ಆತಂಕ ಸೃಷ್ಟಿಸಿದ ಭಯೋತ್ಪಾದಕ ಘಟನೆಗಳಾದ ಕುಕ್ಕರ್ ಬಾಂಬ್ ಮತ್ತು ರಾಮೇಶ್ವರಂ ಕೆಫೆ ಬ್ಲಾಸ್ಟ್ ರೂವಾರಿ ಶಾರಿಕ್ ಮತ್ತು ಮತೀನ್ ಇಲ್ಲಿಯವರಾಗಿದ್ದಾರೆ. ಅಷ್ಟೇ ಅಲ್ಲದೇ ನಂದಿತಾ ಕೊಲೆ ಪ್ರಕರಣದ ಹಿಂದೆಯೂ ಭಯೋತ್ಪಾದಕರಿದ್ದರು. ಆದರೆ, ಆ ಬಗ್ಗೆ ಸರಿಯಾದ ತನಿಖೆ ನಡೆದಿರಲಿಲ್ಲ: ಶ್ರೀ ರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ತೀರ್ಥಹಳ್ಳಿ(ನ.29): ದೇಶದ ಗಮನ ಸೆಳೆದ ಕುಕ್ಕರ್‌ಬಾಂಬ್ ಹಾಗೂ ರಾಮೇಶ್ವರಂ ಕೆಫೆಯ ಭಯೋತ್ಪಾದಕ ಚಟುವಟಿಕೆಗಳು ಹಾಗೂ ಇಸ್ಲಾಮಿಕ್ ಮಾನಸಿಕತೆ ವ್ಯಕ್ತಿಗಳಿಂದಾಗಿ ತೀರ್ಥಹಳ್ಳಿ ಎರಡನೇ ಭಟ್ಕಳವಾಗಿ ಪರಿವರ್ತನೆ ಗೊಳ್ಳುತ್ತಿದೆ ಎಂದು ಶ್ರೀ ರಾಮಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಹೇಳಿದರು.
ಆತಂಕ ಸೃಷ್ಟಿಸಿದ ಭಯೋತ್ಪಾದಕ ಘಟನೆಗಳಾದ ಕುಕ್ಕರ್ ಬಾಂಬ್ ಮತ್ತು ರಾಮೇಶ್ವರಂ ಕೆಫೆ ಬ್ಲಾಸ್ಟ್ ರೂವಾರಿ ಶಾರಿಕ್ ಮತ್ತು ಮತೀನ್ ಇಲ್ಲಿಯವರಾಗಿದ್ದಾರೆ. ಅಷ್ಟೇ ಅಲ್ಲದೇ ನಂದಿತಾ ಕೊಲೆ ಪ್ರಕರಣದ ಹಿಂದೆಯೂ ಭಯೋತ್ಪಾದಕರಿದ್ದರು. ಆದರೆ, ಆ ಬಗ್ಗೆ ಸರಿಯಾದ ತನಿಖೆ ನಡೆದಿರಲಿಲ್ಲ. ಸರಿಯಾದ ತನಿಖೆ ನಡೆದಿದ್ದರೆ ಇಸ್ಲಾಮಿಕ್ ಮಾನಸಿಕತೆಯ ದೊಡ್ಡ ವ್ಯಕ್ತಿಗಳೂ ಬಯಲಿಗೆ ಬರುತ್ತಿದ್ದರು ಎಂದು ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷ ಸ್ಥಾನದಲ್ಲಿ ಬಿಜೆಪಿ: ಪ್ರಮೋದ್ ಮುತಾಲಿಕ್
ವಕ್ಫ್ ಬೋರ್ಡ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಮುತಾಲಿಕ್, ದೇಶ ದ್ರೋಹಿ ಚಟುವಟಿಕೆಗೆ ಪೂರಕವಾಗಿರುವ ಈ ಕಾಯ್ದೆಗೆ ಕಾಂಗ್ರೆಸ್ ವಿಶೇಷ ಅಧಿಕಾರ ನೀಡಿದ್ದು, ಮುಸ್ಲಿಮರ ತುಷ್ಠಿಕರಣದ ಸಲುವಾಗಿಯೇ ಈ ಕಾಯ್ದೆ ಸೃಷ್ಟಿ ಮಾಡಲಾಗಿದೆ. ರೈತರ ಜಮೀನು ವಕ್ಸ್ ಖಾತೆಗೆ ಸೇರಿದೆ ಎಂಬ ಕಾರಣಕ್ಕೆ ರಾಜ್ಯದಲ್ಲಿ ರೈತ ಭುಗಿಲೆದ್ದಿದ್ದಾನೆ. ದಲಿತರ ಭೂಮಿ, ದೇವಸ್ಥಾನ, ಗರಡಿಮನೆ ಸರ್ಕಾರಿ ಭೂಮಿಯನ್ನೂ ಬಿಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.
