ಬೆಳಗಾವಿ: ಪೊಲೀಸ್ ಮನೆಯಲ್ಲೇ ಕಳ್ಳತನ..!

Published : Aug 20, 2019, 11:30 AM IST
ಬೆಳಗಾವಿ: ಪೊಲೀಸ್ ಮನೆಯಲ್ಲೇ ಕಳ್ಳತನ..!

ಸಾರಾಂಶ

ಅಶೋಕ ನಗರದಲ್ಲಿ ವಾಸವಾಗಿದ್ದ ನಿವೃತ್ತ ಸಿಬ್ಬಂದಿ ಮನೆಯಲ್ಲಿ ಕಳ್ಳತನ ನಡೆದಿದೆ. ಮಗಳ ಮನೆಯಲ್ಲಿ ಸತ್ಯನಾರಾಯಣ ಪೂಜೆ ತಯಾರಿಗೆ ತೆರಳಿದ್ದ ನಿವೃತ್ತ ಪೊಲೀಸ್‌ ಸಿಬ್ಬಂದಿಯ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಕಳ್ಳತನ ಮಾಡಿದ್ದಾರೆ. ಚಿನ್ನಾಭರಣಗಳ ಜತೆ ಆಯರಿಗೆ ತಂದಿದ್ದ 8 ಸಾವಿರ ಮೌಲ್ಯದ ಹೊಸ ಬಟ್ಟೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಬೆಳಗಾವಿ(ಆ.20): ನಿವೃತ್ತ ಪೊಲೀಸ್‌ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಘಟನೆ ನಗರದಲ್ಲಿ ಭಾನುವಾರ ತಡರಾತ್ರಿ ಮಾಳಮಾರುತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಅಶೋಕ ನಗರದಲ್ಲಿ ವಾಸವಾಗಿದ್ದ ನಿವೃತ್ತ ಸಿಬ್ಬಂದಿ ಮನೆಯಲ್ಲಿ ಕಳ್ಳತನ ನಡೆದಿದೆ. ಮಗಳ ಮನೆಯಲ್ಲಿ ಸತ್ಯನಾರಾಯಣ ಪೂಜೆ ತಯಾರಿಗೆ ತೆರಳಿದ್ದ ನಿವೃತ್ತ ಪೊಲೀಸ್‌ ಸಿಬ್ಬಂದಿಯ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಕಳ್ಳತನ ಮಾಡಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಮೀಪದ ಬಡಾವಣೆಯಲ್ಲಿ ವಾಸವಿರುವ ಮಗಳ ಮನೆಯಲ್ಲಿ ಸೋಮವಾರ ಹಮ್ಮಿಕೊಂಡ ಸತ್ಯನಾರಾಯಣ ಪೂಜೆ ತಯಾರಿಗೆ ಭಾನುವಾರ ತಡರಾತ್ರಿ ತೆರಳಿದ್ದರು. ಈ ವೇಳೆ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಳ್ಳತನ ನಡೆದಿದ್ದು, ಚಿನ್ನಾಭರಣಗಳ ಜತೆ ಆಯರಿಗೆ ತಂದಿದ್ದ 8 ಸಾವಿರ ಮೌಲ್ಯದ ಹೊಸ ಬಟ್ಟೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ತಡರಾತ್ರಿವರೆಗೂ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

'ಒಂದೇ ತಾಲೂಕಿಗೆ 850 ಕೋಟಿ, ಇದೇನು ಶಿಕಾರಿಪುರ ಬಜೆಟ್ಟಾ..?'

PREV
click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