ತಿಗಳರ ನಡೆ ಡಾ. ಜಿ ಪರಮೇಶ್ವರ್‌ ಕಡೆ

By Kannadaprabha News  |  First Published Apr 5, 2023, 6:38 AM IST

ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಮುಖಂಡರುಗಳು ಹಾಗೂ ಯಜಮಾನರು ಅಣೆಕಾರರು ಮುದ್ರೆರವರು ಸೇರಿ ತಿಗಳ ಜಾಗೃತಿ ಸಮಾವೇಶವನ್ನು ನಡೆಸಿದರು.


ಕೊರಟಗೆರೆ: ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಮುಖಂಡರುಗಳು ಹಾಗೂ ಯಜಮಾನರು ಅಣೆಕಾರರು ಮುದ್ರೆರವರು ಸೇರಿ ತಿಗಳ ಜಾಗೃತಿ ಸಮಾವೇಶವನ್ನು ನಡೆಸಿದರು.

ಸಮಾವೇಶಕ್ಕೆ ಆಗಮಿಸಿದ ಶಾಸಕ  ಮಾತನಾಡಿ, ಕ್ಷತ್ರಿಯ ಸಮಾಜದ ಬಂಧುಗಳು ಶ್ರಮಜೀವಿಗಳು, ಈ ಸಮಾಜದ ಶ್ರೇಯೋಭಿವೃದ್ಧಿಗಾಗಿ ಹನುಮಂತಗಿರಿಯಲ್ಲಿ ಸುಮಾರು 50 ಲಕ್ಷ ರು.ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಿದ್ದು, ತಿಗಳ ಸಮುದಾಯವಿರುವ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ಅನುದಾನ ಒದಗಿಸಿ ಸಮುದಾಯ ಭವನಗಳ ನಿರ್ಮಾಣಕ್ಕೆ ಸಹಕಾರ ನೀಡಲಾಗಿದ್ದು ಮುಂದಿನ ದಿನಗಳಲ್ಲಿಯೂ ಸಹ ನಿಮ್ಮ ಸಹೋದರನಾಗಿ ನಿಮ್ಮೊಂದಿಗಿರುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿÓಸಿ ಎಂದು ಮನವಿ ಮಾಡಿದರು.

Tap to resize

Latest Videos

ಕಾರ್ಯಕ್ರಮದಲ್ಲಿ ತಿಗಳ ಮಹಾಸಭಾ ರಾಜ್ಯಾಧ್ಯಕ್ಷ ಸುಬ್ಬಣ್ಣ, ಕೆಪಿಸಿಸಿ ಕಾರ್ಯದರ್ಶಿ ಶ್ರೀಕಾಂತ್‌, ಮುಖಂಡರಾದ ರೇವಣಸಿದ್ದಯ್ಯ, ಅರ್ಜುನ್‌, ಶ್ರೀರಂಗಯ್ಯ ರಾಮಕಷ್ಣಯ್ಯ, ಗೊಲ್ಲಳ್ಳಯ್ಯ, ಮೂಡ್ಲಗಿರಿಯಪ್ಪ, ಕೃಷ್ಣಪ್ಪ, ಯದುನಂದನ್‌, ಯದುಕುಮಾರ್‌, ವಸಂತರಾಜು, ರಮೇಶ್‌, ಶಶಿಧರ್‌ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿ ಈ ಬಾರಿಯ ಚುನಾವಣೆಯಲ್ಲಿ ಡಾ.ಜಿ.ಪರಮೇಶ್ವರ್‌ ರವರನ್ನು ಬೆಂಬಲಿಸುವುದಾಗಿ ಭರವಸೆ ನೀಡಿದರು.

ಪರಂಗೆ ಈ ಬಾರಿ ಅದೃಷ್ಟ ಒಲಿಯುತ್ತಾ..?

ಉಗಮ ಶ್ರೀನಿವಾಸ್‌

ತುಮಕೂರು (ಫೆ.26): ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಾನೂ ಸಿಎಂ ಹುದ್ದೆಯ ಆಕಾಂಕ್ಷಿ ಎನ್ನುವ ಮೂಲಕ ಪಕ್ಷದಲ್ಲಿ ಮಿಂಚಿನ ಸಂಚಲನ ಮೂಡಿಸಿರುವ ಡಾ.ಜಿ.ಪರಮೇಶ್ವರ್‌, ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ 5 ಬಾರಿ ಗೆದ್ದಿದ್ದಾರೆ. ಈಗ ಮತ್ತೊಮ್ಮೆ ಇಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಜೆಡಿಎಸ್‌ನಿಂದ ಸುಧಾಕರ ಲಾಲ್‌ ಅವರ ಹೆಸರನ್ನು ಪಕ್ಷದ ವರಿಷ್ಠರು ಈಗಾಗಲೇ ಘೋಷಿಸಿದ್ದಾರೆ. ಒಂದು ಕಾಲದಲ್ಲಿ ಇಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇರುತ್ತಿರಲಿಲ್ಲ. ಆದರೆ, ಈ ಬಾರಿ 4 ರಿಂದ 5 ಅಭ್ಯರ್ಥಿಗಳು ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಈ ಪೈಕಿ ನಿವೃತ್ತ ಐಎಎಸ್‌ ಅಧಿಕಾರಿ ಹಾಗೂ ಎಡಗೈ ಸಮುದಾಯದ ಅನಿಲ ಕುಮಾರ್‌, ಮುನಿಯಪ್ಪ, ಡಾ.ಲಕ್ಷ್ಮೇಕಾಂತ್‌, ಗಂಗಹನುಮಯ್ಯ, ವೈ.ಎಚ್‌. ಹುಚ್ಚಯ್ಯ, ಪ್ರಮುಖವಾಗಿ ಕೇಳಿ ಬರುತ್ತಿರುವ ಹೆಸರುಗಳು.

