ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶೇ.100 ರಷ್ಟುಮತದಾನವಾಗಬೇಕು. ಈ ಹಿನ್ನೆಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶೇ.100 ರಷ್ಟುಮತದಾನವಾಗಬೇಕು. ಈ ಹಿನ್ನೆಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಜರುಗಿದ ಸ್ವೀಪ್ ಸಮಿತಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ವಾರ್ಡುಗಳಲ್ಲಿ ತಪ್ಪದೆ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಬೇಕು. ಹಿಂದಿನ ಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿರುವ ವಾರ್ಡುಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಬೆಂಗಳೂರು ಮತ್ತಿತರ ಪ್ರದೇಶಗಳಿಗೆ ಉದ್ಯೋಗ, ವ್ಯಾಸಂಗಕ್ಕಾಗಿ ತೆರಳಿರುವ 18 ವರ್ಷ ಮೇಲ್ಪಟ್ಟಕುಟುಂಬ ಸದಸ್ಯರನ್ನು ಮತದಾನ ದಿನದಂದು ಸ್ವಗ್ರಾಮಕ್ಕೆ ಬಂದು ಮತ ಚಲಾಯಿಸುವ ಬಗ್ಗೆ ಸ್ಥಳೀಯ ಮತದಾರರಿಗೆ ತಿಳಿ ಹೇಳಬೇಕು.
ಜಾಗೃತಿ ಮೂಡಿಸಬೇಕು:
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಪ್ರತಿ ದಿನ ಬೆಳಿಗ್ಗೆ ಕಸದ ವಾಹನಗಳಲ್ಲಿ ಜಾಗೃತಿ ಗೀತೆಗಳ ಮೂಲಕ ಮತದಾನ ಮಾಡುವ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು. ಅಲ್ಲದೆ ಮತದಾನ ಜಾಗೃತಿ ಮೂಡಿಸುವ ಬಗ್ಗೆ ಬೀದಿ ನಾಟಕ, ಸಂಗೀತ ಕಾರ್ಯಕ್ರಮಗಳ ಮೂಲಕ ಮತದಾರರನ್ನು ಸೆಳೆಯಬೇಕು ಎಂದು ಸಲಹೆ ನೀಡಿದರು.
ಪಾಲಿಕೆ ಆಯುಕ್ತ ಹೆಚ್.ವಿ.ದರ್ಶನ್ ಮಾತನಾಡಿ, 18 ವರ್ಷ ಮೇಲ್ಪಟ್ಟಯುವ ಮತದಾರರಿಂದ ಮತದಾನ ಜಾಗೃತಿ ಸಂದೇಶವನ್ನು ವಿಡಿಯೋ ಚಿತ್ರೀಕರಣ ಮಾಡಿ ವಿಡಿಯೋ ತುಣುಕನ್ನು ಹಂಚಿಕೊಳ್ಳುವುದರಿಂದ ಯುವ ಮತದಾರರನ್ನು ಮತದಾನ ಮಾಡುವತ್ತ ಸೆಳೆಯಬಹುದು ಎಂದು ಸಲಹೆ ನೀಡಿದರು.
ಪಾಲಿಕೆ ಉಪ ಆಯುಕ್ತೆ(ಕಂದಾಯ) ಸುಮತಿ, ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಉಪನಿರ್ದೇಶಕ ರಘು, ರೇಷ್ಮೆ ಉಪನಿರ್ದೇಶಕ ಬಾಲಕೃಷ್ಣಪ್ಪ, ಡಾ. ರಕ್ಷಿತ್, ಪಾಲಿಕೆ ಚುನಾವಣಾ ಶಾಖೆಯ ನಾಗಭೂಷಣ್, ಜಿಲ್ಲಾ ಪಂಚಾಯತಿ ಇಂಜಿನಿಯರ್ ಶ್ರೀನಿವಾಸ್ ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.
