ಕಾಂಗ್ರೆಸ್ ಪಕ್ಷ ತ್ಯಜಿಸಿ ಜೆಡಿಎಸ್ ಪಕ್ಷ ಸೇರಿದ ಮುಖಂಡನ ಕಾರಿಗೆ ಕೆಲವು ಕಿಡಿಗೇಡಿಗಳು ಬೆಂಕಿ ಹಾಕಿ ಸುಟ್ಟುಹಾಕಿರುವ ಘಟನೆ ವರದಿಯಾಗಿದೆ.
ಕೊಳ್ಳೇಗಾಲ: ಕಾಂಗ್ರೆಸ್ ಪಕ್ಷ ತ್ಯಜಿಸಿ ಜೆಡಿಎಸ್ ಪಕ್ಷ ಸೇರಿದ ಮುಖಂಡನ ಕಾರಿಗೆ ಕೆಲವು ಕಿಡಿಗೇಡಿಗಳು ಬೆಂಕಿ ಹಾಕಿ ಸುಟ್ಟುಹಾಕಿರುವ ಘಟನೆ ವರದಿಯಾಗಿದೆ.
ತಾಲೂಕಿನ ತೆಳ್ಳನೂರು ಗ್ರಾಪಂನ ಅಧ್ಯಕ್ಷೆ ಲೀಲಾವತಿ ಅವರ ಪತಿ ರಮೇಶ್ ಕಾರು ಸುಟ್ಟುಹೋಗಿದೆ. ಬ್ರಿಜಾ ಮಾರುತಿ ಕಾರು ತೆಳ್ಳನೂರಿನಲ್ಲಿರುವ ರಮೇಶ್ ಅವರ ಜಮೀನಿನ ಶೆಡ್‌ನಲ್ಲಿ ನಿಲ್ಲಿಸಲಾಗಿತ್ತು. ಕಳೆದ ರಾತ್ರಿ ದುಷ್ಕರ್ಮಿಗಳ ಸುಟ್ಟು ಹಾಕಿದ್ದು ಕ್ರಮವಹಿಸಿ ಎಂದು ರಮೇಶ್ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.
undefined
ಲೊಕ್ಕನಹಳ್ಳಿ ಗ್ರಾಮದ ಹಿರಿಯ ಮುಖಂಡ ಚಿನ್ನಸ್ವಾಮಿ ಬಿಜೆಪಿ ಪಕ್ಷ ತೊರೆದು ಸೇರ್ಪಡೆ
ಹನೂರು : ಲೊಕ್ಕನಹಳ್ಳಿ ಗ್ರಾಮದ ಹಿರಿಯ ಮುಖಂಡ ಚಿನ್ನಸ್ವಾಮಿ ಪಕ್ಷ ತೊರೆದು ಎಂಆರ್ ಮಂಜುನಾಥ್ ಉಪಸ್ಥಿತಿಯಲ್ಲಿ ಬೆಂಬಲಿಗರ ಜೊತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ ಚಿನ್ನಸ್ವಾಮಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿ ಎಂ.ಆರ್. ಮಂಜುನಾಥ್ ಐದು ವರ್ಷಗಳಿಂದ ಹನೂರು ಜನರ ಕಷ್ಟಸುಖಕ್ಕೆ ಸ್ಪಂದಿಸುತ್ತಿದ್ದು, ಅಂತವರಿಗೆ ಬೆಂಬಲ ವ್ಯಕ್ತಪಡಿಸಿದರೆ ಮುಂದಿನ ದಿನಗಳಲ್ಲಿ ಹನೂರು ಅಭಿವೃದ್ಧಿ ಹಿತದೃಷ್ಟಿಯಿಂದ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದರು
ಅಭ್ಯರ್ಥಿ ಎಂ ಆರ್ ಮಂಜುನಾಥ್ ಮಾತನಾಡಿ, ಚಿನ್ನಸ್ವಾಮಿ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಈ ಭಾಗದಲ್ಲಿ ಅನುಕೂಲದಾಯಕವಾಗಿದೆ. ಈ ಬಾರಿ ಕ್ಷೇತ್ರದ ಎಲ್ಲೆಡೆ ಜನತೆಯಿಂದ ಸ್ಪಂದನೆ ನನಗೆ ಒಳಿತಾಗಲಿದೆ ಎಂದರು.
