ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿಕ್ರಾಸ್ ಬಳಿ ರಾಯಚೂರು-ಮಾನ್ವಿ ಹೆದ್ದಾರಿಯಲ್ಲಿ ನಡೆದ ಘಟನೆ
ಸಿರವಾರ(ಆ.17): ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ರಾಯಚೂರು-ಮಾನ್ವಿ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.
ತಾಲೂಕಿನ ಕಲ್ಲೂರು ಗ್ರಾಮದ ಬಸವರಾಜ ಮಾಸಳಿ(40), ಭೀಮವ್ವ ಮಾಸಳಿ (50), ನರೇಶ (8) ಮೃತಪಟ್ಟದುರ್ದೈವಿಗಳಾಗಿದ್ದಾರೆ. ಸಂಬಂಧಿಕರೊಬ್ಬರು ಸಾವನಪ್ಪಿದ ಹಿನ್ನೆಲೆಯಲ್ಲಿ ಅತಿಮ ಸಂಸ್ಕಾರದಲ್ಲಿ ಭಾಗವಹಿಸಲು ಕಲ್ಲೂರು ಗ್ರಾಮದಿಂದ ಕುರ್ಡಿ ಗ್ರಾಮದ ಕಡೆ ಹೊರಟ ವೇಳೆ ಎದುರಿಗೆ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಮೂರು ಜನ ಮೃತಪಟ್ಟಿದ್ದಾರೆ.
ಕೋಲಾರ: ಮುಳಬಾಗಿಲು ಬಳಿ ಖಾಸಗಿ ಬಸ್ ಪಲ್ಟಿ, ಇಬ್ಬರ ಸಾವು
ಲಾರಿ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದೇ ದುರ್ಘಟನೆಗೆ ಪ್ರಮುಖ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೂವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಮಾಹಿತಿ ಪಡೆದ ಸಿರವಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತ ದೇಹಗಳನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಅಪಘಾತಕ್ಕೆ ಸಂಬಂಧಿಸಿದಂತೆ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.