ಹಾವೇರಿಯಲ್ಲಿ ಮೂವರು ಕೊರೋನಾ ಸೋಂಕಿತರು ನಾಪತ್ತೆ..!

By Kannadaprabha News  |  First Published Jul 30, 2020, 12:21 PM IST

ಪಾಸಿಟಿವ್‌ ವರದಿ ಬಂದ ಮೂವರು ನಾಪತ್ತೆ| ಹಾವೇರಿ ಜಿಲ್ಲೆಯಲ್ಲಿ ನಡೆದ ಘಟನೆ| ಕೊರೋನಾ ಸೋಂಕಿತರನ್ನ ಹುಡುಕಲು ಹರಸಾಹಸ ಪಡುತ್ತಿರುವ ಪೊಲೀಸರು| ತಲೆಮರೆಸಿಕೊಂಡಿರುವವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲು|


ಹಾವೇರಿ(ಜು.30):  ಕೊರೋನಾ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಸ್ವ್ಯಾಬ್‌ ಟೆಸ್ಟ್‌ ಮಾಡಿಸಿಕೊಂಡ ಅನೇಕರು ಆರೋಗ್ಯ ಇಲಾಖೆಗೆ ಸುಳ್ಳು ಮಾಹಿತಿ ನೀಡುತ್ತಿರುವ ಪ್ರಕರಣ ಜಿಲ್ಲೆಯಲ್ಲಿ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ರೀತಿ ಜಿಲ್ಲೆಯಲ್ಲಿ ಪಾಸಿಟಿವ್‌ ವರದಿ ಬಂದ ಮೂವರು ತಲೆಮರೆಸಿಕೊಂಡಿದ್ದು, ಈ ಕುರಿತು ಪೊಲೀಸ್‌ ದೂರು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದ್ದಾರೆ.

ಮೊಬೈಲ್‌ ಸಂಖ್ಯೆಯನ್ನು ತಪ್ಪಾಗಿ ನೀಡುವುದು, ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಳ್ಳುವುದು, ಪಾಸಿಟಿವ್‌ ಬಂದಿದೆ ಎಂದು ಆರೋಗ್ಯ ಇಲಾಖೆ ಸಂಬಂಧಪಟ್ಟ ವ್ಯಕ್ತಿಗೆ ಕರೆ ಮಾಡಿ ತಿಳಿಸಿದ ತಕ್ಷಣ ಆಸ್ಪತ್ರೆಗೆ ಸೇರದೇ ನಾಪತ್ತೆಯಾಗುವ ಮೂಲಕ ಜಿಲ್ಲಾಡಳಿತಕ್ಕೆ ಕೆಲವರು ತಲೆನೋವು ತರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ರೀತಿ ಮೂವರು ಪಾಸಿಟಿವ್‌ ಸೋಂಕಿತರು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

Latest Videos

undefined

ಕೊರೋನಾ ಕಾಟ: ಹಾವೇರಿಯಲ್ಲಿ ವಿದ್ಯಾರ್ಥಿಗಳಿದ್ದಲ್ಲಿಗೇ ತೆರಳಿ ಶಿಕ್ಷಕರಿಂದ ಪಾಠ..!

ಕೊರೋನಾ ಸೋಂಕಿತರು ಎಲ್ಲಿದ್ದಾರೆ ಎಂಬುದನ್ನು ಹುಡುಕಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸೋಂಕು ಬಂದರೂ ಆಸ್ಪತ್ರೆಗೆ ದಾಖಲಾಗದೇ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ್‌ ತಿಳಿಸಿದ್ದಾರೆ.
 

click me!