ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಯೋಜನೆಯಲ್ಲಿ ಜಮೀನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಸಿಗಬೇಕು. ಬಿಡಿಎಗೂ ಪ್ರಯೋಜನ ಆಗಬೇಕು. ಈ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲಿ ಎಲ್ಲರ ರಕ್ಷಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರು (ಜೂ.09): ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಯೋಜನೆಯಲ್ಲಿ ಜಮೀನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಸಿಗಬೇಕು. ಬಿಡಿಎಗೂ ಪ್ರಯೋಜನ ಆಗಬೇಕು. ಈ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲಿ ಎಲ್ಲರ ರಕ್ಷಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಗುರುವಾರ ಬಿಡಿಎ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಶಿವರಾಮ ಕಾರಂತ ಬಡಾವಣೆ ಕಾಮಗಾರಿ ಮುಂದುವರೆಸಲು ಸುಪ್ರೀಂ ಕೋರ್ಟ್ ನ್ಯಾ.ನಜೀರ್ ಅವರ ಪೀಠ ಆದೇಶಿದೆ. ಈ ಹಿನ್ನೆಲೆಯಲ್ಲಿ ಯೋಜನೆ ಕಾಮಗಾರಿ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದರು. ಈ ಯೋಜನೆ ಕುರಿತು ನ್ಯಾಯಮೂರ್ತಿಗಳಾದ ಚಂದ್ರಶೇಖರ್, ರಮೇಶ್ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಅಪರ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಡಿಎ ಆಯುಕ್ತ ಕುಮಾರನಾಯಕ್ ಅವರ ಜೊತೆ ಚರ್ಚೆ ಮಾಡಿದ್ದೇನೆ.
ಮಗಳನ್ನು ಗಂಡನಿಗೆ ಒಪ್ಪಿಸದೆ ಕೋರ್ಟ್‌ನಲ್ಲಿ ಪತ್ನಿಯ ಹೈಡ್ರಾಮಾ: ಯಾಕೆ ಗೊತ್ತಾ
ಬಡಾವಣೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಥವಾ ಸ್ಥಳೀಯ ಮಟ್ಟದ ಲೇಔಟ್ ಮಾಡುತ್ತಿದ್ದಾರಾ? ಯಾವ ರೀತಿ ಯೋಜನೆ ರೂಪಿಸಿದ್ದಾರೆ ಎಂಬುದರ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದರು. ಡಾ.ಶಿವರಾಮ ಕಾರಂತ ಬಡಾವಣೆಗೆಂದು ಆಸ್ತಿ ಕೊಟ್ಟವರಿಗೆ ಪರಿಹಾರ ಸಿಗುವ ನಿಟ್ಟಿನಲ್ಲಿ ಕೆಲಸ ಆಗುತ್ತಿದೆಯೇ ಇಲ್ಲವೇ ಎಂಬ ಬಗ್ಗೆ ಮಾಹಿತಿ ಪಡೆದಿದ್ದೇನೆ. ಕಂದಾಯ ನಿವೇಶನಕ್ಕೆ ಅರ್ಜಿ ಹಾಕಿರುವ ಬಡವರಿಗೆ ಅನ್ಯಾಯ ಆಗಬಾರದು. ಕಾನೂನು ಚೌಕಟ್ಟಿನಲ್ಲಿ ಎಲ್ಲರ ರಕ್ಷಣೆ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.
ಮಳೆ ಹಾನಿ ನಿರ್ವಹಣೆಗೆ ಸೂಚನೆ: ಮಳೆಗಾಲ ಆರಂಭವಾಗುತ್ತಿದ್ದು, ಎಲ್ಲೆಲ್ಲಿ ನೀರು ನಿಲ್ಲುತ್ತದೆಯೋ ಅಂತಹ ಅತ್ಯಂತ ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಮಳೆ ಬಂದಾಗ ಸಮಸ್ಯೆ ಎದುರಾದರೆ ಅದನ್ನು ನಿಭಾಯಿಸಲು ಯಾವ ಕಾರ್ಯ ಯೋಜನೆ ರೂಪಿಸಿದ್ದೀರಿ ಎಂದು ಮಾಹಿತಿ ಪಡೆದಿದ್ದೇನೆ. ಬೆಂಗಳೂರು ನಗರಕ್ಕೆ ಕೆಟ್ಟಹೆಸರು ಬರಬಾರದ ರೀತಿಯಲ್ಲಿ ಮಳೆ ಹಾನಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಧಾರವಾಡದಲ್ಲಿ ಮತ್ತೆ ಆರಂಭವಾಯ್ತಾ ಲವ್ ಜಿಹಾದ್: ಮದುವೆ ತಡೆ ಹಿಡಿದ ಬಜರಂಗದಳ ಕಾರ್ಯಕರ್ತರು
ಇನ್ಮುಂದೆ ನೋಟಿಸ್ ನೀಡಲ್ಲ, ನೇರ ಕೆಲಸ: ದಿವ್ಯಶ್ರೀ ಅಪಾಟ್ರ್ಮೆಂಟ್ ಬಳಿ ರಾಜಕಾಲುವೆ ಅಗಲ ಅಳತೆಗೆ ಆದೇಶ ನೀಡಿದ್ದೇನೆ. ಇಲ್ಲಿ ನೀರು ಹೆಚ್ಚಾದರೆ ಕಾಲುವೆಯಿಂದ ಹೊರಗೆ ಹರಿಯುತ್ತಿದೆ. ಆದ್ದರಿಂದ ಅಗಲೀಕರಣ ಮಾಡಲು ಸೂಚನೆ ನೀಡಿದ್ದೇನೆ. ರಾಜಕಾಲುವೆ ಅಗಲೀಕರಣವನ್ನು ಅವರು ಮಾಡದಿದ್ದರೆ ಆ ಕೆಲಸವನ್ನು ನಾವೇ ಮಾಡುತ್ತೇವೆ. ಇನ್ನು ಮುಂದೆ ನೋಟಿಸ್ ನೀಡುವುದಿಲ್ಲ. ಬಾಯಿ ಮಾತಲ್ಲಿ ಹೇಳುತ್ತೇವೆ. ಕೇಳದಿದ್ದರೆ ನಂತರ ಕಾನೂನು ಬಳಸಿ ನಮ್ಮ ಕೆಲಸ ಮಾಡುತ್ತೇವೆ. ಒಂದೇ ದಿನದಲ್ಲಿ ಬದಲಾವಣೆ ಮಾಡುತ್ತೇನೆ ಎಂದು ಹೇಳುವುದಿಲ್ಲ. ಆದರೆ ತಕ್ಷಣದಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಕೆಲವು ಸೂಚನೆ ನೀಡಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.