ಯತ್ನಾಳರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿಸಿ: ಸತೀಶ್ ಚಂದ್ರ ಕುಲಕರ್ಣಿ ಆಗ್ರಹ

Published : May 15, 2023, 10:54 PM IST
ಯತ್ನಾಳರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿಸಿ: ಸತೀಶ್ ಚಂದ್ರ ಕುಲಕರ್ಣಿ ಆಗ್ರಹ

ಸಾರಾಂಶ

ವಿಜಯಪುರ ಜಿಲ್ಲೆಯ 8 ಸ್ಥಾನಗಳಲ್ಲಿ ಬಿಜೆಪಿಯ ಏಕೈಕ ಶಾಸಕರಾಗಿ ಆಯ್ಕೆಯಾಗಿರುವ ಪ್ರಬಲ ಹಿಂದುತ್ವ ಪ್ರತಿಪಾದಕ ಯತ್ನಾಳರ ಅವರನ್ನು ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಹಕಾರ್ಯದರ್ಶಿ, ಇಂಡಿ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಹಾಗೂ ಖ್ಯಾತ ವಕೀಲ ಸತೀಶಚಂದ್ರ ಕುಲಕರ್ಣಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಇಂಡಿ (ಮೇ.15) : ವಿಜಯಪುರ ಜಿಲ್ಲೆಯ 8 ಸ್ಥಾನಗಳಲ್ಲಿ ಬಿಜೆಪಿಯ ಏಕೈಕ ಶಾಸಕರಾಗಿ ಆಯ್ಕೆಯಾಗಿರುವ ಪ್ರಬಲ ಹಿಂದುತ್ವ ಪ್ರತಿಪಾದಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ ಯತ್ನಾಳರ ಅವರನ್ನು ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಹಕಾರ್ಯದರ್ಶಿ, ಇಂಡಿ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಹಾಗೂ ಖ್ಯಾತ ವಕೀಲ ಸತೀಶಚಂದ್ರ ಕುಲಕರ್ಣಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಯತ್ನಾಳರವರು ಅಪಾರ ಅನುಭವ ಹಾಗೂ ಅವರ ಪ್ರಖರ ಮಾತಿನ ಶೈಲಿ ಆಡಳಿತ ಪಕ್ಷವನ್ನು ಕಟ್ಟಿಹಾಕುವುದಲ್ಲದೇ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಯ ಗುರುತರ ಸಂದರ್ಭದಲ್ಲಿ ಅಪಾರ ಕಾರ್ಯಕರ್ತರ ಪಡೆಯನ್ನು ಹೊಂದಿರುವುದಲ್ಲದೇ ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಹೋಗುವ ಸಾಮರ್ಥ್ಯ ಹಾಗೂ ರಾಜ್ಯಾದ್ಯಂತ ಪ್ರತಿ ಹಿಂದುವಿನ ಮನದಲ್ಲಿ ಶಾಶ್ವತವಾಗಿ ನೆಲೆಸಿರುವ ಹಿಂದೂ ಫೈರ್‌ಬ್ರ್ಯಾಂಡ್‌ ಎಂದೇ ಪ್ರಖ್ಯಾತರಾದ ಯತ್ನಾಳರನ್ನು ವಿಪಕ್ಷ ನಾಯಕರನ್ನಾಗಿ ನೇಮಿಸುವುದು ತುಂಬಾ ಸೂಕ್ತವಾಗಿದೆ ಎಂದು ಆಗ್ರಹಿಸಿದರು.

ಪಾಕ್ ಪರ ಘೋಷಣೆ: ಬೆಳಗಾವಿಯಲ್ಲಿ ಮತ್ತೊಂದು ವಿಡಿಯೋ ವೈರಲ್‌ , ಖಾಕಿಗೆ ತಲೆನೋವು!...

ಕೇರಳ ಸ್ಟೋರಿ: ಉಚಿತ ವೀಕ್ಷಣೆಗೆ ಯತ್ನಾಳ್‌ ವ್ಯವಸ್ಥೆ

ದೇಶದಾದ್ಯಂತ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ (The kerala story) ಚಲನಚಿತ್ರವನ್ನು ಎಲ್ಲ ಹಿಂದೂಗಳು ಒಟ್ಟಾಗಿ ಕುಳಿತುಕೊಂಡು ವೀಕ್ಷಣೆ ಮಾಡಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagowda patil yatnal) ಅವರು ನಗರದಲ್ಲಿ ವ್ಯವಸ್ಥೆ ಮಾಡಿದ್ದಾರೆ.

ಇಲ್ಲಿನ ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸ ಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡಿದ್ದಾರೆ.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!