ತುಮಕೂರಿಂದ ಸ್ಪರ್ಧೆ ವಿಧಿ ಲಿಖಿತ: ವಿ.ಸೋಮಣ್ಣ

By Kannadaprabha NewsFirst Published Mar 16, 2024, 10:43 AM IST
Highlights

ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ, ಅದು ವಿಧಿಲಿಖಿತ. ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದ್ದಾರೆ.

 ತುಮಕೂರು :  ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ, ಅದು ವಿಧಿಲಿಖಿತ. ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೊಡ್ಡ ಪಕ್ಷದಲ್ಲಿ ಭಿನ್ನಮತ ಸಹಜ. ಅದನ್ನು ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತದೆ. ನಮ್ಮದೆನಿದ್ದರೂ ಮೂರನೇ ಬಾರಿಗೆಪ್ರಧಾನಿಯಾಗಬೇಕು. ಆ ನಿಟ್ಟಿನಲ್ಲಿ ತುಮಕೂರಿನ ಕೊಡುಗೆ ಇರಬೇಕು ಎಂಬುದಾಗಿದೆ. ಇದನ್ನು ಬಿಟ್ಟು ಬೇರೆನಿಲ್ಲ ಎಂದರು.

ತುಮಕೂರಿಗೂ ನನಗೂ ಸುಮಾರು 50 ವರ್ಷಗಳ ಅವಿನಾಭಾವ ಸಂಬಂಧ ಇದೆ. ಈ ಭಾಗದ ಜನ ಎಲ್ಲವನ್ನು ತೀರ್ಮಾನ ಮಾಡುತ್ತಾರೆ. ಸಿದ್ದಗಂಗಾ ಶ್ರೀಗಳು ಮತ್ತು ಬಾಲ ಗಂಗಾಧರನಾಥ ಶ್ರೀಗಳ ಆಶೀರ್ವಾದ ನನ್ನ ಮೇಲಿದೆ. ಮತದಾರರು ನನ್ನ ಪರವಾಗಿ ನಿಲ್ಲಲಿದ್ದಾರೆ ಎಂಬ ವಿಶ್ವಾಸವಿದೆ. ಮಾಜಿ ಸಚಿವ ಬಿ.ಸಿ.ನಾಗೇಶ ಮನೆಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿ, ತಿಪಟೂರಿನ ಕರೆಗೋಡಿ ರಂಗಾಪುರ ಮಠಕ್ಕೂ ಭೇಟಿ ನೀಡಿ ಮಾತುಕತೆ ನಡೆಸಲಿದ್ದೇನೆ ಎಂದು ವಿ.ಸೋಮಣ್ಣ ನುಡಿದರು.

ತುಮಕೂರು ಜಿಲ್ಲೆ ಅತಿವೇಗವಾಗಿ ಬೆಳೆಯತ್ತಿರುವ ಜಿಲ್ಲೆ. ಇಲ್ಲಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳು ದೊರೆಯ ಬೇಕು ಎಂಬುದು ನಮ್ಮ ದೂರದೃಷ್ಟಿ. ಬೆಂಗಳೂರಿನಿಂದ ತುಮಕೂರಿನವರೆಗೆ ಪ್ಲೈ ಓವರ್ ಹಾಗೆಯೇ ಮೆಟ್ರೋ ರೈಲು ಬರಬೇಕೆಂಬ ಕನಸಿನ ಜೊತೆಗೆ, ತುಮಕೂರನ್ನು ಮತ್ತೊಂದು ವಾರಣಾಸಿ ಮಾಡಬೇಕೆಂಬ ಕನಸಿದೆ. ಅವಕಾಶ ಸಿಕ್ಕರೆ ಈ ಕನಸನ್ನು ನನಸು ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಬಿ. ಸುರೇಶ್‌ಗೌಡ, ಜ್ಯೋತಿಗಣೇಶ್, ರವಿಶಂಕರ್ ಹೆಬ್ಬಾಕ, ಎಂ.ಡಿ. ಲಕ್ಷ್ಮೀನಾರಾಯಣ್,ಶಿವಪ್ರಸಾದ್,ಮಧುಗಿರಿ ಮಾಜಿ ಶಾಸಕ ವೀರಭದ್ರಯ್ಯ,ಗುಬ್ಬಿ ಹೊನ್ನಗಿರಿಗೌಡ, ರೈತಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಬಾವಿಕಟ್ಟೆ ನಾಗಣ್ಣ, ರಾಜಪ್ಪ, ಡಾ. ಪರಮೇಶ್, ರುದ್ರೇಶ ಮತ್ತಿತರರು ಉಪಸ್ಥಿತರಿದ್ದರು.

Bಮಾಧುಸ್ವಾಮಿ ಕೃತಜ್ಞರಾಗಿರಲಿ

ಲೋಕಸಭೆಯಲ್ಲಿ ಎರಡು ಸೀಟು ಇದ್ದಾಗಲೂ ತುಮಕೂರಿನಿಂದ ಬಿಜೆಪಿ ಅಭ್ಯರ್ಥಿ ಗೆದ್ದಿದ್ದಾರೆ. ಮಲ್ಲಿಕಾರ್ಜುನಯ್ಯ, ಜಿ.ಎಸ್. ಬಸವರಾಜು ಅವರು ನಿರಂತರವಾಗಿ ಪಕ್ಷದಿಂದ ಗೆದಿದ್ದಾರೆ. ಹಾಗಾಗಿ ಈ ಬಾರಿಯೂ ಗೆಲುವು ನಮ್ಮದೆ.ಜೆ.ಸಿ ಮಾಧು ಸ್ವಾಮಿ ಅವರಿಗೆ ಪಕ್ಷ ಎಲ್ಲವನ್ನು ನೀಡಿದೆ. ಶಾಸಕರನ್ನಾಗಿ ಮಾಡಿ, ಸಚಿವರನ್ನಾಗಿಯೂ ಮಾಡಿದೆ. ಅವರು ಪಕ್ಷಕ್ಕೆ ಕೃತಜ್ಞರಾಗಿರಬೇಕು.

 ಬಿ.ಸುರೇಶಗೌಡ, ಶಾಸಕ 

 ಮನೆಗೆ ಈಗ ಬರಬೇಡಿ ಎಂದ ಮಾಧುಸ್ವಾಮಿ:

ಮಾಜಿ ಸಚಿವ ಮಾಧುಸ್ವಾಮಿ ಅವರನ್ನು ಭೇಟಿ ಮಾಡಲು ನಿನ್ನೆ ದೂರವಾಣಿ ಕರೆ ಮಾಡಿದ್ದೆ. ಆದರೆ ಅವರು ಈಗ ಬರುವುದು ಬೇಡ ಎಂದು ಸ್ವಲ್ಪ ಬೇಸರದಿಂದಲೇ ಮಾತನಾಡಿದರು. ಇನ್ನು 3-4 ದಿನ ಕಳೆದ ಬಳಿಕ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಎಲ್ಲವೂ ಸರಿ ಹೋಗಲಿದೆ. ಪಕ್ಷದ ನಾಯಕರು ಎಲ್ಲವನ್ನೂ ಸರಿ ಮಾಡಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು, ಮುಖಂಡರು ಎಲ್ಲರೂ ಒಟ್ಟಾಗಿ ಸೇರಿ ಚುನಾವಣೆ ಎದುರಿಸುತ್ತೇವೆ. ಮತ್ತೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವ ಸಂಕಲ್ಪ ನಮ್ಮೆಲ್ಲರದ್ದಾಗಿದೆ ಎಂದರು.

click me!