ಮೀಸಲಾತಿ ಹೆಸರಿನಲ್ಲಿ ಮತ ಬ್ಯಾಂಕ್‌ ರಾಜಕಾರಣ ಮಾಡುವ ಷಡ್ಯಂತ್ರ

By Kannadaprabha News  |  First Published Apr 27, 2023, 5:50 AM IST

ಮೀಸಲಾತಿ ಹೆಚ್ಚಳ ಸಮರ್ಥಿಸಿಕೊಳ್ಳುವಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಟೀಕಿಸಿದರು.


 ಮೈಸೂರು :  ಮೀಸಲಾತಿ ಹೆಚ್ಚಳ ಸಮರ್ಥಿಸಿಕೊಳ್ಳುವಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಟೀಕಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಲಿಂಗಾಯತ, ಒಕ್ಕಲಿಗ, ಪ.ಜಾತಿ, ಪ.ಪಂಗಡ, ಅಲ್ಪಸಂಖ್ಯಾತ ಸಮುದಾಯಕ್ಕೆ ದ್ರೋಹ ಬಗೆಯುವ ಜೊತೆಗೆ ಅಪಮಾನ ಮಾಡಿದೆ. ಚುನಾವಣೆ ವೇಳೆ ಸರ್ಕಾರ ಆತುರವಾಗಿ ಕೈಗೊಂಡ ನಿರ್ಧಾರದಿಂದಾಗಿ ಗೊಂದಲ ಮತ್ತು ಸಾಕಷ್ಟು ಸಮಸ್ಯೆ ನಿರ್ಮಾಣವಾಗಿದೆ ಎಂದು ದೂರಿದರು.

Tap to resize

Latest Videos

2002 ರಲ್ಲಿ ಜಾರಿಯಲ್ಲಿದ್ದ ಮೀಸಲಾತಿಯನ್ನು ಮರು ಜಾರಿಗೊಳಿಸುವುದಾಗಿ ಸುಪ್ರಿಂ ಕೋರ್ಚ್‌ನಲ್ಲಿ ತಿಳಿಸಲಾಗಿದೆ. ಆ ಮೂಲಕ ಒಕ್ಕಲಿಗರು ಹಾಗೂ ಲಿಂಗಾಯತರು 3 ವರ್ಗೀಕರಣದಲ್ಲಿ ಮುಂದುವರೆಯುವರು. ಸರ್ಕಾರ ಆದೇಶದಂತೆ ಹೆಚ್ಚುವರಿ ಶೇ. 2 ಮೀಸಲಾತಿ ಸಿಗುವುದಿಲ್ಲ. ಬೊಮ್ಮಾಯಿ ಸರ್ಕಾರ ಏ. 25, 2023ರಂದು ಸುಪ್ರೀಂ ಕೋರ್ಚ್‌ ನಲ್ಲಿ ಸಾಲಿಸಿಟರ್‌ ಜನರಲ್‌ ಮೂಲಕ, ಮಾಚ್‌ರ್‍ 27, 2023ರಂದು ತಾನು ಹೊರಡಿಸಿದ್ದ ಮೀಸಲಾತಿ ಹೆಚ್ಚಳ ಆದೇಶಕ್ಕೆ ತಾನೇ ತಡೆ ಹಿಡಿದಿದ್ದು, ಕ್ಷಮಿಸಲಾರದ ಪಾಪ ಎಸಗಿದೆ ಎಂದು ಅವರು ಕಿಡಿಕಾರಿದರು.