ಈ ಬಾರಿ ಹನೂರು ಕ್ಷೇತ್ರದ ಜನತೆ ಎರಡು ಕುಟುಂಬದ ರಾಜಕಾರಣದಿಂದ ಬೇಸತ್ತಿದ್ದು, ಈ ಬಾರಿ ಬದಲಾವಣೆ ಬಯಸಿರುವುದರಿಂದ ನನಗೆ ಒಂದು ಬಾರಿ ಅವಕಾಶ ಮಾಡಿಕೊಡಿ. ನಿಮ್ಮ ಸೇವೆ ಮಾಡಲು ಕಳೆದ ಐದು ವರ್ಷಗಳಿಂದ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ, ಎಲ್ಲಾ ಸಮುದಾಯಗಳ ಜನತೆಯನ್ನು ವಿಶ್ವಾಸಕ್ಕೆ ಪಡೆದು ಶ್ರಮಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿಯೂ ಕೇಂದ್ರ ಸ್ಥಾನದಲ್ಲಿದ್ದು ಹನೂರು ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿ ಮತಯಾಚನೆ ಮಾಡಿದರು.
ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಜೆ ಶಿವಮೂರ್ತಿ, ಶಾಗ್ಯ ಬಾಬಣ್ಣ , ಮೈಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ರಾಜುಗೌಡ, ಬಸಪ್ಪನ ದೊಡ್ಡಿ ಬಸವರಾಜ್ ಉಪಸ್ಥಿತರಿದ್ದರು
ವಲಸಿಗರಿಂದ ಇಮ್ಮಡಿಯಾದ ಆತ್ಮವಿಶ್ವಾಸ
ಎ.ಮಂಜು
ಬೆಂಗಳೂರು(ಏ.23): ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ನಲ್ಲಿ ಟಿಕೆಟ್ ಸಿಗದೆ ಬೇಸರಗೊಂಡ ಪ್ರಮುಖ ಮುಖಂಡರು ಜೆಡಿಎಸ್ ಸೇರ್ಪಡೆಗೊಂಡಿರುವುದರಿಂದ ಪಕ್ಷದ ವರಿಷ್ಠರಿಗೆ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಆತ್ಮವಿಶ್ವಾಸ ಇಮ್ಮಡಿಗೊಂಡಿದೆ.
ರಾಷ್ಟ್ರೀಯ ಪಕ್ಷಗಳಿಂದ ಅಭ್ಯರ್ಥಿ ಘೋಷಣೆಯಾದ ಬಳಿಕ ಹಲವು ಮಂದಿ ಅಸಮಾಧಾನಗೊಂಡು ಜೆಡಿಎಸ್ ಸೇರಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ. ಪಕ್ಷ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನ ಗಳಿಸುವ ವಿಶ್ವಾಸ ಹೆಚ್ಚಾಗಿದೆ. ಪ್ರಮುಖ ನಾಯಕರೇ ಪಕ್ಷಕ್ಕೆ ಬಂದಿರುವುದರಿಂದ ರಾಷ್ಟ್ರೀಯ ಪಕ್ಷಗಳಿಗೆ ಸಡ್ಡು ಹೊಡೆಯುವ ನಂಬಿಕೆ ಮೂಡಿದೆ. ಹೀಗಾಗಿ ಬಿಜೆಪಿ-ಕಾಂಗ್ರೆಸ್‌ಗೆ ಸರಿಸಾಟಿಯಾಗಿ ಸ್ಪರ್ಧೆವೊಡ್ಡಲು ಜೆಡಿಎಸ್ ಸಜ್ಜಾಗಿದೆ.
