ಖಾಸಗಿ-ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಮೂರು ಸಾವು

Published : Aug 16, 2019, 04:36 PM IST
ಖಾಸಗಿ-ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಮೂರು ಸಾವು

ಸಾರಾಂಶ

ತುಮಕೂರು ಬಳಿ ಶಿರಾದಲ್ಲಿ ನಡೆದ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ತುಮಕೂರು: ಹಿಂಬದಿಯಿಂದ ಕೆಎಸ್ಆರ್‌ಟಿಸಿ ಬಸ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಈ ಘಟನೆ ನಡೆದಿದೆ.ಗಾಯಗೊಂಡವರನ್ನು ಶಿರಾ ಆಸ್ಪತ್ರೆಗೆ ರವಾನಿಸಲಾಗಿದೆ. 

ಚಿತ್ರದುರ್ಗದಿಂದ ಬೆಂಗಳೂರಿನತ್ತ ಬರುತ್ತಿದ್ದಾಗ ಈ ಅವಘಡ ಮುಂಜಾನೆ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿದ್ದ ಇಬ್ಬರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಒಬ್ಬರು ಮೃತಪಟ್ಟಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ  ಎಸ್ಪಿ ಅವರು ಚಾಲಕರಾದ ರಮೇಶ್ ಅವರು ಜಿಲ್ಲೆಗೆ ಹಂಚಿಕೆಯಾದ ಹೊಸ ಜೀಪ್ ತರಲು ಬೆಂಗಳೂರಿಗೆ ಬಸ್‌ನಲ್ಲಿ ತೆರಳಿದ್ದರು. 

PREV
click me!

Recommended Stories

ಇದು ಸಂವಿಧಾನಕ್ಕೆ ಮಾಡಿದ ಅಪಚಾರ: ರಾಜ್ಯಪಾಲರ ನಡೆಗೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ!
Government Hospital: ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು!