ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸೋಣ: ಬಿ.ಪಿ ದೇವಮಾನೆ

By Govindaraj S  |  First Published Jun 12, 2022, 11:29 PM IST

ಇತ್ತೀಚಿನ ದಿನಗಳಲ್ಲಿ ಬಾಲಕಾರ್ಮಿಕ ಪದ್ಧತಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸೋಣ ಎಂದು  ನ್ಯಾಯಾಧೀಶರಾದ ಶ್ರೀ ಬಿ.ಪಿ.ದೇವಮಾನೆ ಅವರು ತಿಳಿಸಿದರು.


ವರದಿ: ದೀಪಕ್, ಏಷಿಯಾನೆಟ್ ಸುವರ್ಣ ನ್ಯೂಸ್, ಕೋಲಾರ

ಕೋಲಾರ (ಜೂ.12): ಇತ್ತೀಚಿನ ದಿನಗಳಲ್ಲಿ ಬಾಲಕಾರ್ಮಿಕ ಪದ್ಧತಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸೋಣ ಎಂದು  ಪೋಕ್ಸೋ ಪ್ರಕರಣಗಳ ವಿಶೇಷ ಶೀಘ್ರ ಗತಿ ನ್ಯಾಯಾಲಯದ ಗೌರವಾನ್ವಿತ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಿ.ಪಿ.ದೇವಮಾನೆ ಅವರು ತಿಳಿಸಿದರು. 

Tap to resize

Latest Videos

ಇಂದು ನಗರದ ಮಹಾತ್ಮ ಗಾಂಧಿ ಚೌಕದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ವಕೀಲರ ಸಂಘ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕೋಲಾರ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಜಾಥಾಗೆ  ಚಾಲನೆ ನೀಡಿ ಮಾತಾಡಿದ ಅವರು ಒಂದು ದೇಶದ ನಿಜವಾದ ಆಸ್ತಿ ಎಂದರೆ ಆ ದೇಶದ ಆರೋಗ್ಯವಂತ,  ಪ್ರಜ್ಞಾವಂತ ನಾಗರಿಕರು ಆಗಿರುತ್ತಾರೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. 

ಬದುಕಿರುವಾಗಲೇ ‘ಗುಬ್ಬಿ ಶಾಸಕ ಶ್ರೀನಿವಾಸ್ ತಿಥಿ ಕಾರ್ಡ್’ ವೈರಲ್

ಬಾಲ್ಯ ವ್ಯವಸ್ಥೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಉತ್ತಮ ಮಾರ್ಗದರ್ಶನ ನೀಡಿ ಪ್ರಜ್ಞಾವಂತ ಪ್ರಜೆಯನ್ನಾಗಿ ನಿರ್ಮಾಣ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ.  ಬಾಲ್ಯದಲ್ಲಿಯೇ ಮಕ್ಕಳು ಕಾರ್ಮಿಕರಾಗಿ ದುಡಿಯುವುದು, ದುಶ್ಚಟಗಳಿಗೆ ಗಮನ ಹರಿಸದಂತೆ ನೋಡಿಕೊಂಡು ದೇಶಕ್ಕೆ ಉತ್ತಮ ಪ್ರಜೆಗಳನ್ನು  ನೀಡುವ ಕೆಲಸ  ಪ್ರತಿಯೊಬ್ಬ ಸಾರ್ವಜನಿಕರ  ಕರ್ತವ್ಯವಾಗಿರುತ್ತದೆ ಎಂದು ಹೇಳಿದರು. ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬ ನಾಗರಿಕನು ಸಹ  ಬಾಲಕಾರ್ಮಿಕ ವಿರೋಧಿಯಾಗಿ ಕಾರ್ಯನಿರ್ವಹಿಸಬೇಕು. ಬಾಲ ಕಾರ್ಮಿಕ ವಿರೋಧಿ ಚಟುವಟಿಕೆಗಳನ್ನು ಒಂದು ದಿನಕ್ಕೆ ಸೀಮಿತ ಮಾಡಬಾರದು.  

ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

ಮುಂದಿನ ತಿಂಗಳಿನಲ್ಲಿ  ಕಾರ್ಮಿಕ ಕಾರ್ಖಾನೆಗಳಿಗೆ, ಗ್ಯಾರೇಜ್, ಹೋಟೆಲ್, ಡಾಬಾ, ಬೇಕರಿ ಇನ್ನು ಮುಂತಾದ ಸ್ಥಳಗಳಿಗೆ ಭೇಟಿ ನೀಡಿ  ತನಿಖೆ ಮಾಡಿ ಬಾಲ  ಕಾರ್ಮಿಕರು ಕಂಡು ಬಂದಲ್ಲಿ  ಸಂಬಂಧಪಟ್ಟವರಿಗೆ  ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸುನಿಲ್ ಎಸ್.ಹೊಸಮನಿ,  ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶ್ರೀಕಾಂತ್ ಬಿ ಪಾಟೀಲ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶ್ರೀಧರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

click me!