ಸಕಲೇಶಪುರದಲ್ಲಿ ಕಾಡ್ಗಿಚ್ಚು: ಗಾಯಾಳುಗಳನ್ನು 12 ಕಿ.ಮೀ ಹೊತ್ತು ತಂದರು..!

By Kannadaprabha News  |  First Published Feb 17, 2023, 2:56 PM IST

ಸುಟ್ಟ ಗಾಯಗಳಿಂದ ಗಾಯಗೊಂಡ ಸಿಬ್ಬಂದಿಯನ್ನು ಕಾಡಿನಿಂದ ಗ್ರಾಮಸ್ಥರು ಹಾಗೂ ಇತರ ಅರಣ್ಯ ಇಲಾಖೆ ಸಿಬ್ಬಂದಿ ನೆರವಿನಿಂದ ಸುಮಾರು 12 ಕಿ.ಮೀ. ದೂರ ಎತ್ತಿಕೊಂಡು ಬಂದು ನಂತರ ಆ್ಯಂಬುಲೆನ್ಸ್‌ ಮುಖಾಂತರ ಪಟ್ಟಣದ ಕ್ರಾಫರ್ಡ್‌ ಅಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಯಿತು.


ಸಕಲೇಶಪುರ(ಫೆ.17):  ಪಶ್ಚಿಮಘಟ್ಟ ಅರಣ್ಯಕ್ಕೆ ಬಿದ್ದಿದ್ದ ಬೆಂಕಿ ನಂದಿಸಲು ಹೋದ ಮೂವರು ಅರಣ್ಯ ಇಲಾಖೆ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕಾಡುಮನೆ ಎಸ್ಟೇಟ್‌ ಬಳಿ ಗುರುವಾರ ನಡೆದಿದೆ.

ತಾಲೂಕಿನ ಕಾಡುಮನೆ ಸಮೀಪ ಮಣಿಬೀಡು ದೇವಸ್ಥಾನದ ಸಮೀಪವಿರುವ ಪಶ್ಚಿಮಘಟ್ಟದ ಕಾಡಿನಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ನಂದಿಸಲು ಹೋದ ಅರಣ್ಯ ಇಲಾಖೆಯ ಫಾರೆಸ್ಟರ್‌ ಮಂಜುನಾಥ್‌, ಅರಣ್ಯ ವೀಕ್ಷಕ ಸುಂದರೇಶ್‌ ಗಂಭೀರವಾಗಿ ಸುಟ್ಟಗಾಯಗಳೊಂದಿಗೆ ನರಳುತ್ತಿದ್ದಾರೆ. ಮತ್ತೊಬ್ಬ ಅರಣ್ಯ ವೀಕ್ಷಕ ತುಂಗೇಶ್‌ ತುಸು ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.

Tap to resize

Latest Videos

ಚಿಕ್ಕಮಗಳೂರು: ಸಚಿವ ಅಶ್ವಥ್ ನಾರಾಯಣರನ್ನ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ಆಗ್ರಹ

ಸುಟ್ಟಗಾಯಗಳಿಂದ ಗಾಯಗೊಂಡ ಸಿಬ್ಬಂದಿಯನ್ನು ಕಾಡಿನಿಂದ ಗ್ರಾಮಸ್ಥರು ಹಾಗೂ ಇತರ ಅರಣ್ಯ ಇಲಾಖೆ ಸಿಬ್ಬಂದಿ ನೆರವಿನಿಂದ ಸುಮಾರು 12 ಕಿ.ಮೀ. ದೂರ ಎತ್ತಿಕೊಂಡು ಬಂದು ನಂತರ ಆ್ಯಂಬುಲೆನ್ಸ್‌ ಮುಖಾಂತರ ಪಟ್ಟಣದ ಕ್ರಾಫರ್ಡ್‌ ಅಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಯಿತು.

click me!