ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 3 ತಿಂಗಳು ಕಳೆದರೂ ಅಭಿವೃದ್ಧಿ ಕಾರ್ಯಗಳು ಆರಂಭವೇ ಆಗಿಲ್ಲ. ಹಿಂದಿನ ಸರ್ಕಾರದ ಯೋಜನೆಗಳನ್ನೂ ಮುಂದುವರಿಸಿಲ್ಲ. ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲೂ ಅಭಿವೃದ್ಧಿ ಎನ್ನುವುದು ನಿಂತ ನೀರಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಗಂಭೀರ ಆರೋಪ ಮಾಡಿದ್ದಾರೆ.
ಕಾರವಾರ (ಸೆ.1): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 3 ತಿಂಗಳು ಕಳೆದರೂ ಅಭಿವೃದ್ಧಿ ಕಾರ್ಯಗಳು ಆರಂಭವೇ ಆಗಿಲ್ಲ. ಹಿಂದಿನ ಸರ್ಕಾರದ ಯೋಜನೆಗಳನ್ನೂ ಮುಂದುವರಿಸಿಲ್ಲ. ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲೂ ಅಭಿವೃದ್ಧಿ ಎನ್ನುವುದು ನಿಂತ ನೀರಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರ್ಕಾರ ಗ್ಯಾರಂಟಿ ಯೋಜನೆ(Congress guarantee)ಗಾಗಿ ಹೆಣಗಾಡುತ್ತಿದೆ. ಆ ಯೋಜನೆ ಬಗ್ಗೆ ಆಕ್ಷೇಪ ಇಲ್ಲ. ಆದರೆ ರಾಜ್ಯ, ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿಯೂ ಅಷ್ಟೇ ಮುಖ್ಯವಾದುದು ಎನ್ನುವುದನ್ನು ಸರ್ಕಾರ ಮರೆತಂತಿದೆ. ರಸ್ತೆ, ವಿದ್ಯುದ್ದೀಪ, ಕುಡಿಯುವ ನೀರು, ಮೂಲಭೂತ ಸೌಲಭ್ಯಗಳು, ದೇವಾಲಯಗಳ ಅಭಿವೃದ್ಧಿ ಹೀಗೆ ಯಾವ ಕಾಮಗಾರಿಯೂ ನಡೆಯುತ್ತಿಲ್ಲ. ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲೂ ಅಭಿವೃದ್ಧಿಪರ ಚಟುವಟಿಕೆಗಳು ಕಾಣಿಸುತ್ತಿಲ್ಲ. ರಸ್ತೆಯಲ್ಲಿ ಉಂಟಾದ ಹೊಂಡ ಮುಚ್ಚುವುದಕ್ಕೂ ಹಣ ಇಲ್ಲ. ಶಾಸಕರಿಗೆ ಅನುದಾನ ಕೊಡಲೂ ಸಾಧ್ಯವಾಗದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿದೆ ಎಂದು ಹೇಳಿದ್ದಾರೆ.
undefined
ಕಾರವಾರ: ಬಿಜೆಪಿ ಶಾಸಕಿ ರೂಪಾಲಿ ಮಣಿಸಲು ಒಂದಾದ ರಾಜಕೀಯ ಬದ್ಧ ವೈರಿಗಳು..!
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯಲ್ಲಿ ತುಂಬಾ ಹಿಂದುಳಿಯುವ ಸಾಧ್ಯತೆ ದಟ್ಟವಾಗಿದೆ. ಬಜೆಟ್ ನಲ್ಲಿ ಕ್ಷೇತ್ರಕ್ಕೆ ಹೊಸ ಯೋಜನೆಗಳೂ ಇಲ್ಲ. ಅಭಿವೃದ್ಧಿಗಾಗಿ ನಡೆಸಿದ ನಿರಂತರ ಪ್ರಯತ್ನಕ್ಕೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿಲಾಂಜಲಿ ನೀಡಿದಂತಾಗಿದೆ. ಈ ಬಾರಿ ಮಳೆ ಕೈಕೊಟ್ಟಿದೆ. ಬತ್ತದ ಬೆಳೆ ರೈತರ ಕೈಗೆ ಬರುವ ಸಾಧ್ಯತೆ ಇಲ್ಲ. ಕಾರವಾರ ಹಾಗೂ ಅಂಕೋಲಾ ಈ ಎರಡೂ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸುವುದಾಗಿ ರೂಪಾಲಿ ಎಸ್. ನಾಯ್ಕ ತಿಳಿಸಿದ್ದಾರೆ
ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ದೇವಾಲಯಗಳ ಅಭಿವೃದ್ಧಿಗೆ ಒಟ್ಟೂ 11 ಕೋಟಿ ರೂ. ಯೋಜನೆ ರೂಪಿಸಲಾಗಿತ್ತು. ಅದರಲ್ಲಿ ಮೊದಲ ಹಂತದಲ್ಲಿ 2 ಕೋಟಿ ರೂ. ಕ್ರಿಯಾಯೋಜನೆ ರೂಪಿಸಿ ಸರ್ಕಾರದಿಂದ ಬಿಡುಗಡೆಯಾಗಿ, ಶೇ.50ರಷ್ಟು ಹಣ ದೇವಾಲಯಗಳಿಗೆ ನೀಡಲಾಗಿದೆ.
