ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 40 ಡಿ.ಸೆ. ದಾಟಿದ ಉಷ್ಣಾಂಶ!

By Kannadaprabha NewsFirst Published Apr 2, 2020, 7:56 AM IST
Highlights

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ಉಷ್ಣಾಂಶ ದಾಖಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮಂಗಳೂರು(ಎ.02): ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ಉಷ್ಣಾಂಶ ದಾಖಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಬೆಳ್ತಂಗಡಿ, ಪುತ್ತೂರು ತಾಲೂ​ಕು, ಬಂಟ್ವಾಳ ತಾಲೂ​ಕಿನ ವಿಟ್ಲ ಮತ್ತಿ​ತ​ರಸ ಪ್ರದೇ​ಶ​ಗ​ಳ​ಲ್ಲಿ 41-42 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿರುವುದು ಹವಾಮಾನ ವೆಬ್‌ಸೈಟ್‌ಗಳಲ್ಲಿ ಪ್ರಕಟವಾಗಿದೆ.

ಲಾಕ್‌​ಡೌನ್‌ ನಡು​ವೆಯೂ ಅಕ್ರಮ ಗೋಸಾ​ಗಾ​ಟ!

ಆದರೆ ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್‌ ಆಗಿದ್ದರೆ, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್‌ ಆಗಿತ್ತು. ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಪಣಂಬೂರು ಪ್ರದೇಶದಲ್ಲಿ ಬುಧವಾರ ಗರಿಷ್ಠ 35.5 ಹಾಗೂ ಕನಿಷ್ಠ 26.8 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿತ್ತು.

click me!