ವಿಜಯಪುರ: ಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ

Published : Jan 24, 2025, 09:21 AM IST
ವಿಜಯಪುರ: ಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ

ಸಾರಾಂಶ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಐವರು ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೋಗಿದ್ರು. ವಾಪಸ್ ಬರುವಾಗ ರಸ್ತೆ ಅಪಘಾತ ನಡೆದಿದೆ. 

ವಿಜಯಪುರ(ಜ.24):  ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಎನ್ ಎಚ್ 50 ರಲ್ಲಿ ಇಂದು(ಶುಕ್ರವಾರ) ನಡೆದಿದೆ. ಮೃತರನ್ನ ಅಭಿಷೇಕ್ ಸಾವಂತ (23), ವಿಜಯಕುಮಾರ ಔರಂಗಾಬಾದ ( 24) ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಐವರು ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೋಗಿದ್ರು. ವಾಪಸ್ ಬರುವಾಗ ರಸ್ತೆ ಅಪಘಾತ ನಡೆದಿದೆ. 

ಬೆಂಕಿ ವದಂತಿ: ರೈಲಿಂದ ಜಿಗಿದವರ ಮೇಲೆ ಬೇರೆ ರೈಲು ಹರಿದು 12 ಬಲಿ!

ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಗಳನ್ನ  ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV
Read more Articles on
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?