ಎರಡನೇ ಹಂತದಲ್ಲಿ 4 ಕೋಟಿ ರೂ. ಬಿಡುಗಡೆಯಾಗಿದ್ದು, ಶೇ. 50ರಷ್ಟು ಹಣ ದೇವಾಲಯಗಳಿಗೆ ಹಸ್ತಾಂತರಿಸಲಾಗಿದೆ. ಇದು ಬಿಜೆಪಿ ಸರ್ಕಾರದ ಅವಧಿಯಲ್ಲೇ ಆಗಿದೆ.
ಮೂರನೇ ಹಂತದಲ್ಲಿ 5 ಕೋಟಿ ರೂ. ಬಿಡುಗಡೆಯಾಗುವುದು ಬಾಕಿ ಇದೆ. ಕಾಂಗ್ರೆಸ್ ಸರ್ಕಾರ ಇದುವರೆಗೆ ಈ ಬಗ್ಗೆ ಯಾವುದೆ ಕ್ರಮ ಕೈಗೊಂಡಂತೆ ಕಾಣಿಸುತ್ತಿಲ್ಲ. ಸರ್ಕಾರ ಕೂಡಲೇ ಈ ಹಣ ಬಿಡುಗಡೆ ಮಾಡುವಂತೆ ರೂಪಾಲಿ ಎಸ್.ನಾಯ್ಕ ಒತ್ತಾಯಿಸಿದ್ದಾರೆ.
ಉತ್ತರ ಕನ್ನಡ: ಚುನಾವಣೆ ನಾಮಪತ್ರ, ರೂಪಾಲಿ ನಾಯ್ಕ್ ಭರ್ಜರಿ ಬಲ ಪ್ರದರ್ಶನ
ಯಾರದೋ ಕೆಲಸ, ಇನ್ನಾರಿಗೂ ಕ್ರೆಡಿಟ್
ಕಾಂಗ್ರೆಸ್ ಎಷ್ಟರ ಮಟ್ಟಿಗೆ ಹತಾಶವಾಗಿದೆ ಎಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾರವಾರದ ಮೆಡಿಕಲ್ ಕಾಲೇಜಿಗೆ ಮಂಜೂರಾದ ತಜ್ಞ ವೈದ್ಯರ ಹುದ್ದೆಯ ಕ್ರೆಡಿಟ್ ಅನ್ನೂ ಶಾಸಕ ಸತೀಶ ಸೈಲ್ ಪಡೆಯಲು ನೋಡುತ್ತಿದ್ದಾರೆ. ನಾನು ಶಾಸಕಳಾಗಿದ್ದ ಸಂದರ್ಭದಲ್ಲೇ ಕ್ಯಾನ್ಸರ್, ಹೃದಯ, ಮೂತ್ರ ರೋಗ, ನರ ರೋಗ ತಜ್ಞರು ಸೇರಿದಂತೆ ತಜ್ಞ ವೈದ್ಯರ ಹುದ್ದೆ ಮಂಜೂರಾಗಿತ್ತು. ಆಸ್ಪತ್ರೆಗೂ ಹಣ ಬಿಡುಗಡೆಯಾಗಿ ಕಾಮಗಾರಿ ಆರಂಭವಾಗಿತ್ತು ಎಂದು ರೂಪಾಲಿ ನಾಯ್ಕ ತಿಳಿಸಿದ್ದಾರೆ.