ಕಾರು ಬೆಂಗಳೂರಿನಿಂದ ಆಂಧ್ರಪ್ರದೇಶದ ಕಡೆಗೆ ತೆರಳುತ್ತಿತ್ತು. ಆಂಧ್ರದ ಬೋಯಿಕೊಂಡದಿಂದ ಬೆಂಗಳೂರು ಕಡೆಗೆ ಟಿಟಿ ವಾಹನ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಚಿಕ್ಕಬಳ್ಳಾಪುರ(ಆ.28): ಟಿಟಿ ವಾಹನ ಕಾರು ನಡುವೆ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 11 ಮಂದಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ಇಂದು(ಬುಧವಾರ) ನಡೆದಿದೆ.
ಶ್ರೀನಿವಾಸಲು(50), ಪುಷ್ಪ(41) ಹಾಗೂ ಶ್ರೀಕಾಂತ್ (30) ಮೃತ ದುರ್ದೈವಿಗಳು. ಕಾರು ಬೆಂಗಳೂರಿನಿಂದ ಆಂಧ್ರಪ್ರದೇಶದ ಕಡೆಗೆ ತೆರಳುತ್ತಿತ್ತು. ಆಂಧ್ರದ ಬೋಯಿಕೊಂಡದಿಂದ ಬೆಂಗಳೂರು ಕಡೆಗೆ ಟಿಟಿ ವಾಹನ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಹುಬ್ಬಳ್ಳಿ: ಓಮಿನಿ ಕಾರು, ಲಾರಿ ಮಧ್ಯೆ ಭೀಕರ ಅಪಘಾತ, ಒಂದೇ ಕುಟುಂಬದ ಮೂವರ ದುರ್ಮರಣ
ಗಾಯಾಳುಗಳನ್ನ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಿಂತಾಮಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.