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ 2 ಮತ್ತು ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವೃಂದದ 2 ಹುದ್ದೆಗಳನ್ನು ಸ್ಥಳಾಂತರಿಸಲಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಹುದ್ದೆಗಳಿಗೆ ಪ್ರಾಥಮಿಕ ವಿಭಾಗಕ್ಕೆ ವಿಶೇಷ ಡಿಇಡಿ ಹಾಗೂ ಪ್ರೌಢ ವಿಭಾಗಕ್ಕೆ ವಿಶೇಷ ಬಿಇಡಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಸೇವಾ ನಿರತ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅ. 10 ಕೊನೆಯ ದಿನವಾಗಿದ್ದು, ಅರ್ಹ ಶಿಕ್ಷಕರು ಸೂಕ್ತ ದಾಖಲೆಗಳೊಂದಿಗೆ ಸಂಬಂಧಿಸಿದ ಬಿಆರ್‌ಸಿ ಕೇಂದ್ರಕ್ಕೆ ತೆರಳಿ ಸಂಜೆ 5.30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಭೂ ಸೇನಾ ನೇಮಕಾತಿಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಡಿವೈಪಿಸಿ ಎಸ್.ಎಸ್.ಕೆ ಮೊ: 9448999402 ಹಾಗೂ ಜಿಲ್ಲಾ ನೋಡಲ್ ಅಧಿಕಾರಿಗಳು ಮೊ: 9480488001ಗೆ ಸಂಪರ್ಕಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ, ಕೊಪ್ಪಳ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಅಮಿತಾ ಎನ್. ಯರಗೋಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.