ಬಿಬಿಎಂಪಿಗೆ ಗೌರವ್ ಗುಪ್ತಾ ಆಡಳಿತಾಧಿಕಾರಿ,  ಚುನಾವಣೆ ನಿರೀಕ್ಷೆಯಲ್ಲಿದ್ದರಿಗೆ ಶಾಕ್!

Published : Sep 10, 2020, 10:12 PM IST
ಬಿಬಿಎಂಪಿಗೆ ಗೌರವ್ ಗುಪ್ತಾ ಆಡಳಿತಾಧಿಕಾರಿ,  ಚುನಾವಣೆ ನಿರೀಕ್ಷೆಯಲ್ಲಿದ್ದರಿಗೆ ಶಾಕ್!

ಸಾರಾಂಶ

ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ/ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾ ನೇಮಕ/ ನೇಮಕದ ಆದೇಶ ಹೊರಡಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು(ಸೆ. 10)  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾ ನೇಮಕವಾಗಿದೆ.  ನೇಮಕದ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಪಾಲಿಕೆ ಸದಸ್ಯರ 5 ವರ್ಷದ ಅಧಿಕಾರ ಅವಧಿ ಗುರುವಾರಕ್ಕೆ ಮುಕ್ತಾಯವಾಗಿದ್ದು, ಆಡಳಿತಾಧಿಕಾರಿಯನ್ನು ನೇಮಿಸಿದೆ. ಮೂಲಕ ರಾಜ್ಯ ಸರ್ಕಾರ ತಕ್ಷಣಕ್ಕೆ ಚುನಾವಣೆ ನಡೆಸುವುದಿಲ್ಲವೆಂಬ ಸಂದೇಶನ್ನು ನೀಡಿದೆ.

ಬೆಂಗಳೂರಿನ ಮಳೆ ಅನಾಹುತ; ಪೋಟೋಗಳೆ ಹೇಳುತ್ತವೆ

ಹೈಕೋರ್ಟ್ ಗೆ 198 ವಾರ್ಡಗಳ ಮರು ವಿಂಗಡಣೆ, ಚುನಾವಣೆ ನಡೆಸುವ ಸಂಬಂಧ ಸರ್ಕಾರ ಅಫಿಡೆವಿಟ್ ಸಲ್ಲಿಸಿದೆ.  ಗೌರವ್ ಗುಪ್ತ ಅವರು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿದ್ದು, ಬಿಬಿಎಂಪಿಗೆ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಹೆಚ್ಚುವರಿಯಾಗಿ ಬಿಬಿಎಂಪಿಯ ಆಡಳಿತ ನಿರ್ವಹಿಸಲಿದ್ದಾರೆ.

 

PREV
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