ಚಿಕ್ಕಮಗಳೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.
ಚಿಕ್ಕಮಗಳೂರು(ಜು.12) : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಗಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಮೂವರು ಸಾವನ್ನಪ್ಪಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದೆ.
ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು,ಮೃತರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ. ಮೃತರ ಹೆಸರು, ಪರಿಚಯ ತಿಳಿದುಬಂದಿಲ್ಲ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಮುಡಿ ಕೊಟ್ಟು ವಾಪಸ್ಸಾಗುತ್ತಿದ್ದರು.
40 ಅಡಿ ಕಂದಕಕ್ಕೆ ಉರುಳಿ ಭೀಕರ ಬಸ್ ಅಪಘಾತ : 29 ಮಂದಿ ದುರ್ಮರಣ
ಧರ್ಮಸ್ಥಳದಿಂದ ಬಳ್ಳಾರಿಗೆ ವಾಪಸ್ಸಾಗುವ ವೇಳೆಯಲ್ಲಿ ಮಧ್ಯರಾತ್ರಿ ಚಾಲಕನ ನಿಯಂತ್ರಣ ತಪ್ಪಿಕಾರು ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.