ಹೃದಯ ವಿದ್ರಾವಕ ಘಟನೆ: ಆಂಬ್ಯುಲೆನ್ಸ್ ಸಿಗದೆ ಬೈಕ್‌ನಲ್ಲಿ ತಂದೆಯ ಶವವನ್ನ ಸಾಗಿಸಿದ ಮಕ್ಕಳು

By Govindaraj S  |  First Published Sep 18, 2024, 4:43 PM IST

ಮೃತದೇಹವನ್ನು ಸಾಗಿಸಲು ಆಂಬ್ಯುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ಅಪ್ಪನ ಶವವನ್ನ ಮಕ್ಕಳಿಬ್ಬರು ಬೈಕ್ ನಲ್ಲಿ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಜರುಗಿದೆ.


ತುಮಕೂರು (ಸೆ.18): ಮೃತದೇಹವನ್ನು ಸಾಗಿಸಲು ಆಂಬ್ಯುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ಅಪ್ಪನ ಶವವನ್ನ ಮಕ್ಕಳಿಬ್ಬರು ಬೈಕ್ ನಲ್ಲಿ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಜರುಗಿದೆ.

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಮಕ್ಕಳ ಹೊನ್ನೊರಪ್ಪ ನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಮಾರ್ಗಮದ್ಯದಲ್ಲೇ ಹೊನ್ನೂರಪ್ಪನ ಜೀವ ಹೋಗಿದೆ. 

Tap to resize

Latest Videos

undefined

ಮೃತ ಶರೀರವನ್ನು ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕಿಸಿದ್ದಾರೆ. ಆಂಬ್ಯುಲೆನ್ಸ್ ನಲ್ಲಿ ಶವ ಸಾಗಿಸಲು ಅವಕಾಶವಿಲ್ಲ ಎಂದು ಸಬೂಬ್ ನೀಡಿದ್ದಾರೆ.  ಕೈಯಲ್ಲಿ ಹಣವಿಲ್ಲದ ಹೊನ್ನೂರಪ್ಪ ಮಕ್ಕಳು ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಹೋಗಿದ್ದಾರೆ.

ಗದಗ ಜನತಾ ದರ್ಶನದಲ್ಲಿ ಹಿರಿಯಜ್ಜಿಯ ಗತ್ತು: ಬಲಗೈನಿಂದ ಹ್ಯಾಂಡ್ ಶೇಕ್ ಮಾಡು ಅಂತಾ ಡಿಸಿಗೆ ಗದರಿದ ಅಜ್ಜಿ!

ಪಾವಗಡ ತಾಲೂಕು ಹಿಂದುಳಿದ ಪ್ರದೇಶವಾಗಿದ್ದು, ಇಂತಹ ಹೃದಯವಿದ್ರಾವಕ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ಒಂದು ರೀತಿ ಆಡಳಿತದ ನಿರ್ಲಕ್ಷಕ್ಕೆ ಹಿಡಿದ ಕೈಗಡಿಯಾಗಿದೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವರುಗಳು ಇಂತಹ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬೇಕಾಗಿದೆ.

click me!