ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರ ಸರಿಯಾದ ಸಮಯದಲ್ಲಿ ತನ್ನ ಜವಾಬ್ದಾರಿ ತೋರದಿರುವ ಪರಿಣಾಮವಾಗಿ ಇಂದು ರಾಜ್ಯಕ್ಕೆ ಕುಡಿಯುವ ನೀರಿಗೆ ಅಭಾವ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿಕಾರಿದರು.
ನಂಜನಗೂಡು : ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರ ಸರಿಯಾದ ಸಮಯದಲ್ಲಿ ತನ್ನ ಜವಾಬ್ದಾರಿ ತೋರದಿರುವ ಪರಿಣಾಮವಾಗಿ ಇಂದು ರಾಜ್ಯಕ್ಕೆ ಕುಡಿಯುವ ನೀರಿಗೆ ಅಭಾವ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿಕಾರಿದರು.
ಪಟ್ಟಣದ ಶ್ರೀಕಂಠೇಶ್ವರಸ್ವಾಮಿ ದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗದೇ ಜಲಾಶಯಗಳು ಭರ್ತಿಯಾಗಿಲ್ಲ. ಬರ ಪರಿಸ್ಥಿತಿ ಉಲ್ಬಣಗೊಳ್ಳುವ ಸಂದರ್ಭದಲ್ಲಿಯೇ ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರ ಎಚ್ಚರಗೊಳ್ಳಬೇಕಾಗಿತ್ತು. ಗ್ಯಾರಂಟಿ ಯೋಜನೆಗಳಲ್ಲಿ ಮುಳುಗಿ ಹೋಗಿದ್ದ ರಾಜ್ಯ ಸರ್ಕಾರ ಮೈಮರೆತ ಫಲವಾಗಿ ಟ್ರಿಬ್ಯುನಲ್ ಪ್ರತಿಕೂಲ ಆದೇಶ ಹೊರಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
undefined
ಬರ ಪರಿಸ್ಥಿತಿ ತಲೆ ದೋರಿರುವ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರವಾಗಿ ಸರ್ಕಾರ ವಕಾಲತ್ತು ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ವಾಸ್ತವ ಪರಿಸ್ಥಿತಿಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ರಾಜ್ಯದ ಜನರ ಹಿತ ಕಾಯಬೇಕಿದೆ ಎಂದರು.
ಕರ್ನಾಟಕ ಬಂದ್‌ಗೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ನಂಜನಗೂಡಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದ್ ಆಚರಿಸಲು ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೆ. ಅಂತೆಯೇ ಬಂದ್ ಶಾಂತಿಯುತವಾಗಿ ನಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವುದರಲ್ಲಿ ಅನುಮಾನವೇ ಇಲ್ಲ ಎಂದರು.
ಇನ್ನು ನಂಜನಗೂಡು ಕ್ಷೇತ್ರದಲ್ಲಿ ಬರ ಪರಿಸ್ಥಿತಿಯಲ್ಲೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗದಂತೆ ನನ್ನ ಅವಧಿಯಲ್ಲಿ ನುಗು ಏತ ನೀರಾವರಿ ಯೋಜನೆ, ದೊಡ್ಡಕವಲಂದೆ ಹೋಬಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಹೊಸದಾಗಿ ಪೈಪ್‌ಲೈನ್ ಅಳವಡಿಕೆ, ಹೆಡಿಯಾಲ ಭಾಗದ 13 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಅವುಗಳು ಸಕಾಲದಲ್ಲಿ ಅನುಷ್ಠಾನಗೊಂಡರೆ ಜನ ಹಾಗೂ ಜಾನುವಾರುಗಳಿಗೆ ಬರಗಾಲದಲ್ಲೂ ಕುಡಿಯುವ ನೀರಿನ ಅಭಾವ ಉದ್ಭವಿಸುವುದಿಲ್ಲ ಎಂದರು.
ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯ ಮಹದೇವಪ್ರಸಾದ್ ಇದ್ದರು.
CWRC ಆದೇಶ ಮರುಪರಿಶೀಲನೆಗೆ ಇಂದೇ ಸರ್ಕಾರದಿಂದ ಅರ್ಜಿ!