ಚಿಕ್ಕಬಳ್ಳಾಪುರ: ಕಾರು ಕಾಲುವೆಗೆ ಉರುಳಿ ಮೂವರು ಸಾವು

By Kannadaprabha News  |  First Published Jun 8, 2024, 10:36 PM IST

ಗೌರಿಬಿದನೂರು ತಾಲೂಕು ನಗರಗೆರೆ-ವಾಟದಹೊಸಹಳ್ಳಿ ರಸ್ತೆಯಲ್ಲಿ ವೇಣುಗೋಪಾಲ್‌ಗೆ ಅವರ ಕಾರಿನಲ್ಲಿ ಶ್ರೀಧರ್, ವೇಣುಗೋಪಾಲ್, ಮಂಜುನಾಥ್ ಮತ್ತು ಶಿವಕುಮಾರ್ ಬರುವವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.


ಚಿಕ್ಕಬಳ್ಳಾಪುರ(ಜೂ.08):  ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೆರೆ ಬಳಿಯ‌ ತಿರುವಿನಲ್ಲಿ ಗುರುವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿದ ಪರಿಣಾಮ, ಕಾರಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಗೌರಿಬಿದನೂರು ತಾಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್ (28) ವೇಣುಗೋಪಾಲ (38), ಮಂಜುನಾಥ (37) ಎಂದು ಗುರ್ತಿಸಲಾಗಿದ್ದು ಗಾಯಾಳು ಶಿವಕುಮಾರ್‌ನನ್ನು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ,

Tap to resize

Latest Videos

ಪಲ್ಲಕ್ಕಿ ಇದ್ದ ಟ್ರ್ಯಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರ ದುರ್ಮರಣ!

ಗೌರಿಬಿದನೂರು ತಾಲೂಕು ನಗರಗೆರೆ-ವಾಟದಹೊಸಹಳ್ಳಿ ರಸ್ತೆಯಲ್ಲಿ ವೇಣುಗೋಪಾಲ್‌ಗೆ ಅವರ ಕಾರಿನಲ್ಲಿ ಶ್ರೀಧರ್, ವೇಣುಗೋಪಾಲ್, ಮಂಜುನಾಥ್ ಮತ್ತು ಶಿವಕುಮಾರ್ ಬರುವವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಮುಂಜಾನೆ ಸಮಯದಲ್ಲಿ ನಿದ್ದೆಯ ಮಂಪರಿನಲ್ಲಿದ್ದ ಚಾಲಕ ನಿದ್ದೆಗೆ ಜಾರಿದ್ದು, ಇದರಿಂದ ನಿಯಂತ್ರಣ ತಪ್ಪಿದ ಕಾರು ಕಾಲುವೆಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಒಬ್ಬರ ದೇಹ ಹಳ್ಳದಲ್ಲಿರುವ ಮರದಲ್ಲಿ ನೇತಾಡುತ್ತಿತ್ತು.

ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಕೊಂಡು ಮೃತ ದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರಗೆ ರವಾನಿಸಿದ್ದಾರೆ, ಆಸ್ಪತ್ರೆಯ ಬಳಿ ಮೃತರ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

click me!