ಕರಾವಳಿಯಲ್ಲಿ ಭಯೋತ್ಪಾದಕ ಗುಂಪುಗಳು ಕೆಲಸ ಮಾಡುತ್ತಿರುವುದು ನಿಜ. ಎಲ್ಲಿಂದಲೋ ಬಂದು ಇಲ್ಲಿ ಸಮಾಜ ದ್ರೋಹದ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಳಗಾವಿ [ಜ.21]: ಕರಾವಳಿಯ ಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆಗಳು ಕೆಲಸ ಮಾಡುತ್ತಿರುವುದು ಸತ್ಯ. ಇದೀಗ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದು ಸಾಕ್ಷ್ಯ ಸಿಕ್ಕಂತಾಗಿದೆ. ಬೇರೆ ಬೇರೆ ಭಾಗಗಳಿಂದ ಬಂದವರು ಸಮಾಜ ದ್ರೋಹ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಬಾಂಬ್ ಪತ್ತೆಯಾದ ಪ್ರಕರಣ ಸಂಪೂರ್ಣ ತನಿಖೆಯಾದ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕರಾವಳಿ ಭಾಗದಲ್ಲಿ ಭಯೋತ್ಪಾದಕ ಸಂಘಟನೆಗಳು ಸಕ್ರಿಯವಾಗಿ ತೊಡಗಿವೆ. ಅಲ್ಲದೆ ಮಂಗಳೂರಿನ ಕೆಲವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಯಾವ ಸಂಘಟ ನೆಯ ಜತೆ ಯಾರು ಯಾವುದರಲ್ಲಿ ಶಾಮೀಲಾಗಿದ್ದಾರೆ? ಇಷ್ಟು ದಿನ ಕಾಶ್ಮೀರ, ಸಿರಿಯಾ, ಪಿಒಕೆಯಲ್ಲಿ ಕಾರ್ಯಾಚರಣೆ ಮಾಡುತ್ತಿರುವಂತಹ ಸಂಘಟನೆಯೊಂದಿಗೆ ಶಾಮೀಲಾಗಿದ್ದಾರೆ ಎನ್ನುವುದನ್ನು ತನಿಖೆ ಮಾಡಬೇಕಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಬಗ್ಗೆ ಯಾರು ಮತ್ತು ಏಕೆ ಇಟ್ಟಿದ್ದಾರೆ? ಹೇಗೆ ಅಲ್ಲಿಗೆ ಬಂತು ಎಂಬ ಕುರಿತಾಗಿ ತನಿಖೆ ನಡೆಯಬೇಕಿದೆ. ಈಗಲೇ ಏನು ಹೇಳಲು ಸಾಧ್ಯವಿಲ್ಲ ಎಂದರು.
ಬಾಂಬ್ ನಿಷ್ಕ್ರಿಯಗೊಳಿಸಿದ ತಜ್ಞರು: ನಿಟ್ಟುಸಿರು ಬಿಟ್ಟ ಮಂಗಳೂರಿಗರು..
ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿಕೊಂಡು ತನಿಖೆಯನ್ನು ಚುರುಕು ಗೊಳಿಸುತ್ತದೆ. ಭಯೋತ್ಪಾದಕ ಚುಟುವಟಿಕೆಯಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆ ಕೊಡಿಸಿ ತಪ್ಪಿತಸ್ಥರ ಮುಖವಾಡ ಕಳಚುತ್ತದೆ ಎನ್ನುವ ವಿಶ್ವಾಸ ಇದೆ ಎಂದರು. ಪಿಎಫ್‌ಐ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಹಿತಿಯನ್ನು ಕಲೆ ಹಾಕುತ್ತಿದೆ. ಎಸ್‌ಡಿಪಿಐ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವನ್ನು ನಿಷೇಧ ಮಾಡಬೇಕು.
undefined
ಅನುಮಾನಾಸ್ಪದ ಬ್ಯಾಗ್ ಪತ್ತೆ; ಯಾದಗಿರಿ ಬಸ್ ನಿಲ್ದಾಣದಲ್ಲಿ ಟೆನ್ಷನ್..ಟೆನ್ಷನ್.
ಈ ಸಂಘಟನೆಯವರು ಹಲವಾರು ಸಮಾಜ ದ್ರೋಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಕಷ್ಟು ಕೊಲೆ ಪ್ರಕರಣದಲ್ಲಿಯೂ ತೊಡಗಿದ್ದಾರೆ. ಇತ್ತೀಚೆಗೆ ಮಾಜಿ ಸಚಿವ ತನ್ವಿರ್ ಸೇಠ ಅವರ ಮೇಲೂ ಮಾರಣಾಂತಿಕ ಹಲ್ಲೆ ನಡೆದು, ಹತ್ಯೆ ಮಾಡುವ ಸಂಚು ರೂಪಿಸಿದ್ದ ಇಂತಹ ಸಂಘಟನೆಗಳನ್ನು ನಿಷೇಧ ಮಾಡಲಾಗುವುದು ಎಂದು ತಿಳಿಸಿದರು