ಕುಮಾರಸ್ವಾಮಿ ಸಿಎಂ ಆದರೆ ಮಾತ್ರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ: ಅರಿಕೆರೆ ಮಂಜುನಾಥಗೌಡ
ಕಾಂಗ್ರೆಸ್‌ನಿಂದ ರಘು ಆಚಾರ್, ಮನೋಹರ್ ತಹಸೀಲ್ದಾರ್, ಅನಿಲ್ ಲಾಡ್, ಬಿಜೆಪಿಯಿಂದ ಆಯನೂರು ಮಂಜುನಾಥ್, ಎ.ಬಿ.ಮಾಲಕರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಎನ್.ಆರ್.ಸಂತೋಷ್, ಎಂ.ಪಿ.ಕುಮಾರಸ್ವಾಮಿ, ಸೂರ್ಯಕಾಂತ ನಾಗಮಾರಪಳ್ಳಿ, ಎ.ಮಂಜು ಜೆಡಿಎಸ್ ಸೇರಿದ ಪ್ರಮುಖರಾಗಿದ್ದಾರೆ. ಇನ್ನುಳಿದಂತೆ 20ಕ್ಕೂ ಹೆಚ್ಚು ನಾಯಕರು ಪಕ್ಷಕ್ಕೆ ಸೇರ್ಪಡೆಗೊಂಡು ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಕುಮಾರಸ್ವಾಮಿಗೆ ಹೆಗಲು ನೀಡಲು ಮುಂದಾಗಿದ್ದಾರೆ. ಇನ್ನು, ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಹೋಗಿದ್ದ ವೈ.ಎಸ್.ವಿ.ದತ್ತ ಅವರು ಸಹ ಅಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡು ವಾಪಸ್ ಜೆಡಿಎಸ್‌ಗೆ ಬಂದಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕೃಪಾಕಟಾಕ್ಷದಿಂದಾಗಿ ಅವರಿಗೂ ಟಿಕೆಟ್ ಲಭಿಸಿದೆ. ಎಲ್ಲಾ ನಾಯಕರು ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಪ್ರತಿಸ್ಪರ್ಧೆ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.
ಅನ್ಯ ಪಕ್ಷಗಳಿಂದ ಬಂದಿರುವ ಮುಖಂಡರಿಗೆ ಅವರದೇ ಆದ ವರ್ಚಸ್ಸು ಇದೆ. ಹೀಗಾಗಿ ಅವರಿಗೆ ಹೆಚ್ಚಿನ ಮಣೆ ಹಾಕಲಾಗಿದೆ. ಅದನ್ನು ಬಳಸಿಕೊಂಡು ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ತಂತ್ರವನ್ನು ಕುಮಾರಸ್ವಾಮಿ ಹೆಣೆದಿದ್ದಾರೆ. ಸ್ವಂತ ಬಲದ ಸರ್ಕಾರ ರಚನೆಗೆ ತೀವ್ರ ಕಸರತ್ತು ನಡೆಸುತ್ತಿರುವ ಜೆಡಿಎಸ್, ವಲಸೆ ಬಂದ ನಾಯಕರು ಜಯಗಳಿಸುವ ವಿಶ್ವಾಸ ಹೊಂದಿದೆ ಎನ್ನಲಾಗಿದೆ.
ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಜೆಡಿಎಸ್, ಕೆಲವು ಕ್ಷೇತ್ರಗಳನ್ನು ಮಾತ್ರ ಅಂತಿಮಗೊಳಿಸಿತ್ತು. ಪ್ರಮುಖ ನಾಯಕರು ಬರುವ ನಿರೀಕ್ಷೆಯಲ್ಲಿದ್ದ ಕ್ಷೇತ್ರಗಳನ್ನು ಅಂತಿಮಗೊಳಿಸಿರಲಿಲ್ಲ. ಪ್ರಚಾರ ಕಾರ್ಯವನ್ನೂ ಮೊದಲೇ ಆರಂಭಿಸಿ ಪಂಚರತ್ನ ರಥಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿತು. ಮಿಷನ್ 123 ಅಡಿಯಲ್ಲಿ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡರು. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ 2-3 ಸುತ್ತಿನ ಪ್ರವಾಸ ಮುಗಿಸಿದರು. ಈ ವೇಳೆ ಜೆಡಿಎಸ್ ಪರ ಸಿಕ್ಕ ಜನ ಬೆಂಬಲ ಗಮನಿಸಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಇದೀಗ ರಾಷ್ಟ್ರೀಯ ಪಕ್ಷಗಳಿಂದ ಪ್ರಮುಖ ನಾಯಕರು ಆಗಮಿಸಿರುವುದರಿಂದ ಅವರ ವಿಶ್ವಾಸಕ್ಕೆ ಮತ್ತಷ್ಟುಬಲ ಬಂದಂತಾಗಿದೆ. ಜೆಡಿಎಸ್ ಹೆಚ್ಚಿನ ಸ್ಥಾನ ಗಳಿಸುವ ನಂಬಿಕೆಯು ಅವರಲ್ಲಿ ಹೆಚ್ಚಾಗಿದೆ. ಇದೇ ನಿಟ್ಟಿನಲ್ಲಿ ಕುಮಾರಸ್ವಾಮಿ ಕಾರ್ಯೋನ್ಮುಖವಾಗಿದ್ದಾರೆ. ಜನರ ಬಳಿಗೆ ಹೋಗಿ ಮತಯಾಚನೆ ಮಾಡುತ್ತಿದ್ದಾರೆ.