ಮೀಸಲಾತಿ ಹೆಚ್ಚಳ ವಿಚಾರ ಕಾನೂನು ಕಟಕಟೆಯಲ್ಲಿ ನಿಂತು ಯಾರಿಗೂ ಮೀಸಲಾತಿ ಸಿಗಬಾರದು, ಮೀಸಲಾತಿ ಹೆಸರಿನಲ್ಲಿ ಮತ ಬ್ಯಾಂಕ್‌ ರಾಜಕಾರಣ ಮಾಡುವ ಷಡ್ಯಂತ್ರ ರೂಪಿಸಿತ್ತು. ಈ ಷಡ್ಯಂತ್ರ ಸುಪ್ರೀಂ ಕೋರ್ಚ್‌ನಲ್ಲಿ ಬಯಲಾಗಿದೆ. ಇದರ ಪರಿಣಾಮ ಲಿಂಗಾಯತ ಮೀಸಲಾತಿ ವರ್ಗೀಕರಣ 2 ರಿಂದ 3ಕ್ಕೆ ಮರಳಿದೆ. ಲಿಂಗಾಯತರಿಗೆ ನೀಡಿದ್ದ ಶೇ. 2 ಹೆಚ್ಚುವರಿ ಮೀಸಲಾತಿ ಹಿಂಪಡೆದಂತಾಗಿದೆ ಎಂದು ಅವರು ದೂರಿದರು.

ಒಕ್ಕಲಿಗರ ಮೀಸಲಾತಿ ವರ್ಗೀಕರಣ 2ಯಿಂದ 3ಗೆ ಮರಳಿದೆ. ಒಕ್ಕಲಿಗರಿಗೆ ನೀಡಿದ್ದ ಶೇ. 2 ಹೆಚ್ಚುವರಿ ಮೀಸಲಾತಿ ಹಿಂದಕ್ಕೆ ಪಡೆಯಲಾಗಿದೆ. ಪ.ಜಾತಿ ಮತ್ತು ಪ.ಪಂಗಡದ ಸಮುದಾಯಗಳ ಮೀಸಲಾತಿ ಹೆಚ್ಚಳವನ್ನು ಕೇಂದ್ರ ಸರ್ಕಾರ ಮಾ. 14ರಂದು ಸಂಸತ್ತಿನಲ್ಲಿ ನಿರಾಕರಿಸಿದೆ. ಇದೆಲ್ಲದರ ಫಲ ಯಾರಿಗೂ ಯಾವುದೇ ಮೀಸಲಾತಿ ಸಿಗದೆ ಎಲ್ಲರನ್ನೂ ವಂಚಿಸಲಾಗಿದೆ ಎಂದರು.

ಈ ಎಲ್ಲಾ ಸಮುದಾಯಕ್ಕೆ ಆಗಿರುವ ಮೋಸದ ಬಗ್ಗೆ ಪ್ರಧಾನಿಗಳು ಸಾರ್ವಜನಿಕವಾಗಿ ಕ್ಷಮೆ ಕೇಳುವರೆ? ಇಷ್ಟೆಲ್ಲಾ ದ್ರೋಹ ಬಗೆದಿರುವ ಬಿಜೆಪಿಗೆ ರಾಜ್ಯದ ಮತದಾರರು 40ಕ್ಕಿಂತ ಹೆಚ್ಚಿನ ಸೀಟು ನೀಡುವುದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಮಾಧ್ಯಮ ಸಂಚಾಲಕ ದಿನೇಶ್‌ ಗೂಳಿಗೌಡ, ವಕ್ತಾರ ಎಂ. ಎಂ. ಲಕ್ಷ್ಮಣ್‌, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್‌, ನಗರಾಧ್ಯಕ್ಷ ಆರ್‌. ಮೂರ್ತಿ ಇದ್ದರು.

ಇದು ಮೀಸಲಾತಿ ಮೋಸ

ಮೈಸೂರು(ಏ.26):  ರಾಜ್ಯ ಸರ್ಕಾರ ಮೀಸಲಾತಿ ಹೆಸರಲ್ಲಿ ಲಾಲಿಪಾಪ್ ನೀಡಿದೆ. ಸುಪ್ರೀಂ ಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಸ್ಲಿಂ ಮೀಸಲಾತಿ ರದ್ದು ಮಾಡಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಮೀಸಲಾತಿ ಹೆಸರಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿಗೆ ಹಿನ್ನೆಡೆಯಾಗಿದೆ. ಇದು ಡಬಲ್‌ ಇಂಜಿನ್ ದೋಖಾ ಅಂತ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. 