ಮತಗಟ್ಟೆಯ ಬಗ್ಗೆ ಸಮರ್ಪಕ ನೀಡಬೇಕು
ಅಧಿಕಾರಿಗಳು ಹಿಂದಿನ ಚುನಾವಣೆಯಲ್ಲಿ ಮತದಾನ ಕಡಿಮೆಯಾಗಲು ಕಾರಣವನ್ನು ಕಂಡುಕೊಳ್ಳಬೇಕು. ಮತದಾನ ಮಾಡುವ ಮತಗಟ್ಟೆಯ ಮಾಹಿತಿ ಕೊರತೆಯಿಂದ ಅಥವಾ ಮತಗಟ್ಟೆದೂರವಿದೆ ಎಂದು ಕೆಲವು ಮತದಾರರು ಮತದಾನದಿಂದ ತಪ್ಪಿ ಹೋಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಮತದಾರರ ಚೀಟಿಯನ್ನು ವಿತರಿಸಿ ಮತಗಟ್ಟೆಗಳ ಮಾಹಿತಿಯನ್ನು ಮತದಾರರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರತೀ ಕ್ಷೇತ್ರಕ್ಕೆ ಮೂರು ಹೆಸರು ಕಳಿಸಲು ಸೂಚನೆ
ಬೆಂಗಳೂರು(ಏ.05): ಪ್ರಸಕ್ತ ವಿಧಾನಸಭಾ ಚುನಾವಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕಡ್ಡಾಯವಾಗಿ ಮೂವರು ಆಕಾಂಕ್ಷಿಗಳ ಅಥವಾ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಮಾಡುವಂತೆ ಬಿಜೆಪಿ ಹೈಕಮಾಂಡ್ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಹೊರವಲಯದ ರೆಸಾರ್ಚ್‌ವೊಂದರಲ್ಲಿ ನಡೆದ ಬಿಜೆಪಿಯ ರಾಜ್ಯ ಕೋರ್ ಕಮಿಟಿ ಮತ್ತು ಚುನಾವಣಾ ಸಮಿತಿಗಳ ಸಭೆಯಲ್ಲಿ ಮೊದಲ ದಿನ 102 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಬುಧವಾರ ಇನ್ನುಳಿದ 122 ವಿಧಾನಸಭಾ ಕ್ಷೇತ್ರಗಳಿಗೆ ಆಕಾಂಕ್ಷಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ.
ಬುಧವಾರ ರಾತ್ರಿ ಅಥವಾ ಗುರುವಾರ ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಯು ಬಿಜೆಪಿ ಹೈಕಮಾಂಡ್‌ಗೆ ತಲುಪಲಿದೆ. ಬಳಿಕ ಶನಿವಾರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆದು ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಆಖೈರುಗೊಳಿಸಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ.
ರಾಜಕೀಯ ಅಖಾಡಕ್ಕೆ ಧುಮುಕಿದ ಕಿಚ್ಚ ಸುದೀಪ್: ನಾಳೆ ಬಿಜೆಪಿ ಸೇರ್ಪಡೆ ಸಾಧ್ಯತೆ
2 ದಿನ ಸುದೀರ್ಘ ಸಭೆ:
ಸಾಮಾನ್ಯವಾಗಿ ಹಿಂದಿನ ಚುನಾವಣೆಗಳಲ್ಲಿ ರಾಜ್ಯ ಕೋರ್ ಕಮಿಟಿಯು ಎರಡು ಅಥವಾ ಮೂರು ಗಂಟೆಗಳ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಸಿದ್ಧಪಡಿಸಿ ದೆಹಲಿಗೆ ಕಳುಹಿಸುತ್ತಿತ್ತು. ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಎರಡು ದಿನಗಳ ಕಾಲ ಸುದೀರ್ಘ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತಿತರರು ಇಡೀ ದಿನ ಸಭೆಯಲ್ಲಿ ಪಾಲ್ಗೊಂಡಿದ್ದರು.
ಈಗಾಗಲೇ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಸ್ಥಳೀಯ ಮುಖಂಡರ ಹಾಗೂ ಜಿಲ್ಲಾ ಕೋರ್ ಕಮಿಟಿಗಳ ಸದಸ್ಯರ ಅಭಿಪ್ರಾಯ ಸಂಗ್ರಹಿಸಿರುವ ಹಿನ್ನೆಲೆಯಲ್ಲಿ ಆ ಮಾಹಿತಿಯನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಬಗ್ಗೆ ರಾಜ್ಯ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.