ರಾಯಚೂರು ಜಿಲ್ಲೆ ಸಿಂಧನೂರು ಶಾಸಕರ 12 ಎಕರೆ ಜಮೀನು ವಕ್ಫ್ ಆಸ್ತಿ ಎಂದೂ ಹೇಳಲಾಗಿದೆ. 9.40 ಲಕ್ಷ ಎಕರೆ ಭೂಮಿಯನ್ನು ವಕ್ಫ್ ಬೋರ್ಡ್‌ಗೆ ದಾನ ಕೊಟ್ಟವರು ಯಾರು? ಎಂದು ಪ್ರಶ್ನಿಸಿದರಲ್ಲದೇ, ಯಾವುದೇ ಇಸ್ಲಾಂ ರಾಷ್ಟ್ರದಲ್ಲೂ ಇಷ್ಟರ ಮಟ್ಟಿನ ಅಧಿಕಾರ ನೀಡಿದ ಒಂದು ಉದಾಹರಣೆಯೂ ಇಲ್ಲ. ಹೀಗಾಗಿ ಮುಖ್ಯಮಂತ್ರಿಗಳು ಈ ಕಾಯ್ದೆ ವಾಪಾಸು ತೆಗೆದುಕೊಳ್ಳಲು ಹೇಳಿದ್ದರೂ ನೋಟಿಸ್ ಕಳುಹಿಸಲಾಗುತ್ತಿದೆ. ಹಾಗಾದರೆ ಮುಖ್ಯಮಂತ್ರಿಗಳ ಆದೇಶಕ್ಕೂ ಬೆಲೆ ಇಲ್ಲವೇ ಎಂದು ಎಂದರು.
ಬಾಂಗ್ಲಾ ದೇಶದ ಮಾಜಿ ಪ್ರಧಾನಿ ಷೇಕ್ ಹಸೀನಾ ಅಧಿಕಾರದಿಂದ ಇಳಿಯುತ್ತಿದ್ದಂತೆ ಪಾಕ್ ಪ್ರೇರಣೆಯಿಂದ ಬಾಂಗ್ಲಾದಲ್ಲಿರುವ ಹಿಂದೂ ದೇವಾಲಯಗಳು ಮತ್ತು ಭಾರತದ ವಿರುದ್ಧ ವಿರೋಧ ವ್ಯಕ್ತವಾಗುತ್ತಿದೆ. ಆ ದೇಶದಲ್ಲಿ ವಾಸಿಸುತ್ತಿರುವ ಹಿಂದೂಗಳೂ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡನೀಯ, ಉಪಕಾರ ಸ್ಮರಣೆ ಇಲ್ಲದೇ ಜನ್ಮ ಕೊಟ್ಟ ದೇಶದ ಜನತೆಗೆ ಮಾಡುತ್ತಿರುವ ದ್ರೋಹ ಎಂದರು. ಸುದ್ದಿಗೋಷ್ಠಿಯಲ್ಲಿ ಶ್ರೀ ರಾಮಸೇನೆ ಕಾರ್ಯಕರ್ತರಿದ್ದರು.