ಇಂದು(ಬುಧವಾರ) ನಗರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲಾ, ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಸರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮೋಸ ಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾಮಾಜಿಕ ಸರ್ವೇ ಮಾಡಿಸಲಾಗುವುದು. ಈಗಾಗಲೇ ಜಾತಿಗಣನೆ ಮಾಡಿಸಲಾಗಿದೆ. ಅದರ ಆಧಾರದ ಮೇಲೆ ಮೀಸಲಾತಿ ಬಗ್ಗೆ ನಿರ್ಧರಿಸಲಾಗುವುದು. 50 ಪರ್ಸೆಂಟ್ ಸೀಲಿಂಗ್ ತೆಗೆದರೆ ಎಲ್ಲಾ ಸಮಸ್ಯೆಗೂ ಪರಿಹಾರ ಸಿಗಲಿದೆ. ಕೇಂದ್ರದಲ್ಲಿ ಎಲ್ಲಾ ಪಕ್ಷದ ವಿಶ್ವಾಸ ಪಡೆದು ಅದನ್ನು ಜಾರಿಗೆ ತರುತ್ತೇವೆ. ಎಲ್ಲರೂ ಒಂದಾಗಿ ಇದನ್ನು ಮಾಡುತ್ತೇವೆ ಅಂತ ಭರಸವೆ ನೀಡಿದ್ದಾರೆ. 

ಸಿದ್ದರಾಮಯ್ಯ ಲಿಂಗಾಯತರಿಗೆ ಅವಮಾನ ಮಾಡಿಲ್ಲ: ರಣದೀಪ್‌ಸಿಂಗ್‌ ಸುರ್ಜೇವಾಲಾ

ಬಿಜೆಪಿಗೆ 9 ಪ್ರಶ್ನೆ ಕೇಳಿದ ರಣದೀಪ್ ಸಿಂಗ್ ಸುರ್ಜೇವಾಲಾ

1. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ವಂಚನೆ ಮಾಡಿದ್ದು ಯಾಕೆ ?
2. ಯಾಕೆ ಸುಪ್ರೀಂಕೋರ್ಟ್‌ನಲ್ಲಿ ಮೀಸಲಾತಿಯನ್ನು ಸಮರ್ಥಿಸಿಕೊಳ್ಳಲಿಲ್ಲ. 
3. ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೀಸಲಾತಿ ಕೇಸ್‌ಗೆ ಸಂಬಂಧಪಟ್ಟಂತೆ ಯಾಕೆ ಅಫಿಡೆವಿಟ್ ಸಲ್ಲಿಸಲಿಲ್ಲ ?
4. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಶಿಫಾರಸ್ಸನ್ನು ಮೋದಿ ಸರ್ಕಾರ ಮಾರ್ಚ್ 14ರಂದು ತಿರಸ್ಕರಿಸಿದ್ದು ಯಾಕೆ ?
5. ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಯಾಕೆ ಸೇರಿಸಲಿಲ್ಲ ?
6. ಎಸ್ಸಿ, ಎಸ್ಟಿ, ಒಬಿಸಿ, ಲಿಂಗಾಯತ, ಒಕ್ಕಲಿಗ ಮತ್ತು ಇತರೆ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಲು ಶೇ.50ರಷ್ಟು ಮೀಸಲಾತಿ ಮಿತಿಯನ್ನು ಯಾಕೆ ತೆಗೆದು ಹಾಕಲಿಲ್ಲ ?
7. ಅಲ್ಪಸಂಖ್ಯಾತರ ಮೀಸಲಾತಿಯನ್ನು ಅನ್ಯಾಯವಾಗಿ ಟಾರ್ಗೆಟ್ ಮಾಡಿದ್ದು ಯಾಕೆ ?
8. ಬಸವರಾಜ ಬೊಮ್ಮಾಯಿ ಸರ್ಕಾರ ತಮ್ಮದೇ ಸರ್ಕಾರದ ಹೇಳಿಕೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಸಮರ್ಥಿಸಿಕೊಳ್ಳಲಿಲ್ಲ ಯಾಕೆ ?
9. ಮೀಸಲಾತಿ ವಿಚಾರದಲ್ಲಿ ಬಿಜೆಪಿ ಉಂಟು ಮಾಡಿದ ಗೊಂದಲಕ್ಕಾಗಿ ಮೋದಿ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತಾರಾ ?

click me!