ಮಕ್ಕಳ ರಕ್ಷಣೆಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದು: ಡಿಸಿ ಮುಗಿಲನ್

By Kannadaprabha News  |  First Published Aug 18, 2022, 9:04 AM IST

ಬಾಲ ಕಾರ್ಮಿಕತೆ, ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ದೌರ್ಜನ್ಯ ಸಾಮಾಜಿಕ ಪಿಡುಗಾಗಿದ್ದು, ಅವುಗಳನ್ನು ತೊಡೆದು ಹಾಕುವಲ್ಲಿ ಹಾಗೂ ಮಕ್ಕಳ ರಕ್ಷಣೆಯ ವಿಚಾರದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹೇಳಿದರು.


ಕಾರವಾರ (ಆ.18) : ಬಾಲ ಕಾರ್ಮಿಕತೆ, ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ದೌರ್ಜನ್ಯ ಸಾಮಾಜಿಕ ಪಿಡುಗಾಗಿದ್ದು, ಅವುಗಳನ್ನು ತೊಡೆದು ಹಾಕುವಲ್ಲಿ ಹಾಗೂ ಮಕ್ಕಳ ರಕ್ಷಣೆಯ ವಿಚಾರದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹೇಳಿದರು. ನಗರದ ಜಿಲ್ಲಾ ರಂಗಮಂದಿರದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ತಿದ್ದುಪಡಿ 2016, ಪೊಕ್ಸೋ ಕಾಯ್ದೆ-2012 ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ವಿವಿಧ ಕಾಯ್ದೆಗಳ, ನಿಯಮಗಳ ಕುರಿತು ಭಾಗಿದಾರರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಹಾಗೂ ಮಕ್ಕಳಸ್ನೇಹಿ ಪೊಲೀಸ್‌ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯ, ಶೋಷಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಾಮಾಜಿಕ ಪಿಡುಗುಗಳನ್ನು ತೊಡೆದುಹಾಕಲೆಂದು, ಇತಿಹಾಸದ ಸಂಪ್ರದಾಯದ ಹೆಸರಲ್ಲಿ ನಡೆಸಲಾಗುತ್ತಿರುವ ಶೋಷಣೆಯನ್ನು ತಡೆಗಟ್ಟುವ ಸದಾಶಯದಿಂದ ಮಾನವ ಕಳ್ಳಸಾಗಾಣಿಕೆ ತಡೆಗಟ್ಟಲು ಕಾಯ್ದೆ, ಮಕ್ಕಳ ರಕ್ಷಣೆಯ ಸಲುವಾಗಿ ವಿವಿಧ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ನಿಮ್ಮ ಮಕ್ಕಳನ್ನು ಆನ್‌ಲೈನ್ ಕ್ಯಾಟ್ ಫಿಶಿಂಗ್‌ನಿಂದ ರಕ್ಷಿಸಿಕೊಳ್ಳುವುದು ಹೇಗೆ?

Tap to resize

Latest Videos

ನಿಮ್ಮ ಮಕ್ಕಳ(Childrens) ಭವಿಷ್ಯ, ರಕ್ಷಣೆ(Protect)ಯ ವಿಚಾರದಲ್ಲಿ ಹೇಗೆ ಚಿಂತಿಸುತ್ತೀರೋ ಹಾಗೇ ಸಮಾಜದಲ್ಲಿ ಶೋಷಣೆ, ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಭವಿಷ್ಯ, ರಕ್ಷಣೆ, ಹಕ್ಕುಗಳ ಕುರಿತು ಚಿಂತಿಸಬೇಕು. ಪ್ರತಿಯೊಬ್ಬ ಅಧಿಕಾರಿಯೂ ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಮಕ್ಕಳ ಭವಿಷ್ಯ ಉಜ್ವಲವಾಗಿ ರೂಪುಗೊಳ್ಳಲು ಸಹಕರಿಸಬೇಕು. ಈ ಕಾಯ್ದೆಗಳ ಸಂಕ್ಷಿಪ್ತ ವಿವರ ಇರುವ ಪ್ರತಿಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾರ್ಯವನ್ನು ಪೊಲೀಸ್‌ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯವರು ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಸುಮನ್‌ ಪೆನ್ನೇಕರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಕೆಲಸದ ಒತ್ತಡದ ನಡುವೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಣೆಯನ್ನು ಪೊಲೀಸ್‌ ಇಲಾಖೆ, ಸಿಬ್ಬಂದಿ ಮಾಡುತ್ತಿದ್ದಾರೆ. ವಿವಿಧ ಸಹಾಯವಾಣಿ ಮೂಲಕ ಮಕ್ಕಳ, ಯುವಕ-ಯುವತಿಯರ, ವೃದ್ಧರ ರಕ್ಷಣೆಗೆ ಬೇಕಾದ ಅಗತ್ಯ ಕ್ರಮ ವಹಿಸಲಾಗುತ್ತಿದೆ. ನಗರ, ಗ್ರಾಮೀಣ ಪ್ರದೇಶದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಅರಿವು ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಇಂದು ಮಕ್ಕಳಸ್ನೇಹಿ ಪೊಲೀಸ್‌ ಪುಸ್ತಕ ಬಿಡುಗಡೆಗೊಳಿಸಿ ಅದನ್ನು ಎಲ್ಲ ಅಧಿಕಾರಿಗಳಿಗೂ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ವಿವರಿಸಿದರು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಡಿ.ಎಸ್‌. ವಿಜಯಕುಮಾರ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಅವರ ಶೋಷಣೆ ನಿಲ್ಲಿಸಲು ನಿರಂತರವಾಗಿ ಶ್ರಮಿಸುತ್ತಿರುವ ಮಕ್ಕಳ ವಿಶೇಷ ಪೊಲೀಸ್‌ ಘಟಕದ ರುದ್ರೇಶ್‌ ಮೇತ್ರಾಣಿ ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್‌ ಹಬೀಬ್‌ಸಾಬ್‌ ಮುಲ್ಲಾ ಅವರನ್ನು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್‌ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.

 

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸೋಣ: ಬಿ.ಪಿ ದೇವಮಾನೆ

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಗಣೇಶ, ಜಿಪಂ ಸಿಇಒ ಪ್ರಿಯಾಂಗಾ ಎಂ., ಹಿರಿಯ ಸಿವಿಲ್‌ ನ್ಯಾಯಾಧೀಶೆ ರೇಣುಕಾ ರಾಯ್ಕರ, ಕೇಂದ್ರ ಸರ್ಕಾರದ ಕಾರ್ಯದರ್ಶಿ ಹೇಮಾ ನಾಯ್ಕ, ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ, ಬೆಳಗಾವಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ವೆಂಕಟೇಶ ಸಿಂದಿಗಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶರದ್‌ ನಾಯಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಡಿಡಿಪಿಐ ಈಶ್ವರ ನಾಯ್ಕ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠ ಎಸ್‌. ಬದರಿನಾಥ, ಮಕ್ಕಳ ವಿಶೇಷ ಪೊಲೀಸ್‌ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ, ಡಿಎಸ್‌ಪಿ ವೆಲೆಂಟಿನ್‌ ಡಿಸೋಜಾ ಇದ್ದರು.

click me!