ದೇಶದ್ರೋಹಿ ಕೆಲಸ ಮಾಡುತ್ತಿರುವ ಜಮೀರ್ ಅಹಮದ್‌ನನ್ನ ಗಲ್ಲಿಗೇರಿಸಿ: ಪ್ರಮೋದ ಮುತಾಲಿಕ್
ಹುಬ್ಬಳ್ಳಿ: ವಕ್ಫ್ ಬೋರ್ಡ್ ಹೆಸರಿನಲ್ಲಿ ಸಚಿವ ಜಮೀರ್ ಅಹಮದ್ ಖಾನ್ ರೈತರು ಮತ್ತು ಜನಸಾಮಾನ್ಯರ ಆಸ್ತಿ ಕಬಳಿಸುವ ಮೂಲಕ ದೇಶದ್ರೋಹಿ ಕೆಲಸ ಮಾಡುತ್ತಿದ್ದು, ಅವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದ್ದರು.
ಕ್ರಿಶ್ಚಿಯನ್ ಸಂಸ್ಥೆಗಳಿಂದ ಹಿಂದೂ ಸಂಸ್ಕೃತಿಗೆ ಅಪಮಾನ: ಪ್ರಮೋದ್ ಮುತಾಲಿಕ್ ಆಕ್ರೋಶ
ಜಮೀರ್ ಅಹಮದ್ ಖಾನ್ ರಾಜ್ಯಾದ್ಯಂತ ವಕ್ಫ್ ಅದಾಲತ್ ನಡೆಸುತ್ತಿದ್ದು, ಇದು ಅತ್ಯಂತ ಗಂಭೀರವಾದ ವಿಷಯ. ಇವರಿಗೆ ಅಧಿಕಾರದಮದ ಏರಿದೆ. ತನ್ನ ಚಾಮರಾಜಪೇಟೆ ಕ್ಷೇತ್ರದಲ್ಲಿ 25 ಸಾವಿರಕ್ಕೂ ಅಧಿಕ ದೇಶದ್ರೋಹಿ ಬಾಂಗ್ಲಾ ಮುಸ್ಲಿಮರನ್ನು ಸಲಹುತ್ತಿದ್ದಾರೆ. ಈತನಿಂದಲೇ ರಾಜ್ಯದಲ್ಲಿ ಧಂಗೆ, ಗಲಭೆ ನಡೆಯುತ್ತಿವೆ. ಬಿಜೆಪಿ ಸೇರಿದಂತೆ ಹಲವರು ಜಮೀರ್ ಅವರಿಗೆ ಸಚಿವ ಸಂಪುಟದಿಂದ ಕೈಬಿಡಬೇಕು, ದೇಶದಿಂದ ಗಡೀಪಾರು ಎಂಬಿತ್ಯಾದಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ನಾನು ಹೇಳುವೆ ಈ ಕೂಡಲೇ ಅವನನ್ನು ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದ್ದರು.
ಇಸ್ಲಾಂ ದೇಶ ಮಾಡುತ್ತಿದ್ದಾರೆ:
ಇಡೀ ದೇಶದಲ್ಲಿ ರೈತರ ಭೂಮಿಗಳು, ಮನೆ, ಮಠ, ಸರ್ಕಾರಿ ಆಸ್ಪತ್ರೆ, ಕಚೇರಿ, ರಸ್ತೆಗಳು ವಕ್ಫ್‌ಗೆ ಹೋಗುತ್ತಿವೆ. ಇದು ದೇಶಾದ್ಯಂತ ವೈರಸ್ ರೀತಿ ಹರಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಗೂಳಿಯಂತೆ ನುಗ್ಗುತ್ತಿರುವುದು ನೋಡಿದರೆ ದೇಶಕ್ಕೆ ಗಂಡಾಂತರ ಸೃಷ್ಟಿಯಾಗಿದೆ. ದೇಶವನ್ನು ಇಸ್ಲಾಂ ದೇಶ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದರು.