ಚಿತ್ರದುರ್ಗ: ಪರಿಹಾರ ಸಾಮಗ್ರಿ ತಲುಪಿಸಲು ಉಸ್ತುವಾರಿ ತಂಡ

By Kannadaprabha NewsFirst Published Aug 15, 2019, 1:02 PM IST
Highlights

ಸಂಗ್ರಹಿಸಿರುವ ನೆರೆ ಪರಿಹಾರ ವಸ್ತುಗಳನ್ನು ನೆರೆ ಸಂತ್ರಸ್ತರಿಗೆ ವ್ಯವಸ್ಥಿತವಾಗಿ ತಲುಪಿಸುವ ನಿಟ್ಟಿನಲ್ಲಿ ಚಿತ್ರದುರ್ಗದಲ್ಲಿ ಉಸ್ತುವಾರಿ ತಂಡಗಳನ್ನು ರಚನೆ ಮಾಡಲಾಗಿದೆ. ಬಳಕೆಗೆ ಯೋಗ್ಯವಾದ ವಸ್ತುಗಳನ್ನು ಪರಿಶೀಲಿಸಿ ಸಂಗ್ರಹಣೆ ಮಾಡಿ, ಬಳಕೆಗಾಗಿ ಸಂಬಂಧಪಟ್ಟಜಿಲ್ಲೆಗಳಿಗೆ ವ್ಯವಸ್ಥಿತವಾಗಿ ತಲುಪಿಸುವ ಕಾರ್ಯವನ್ನು ಕೈಗೊಳ್ಳಲು ಚಿತ್ರದುರ್ಗ ತಹಸಿಲ್ದಾರರ ಅಧ್ಯಕ್ಷತೆಯಲ್ಲಿ ತಂಡ ರಚಿಸಲಾಗಿದೆ.

ಚಿತ್ರದುರ್ಗ(ಆ.15): ನೆರೆ ಸಂತ್ರಸ್ತರಿಗೆ ಸಾಮಗ್ರಿಗಳನ್ನು ತಲುಪಿಸಲು ಉಸ್ತುವಾರಿ ತಂಡ ರಚನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿವಿನೋತ್‌ ಪ್ರಿಯಾ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಠಿ ಹಾಗೂ ಪ್ರವಾಹದಿಂದ ಸಂತ್ರಸ್ತರಾದವರಿಗೆ ಜಿಲ್ಲಾದ್ಯಂತ ವಿವಿಧೆಡೆಯಿಂದ ಸಾರ್ವಜನಿಕರು, ಸಂಘ ಸಂಸ್ಥೆಗಳು ನಿತ್ಯೋಪಯೋಗಿ ವಸ್ತುಗಳನ್ನು ಸ್ವೀಕರಿಸಲು ಜಿಲ್ಲಾಡಳಿತದಿಂದ ನಗರದ ತರಾಸು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಾಮಗ್ರಿ ಸ್ವೀಕರಿಸಲು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಬಿಜೆಪಿ ಮಹಿಳಾ ಘಟಕದಿಂದ 5 ಸಾವಿರ ರೊಟ್ಟಿ ತಯಾರಿ

ಬಳಕೆಗೆ ಯೋಗ್ಯವಾದ ವಸ್ತುಗಳನ್ನು ಪರಿಶೀಲಿಸಿ ಸಂಗ್ರಹಣೆ ಮಾಡಿ, ಬಳಕೆಗಾಗಿ ಸಂಬಂಧಪಟ್ಟಜಿಲ್ಲೆಗಳಿಗೆ ವ್ಯವಸ್ಥಿತವಾಗಿ ತಲುಪಿಸುವ ಕಾರ್ಯವನ್ನು ಕೈಗೊಳ್ಳಲು ಚಿತ್ರದುರ್ಗ ತಹಸಿಲ್ದಾರರ ಅಧ್ಯಕ್ಷತೆಯಲ್ಲಿ ತಂಡ ರಚಿಸಲಾಗಿದೆ. ತಾಪಂ ಕಾರ್ಯನಿರ್ವಹಣಾಧಿಕಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ಅಧಿಕಾರಿಗಳು ತಂಡದ ಇತರೆ ಸದಸ್ಯರಾಗಿರುತ್ತಾರೆ.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಿಯೋಜಿತ ತಂಡವು ಜಿಲ್ಲಾ ವ್ಯಾಪ್ತಿಯಲ್ಲಿ ಪರಿಹಾರ ರೂಪದಲ್ಲಿ ಸಂಗ್ರಹವಾಗುವ ನಿತ್ಯೋಪಯೋಗಿ ವಸ್ತುಗಳು, ಆಹಾರ ಪದಾರ್ಥಗಳನ್ನು ಸಂಬಂಧಿಸಿದವರಿಂದ ಸಂಗ್ರಹಿಸಿ ಜಿಲ್ಲಾ ರಂಗಮಂದಿರದಲ್ಲಿ ವ್ಯವಸ್ಥಿತವಾಗಿ ಶೇಖರಿಸಿ, ಕಾಲಮಿತಿಯೊಳಗೆ ಅವಶ್ಯಕವಿರುವ ಜಿಲ್ಲೆಗೆ ತಲುಪಿಸುವ ವ್ಯವಸ್ಥೆಯನ್ನು ನಿರ್ವಹಿಸುವ ಜವಬ್ದಾರಿ ನಿರ್ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ತಿಳಿಸಿದ್ದಾರೆ.

click me!