ಸಾಮಾನ್ಯ ಕ್ಷೇತ್ರವಾಗಿದ್ದ ಕೊರಟಗೆರೆ ಕ್ಷೇತ್ರ ಪುನರ್‌ ವಿಂಗಡಣೆ ಬಳಿಕ ಮೀಸಲು ಕ್ಷೇತ್ರವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯನ್ನು ರಾಜ್ಯಕ್ಕೆ ಈ ಕ್ಷೇತ್ರ ಕೊಟ್ಟಿದೆ. 2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಾದ ಬಳಿಕ ನಡೆದ ಮೂರು ಚುನಾವಣೆಯಲ್ಲಿ ಎರಡು ಬಾರಿ ಕಾಂಗ್ರೆಸ್‌ನಿಂದ ಡಾ.ಜಿ. ಪರಮೇಶ್ವರ್‌ ಹಾಗೂ ಒಮ್ಮೆ ಜೆಡಿಎಸ್‌ನಿಂದ ಸುಧಾಕರ್‌ ಲಾಲ್‌ ಆಯ್ಕೆಯಾಗಿದ್ದಾರೆ. 2013ರಲ್ಲಿ ನಡೆದ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ್‌, ಈ ಕ್ಷೇತ್ರದಲ್ಲಿ ಸೋತರು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂತು. ಆ ಸೋಲು ಪರಮೇಶ್ವರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿಸಿತು.

ಚುನಾವಣೆಗೆ ಕರೆತರುವ ಉದ್ದೇಶದಿಂದ ಮಠಾಧೀಶರ ಭೇಟಿಯಾಗಿಲ್ಲ: ಯಡಿಯೂರಪ್ಪ

ಈ ಚುನಾವಣೆಯಲ್ಲಿ ಪರಮೇಶ್ವರ್‌ ಗೆದ್ದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಡಾ.ಜಿ.ಪರಮೇಶ್ವರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ ಎನ್ನುವ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾರೆ. ಸದಾ ಕ್ಷೇತ್ರದಲ್ಲಿ ಸಿಗುವ ಸುಧಾಕರ ಲಾಲ್‌, ಕಳೆದ ಚುನಾವಣೆಯಲ್ಲಿ ಸೋತದ್ದನ್ನೇ ಬಂಡವಾಳವಾಗಿಸಿಕೊಂಡು ಅನುಕಂಪದ ಮತಕ್ಕೆ ಕೈ ಹಾಕುತ್ತಿದ್ದಾರೆ. 2018ರ ಚುನಾವಣೆಯಲ್ಲಿ ಕೇವಲ 12 ಸಾವಿರ ಮತಗಳನ್ನು ಪಡೆದಿದ್ದ ಬಿಜೆಪಿಗೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿತ್ತು. 

ತುಮಕೂರು ಜಿಲ್ಲೆಯ ಶಿರಾ, ಪಾವಗಡ, ಮಧುಗಿರಿ, ಕೊರಟಗೆರೆಯಲ್ಲಿ ಬಿಜೆಪಿ ಖಾತೆ ತೆರೆದಿರಲಿಲ್ಲ. ಆದರೆ, ಕಳೆದ ಉಪಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದು ದಾಖಲೆ ನಿರ್ಮಿಸಿತ್ತು. ಅದೇ ಮಾದರಿಯಲ್ಲಿ ಕೊರಟಗೆರೆಯನ್ನು ಗೆಲ್ಲುವ ಮೂಲಕ ಖಾತೆ ತೆರೆಯುವ ಉತ್ಸಾಹದಲ್ಲಿ ಬಿಜೆಪಿಯಿದೆ. ಮೂರೂ ಪಕ್ಷಗಳು ಸಮಬಲದ ಹೋರಾಟ ನಡೆಸಲು ಸಜ್ಜಾಗಿವೆ. ಮುಖ್ಯವಾಗಿ ಪರಿಶಿಷ್ಟ ಜಾತಿ, ಒಳಪಂಗಡಗಳ ಮತಗಳೇ ಇಲ್ಲಿ ನಿರ್ಣಾಯಕವಾಗಿದ್ದು, ಚುನಾವಣಾ ಕಣ ರಂಗೇರುತ್ತಿದೆ.

click me!