* ರಾಷ್ಟ್ರೀಯ ಹೆದ್ದಾರಿ 206ರ ಮತ್ತಿಹಳ್ಳಿ ಗೇಟ್ ತಿರುವಿನಲ್ಲಿ ನಡೆದ ಘಟನೆ
* ಮೂವರು ಸ್ಥಳದಲ್ಲೇ ಸಾವು, ಮತ್ತಿಬ್ಬರ ಸ್ಥಿತಿ ಚಿಂತಾಜನಕ
* ಈ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ತುಮಕೂರು(ಜು.08): ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಮತ್ತಿಹಳ್ಳಿ ಗೇಟ್ ತಿರುವಿನಲ್ಲಿ ನಿನ್ನೆ(ಗುರುವಾರ) ಸಂಭವಿಸಿದೆ.
ತುಮಕೂರು ಗ್ರಾಮಾಂತರ ಬೆಳ್ಳಾವಿಯ ಗೊಲ್ಲರಹಟ್ಟಿ ಗ್ರಾಮದ ಸಿದ್ದರಾಜು (38), ಮೋಹನ್ (35), ರಾಜಣ್ಣ (28) ಮೃತ ದುರ್ದೈವಿಗಳು. ಸ್ಯಾಂಟ್ರೋ ಕಾರು ಶಿರಾದಿಂದ ಅರಸೀಕೆರೆ ಕಡೆಗೆ ಮತ್ತು ಬಸ್ ಅರಸೀಕೆರೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ನುಗ್ಗಿದೆ.
Bidar: ಹಳಿ ಮೇಲೆ ನಿಂತ ಲಾರಿಗೆ ರೈಲು ಡಿಕ್ಕಿ: ತಪ್ಪಿದ ಭಾರಿ ಅನಾಹುತ
ಘಟನಾ ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಹಾಗೂ ಆ್ಯಂಬುಲೆನ್ಸ್ ಸಿಬ್ಬಂದಿ ದೌಡಾಯಿಸಿ ಗಾಯಗೊಂಡವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ದೇಹಗಳು ತಿಪಟೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದ್ದು ಹೊನ್ನವಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.