ಚಿಂಚೋಳಿಯಲ್ಲಿ ವಿದ್ಯುತ್ ಅವಘಡ: ಒಂದೇ ಕುಟುಂಬದ ಮೂವರ ದುರ್ಮರಣ

By Girish Goudar  |  First Published Mar 19, 2023, 8:39 AM IST

ಒಂದೇ ಕುಟುಂಬದ ತಾಯಿ ಮತ್ತು ಇಬ್ಬರು ಮಕ್ಕಳು  ಮೃತಪಟ್ಟು, ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ಶನಿವಾರ ನಡೆದಿದೆ. 


ಕಲಬುರಗಿ(ಮಾ.19):  ವಿದ್ಯುತ್ ತಗುಲಿದ ಪರಿಣಾಮ ಒಂದೇ ಕುಟುಂಬದ ತಾಯಿ ಮತ್ತು ಇಬ್ಬರು ಮಕ್ಕಳು  ಮೃತಪಟ್ಟು, ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ನಿನ್ನೆ(ಶನಿವಾರ) ರಾತ್ರಿ ನಡೆದಿದೆ. ಝರಣಮ್ಮ (45), ಮಹೇಶ (18), ಸುರೇಶ (20) ಮೃತ ದುರ್ದೈವಿಗಳಾಗಿದ್ದಾರೆ. 

ನಿನ್ನೆ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ತಂತಿ ಕಡಿದು ನೆಲಕ್ಕೆ ಬಿದ್ದಿತ್ತು. ರಾತ್ರಿ ಮಳೆ ಜೋರಾದಾಗ ದನಗಳನ್ನು ಆಶ್ರಯಕ್ಕೆ ಸ್ಥಳಾಂತರಿಸಲು ಕುಟುಂಬ ತೆರಳಿತ್ತು. ಬಾಗಿಲೆದುರು ನಿಂತಿದ್ದ ನೀರಿನಲ್ಲಿ ವಿದ್ಯುತ್ ತಂತಿ ಕಡಿದು ಬಿದ್ದು ವಿದ್ಯುತ್‌ ಪಸರಿಸಿತ್ತು. 

Tap to resize

Latest Videos

undefined

ಚಿತ್ತಾಪುರಕ್ಕೂ ಕಾಲಿಟ್ಟ ಗಿಫ್ಟ್‌ ರಾಜಕಾರಣ: ಕುಕ್ಕರ್‌ ಹಂಚಿದ ಬಿಜೆಪಿ ಎಂಎಲ್‌ಸಿ ವಲ್ಯಾಪುರೆ

ಈ ವೇಳೆ ರಾತ್ರಿ ಮನೆಯಿಂದ ಹೊರ ಬಂದ ನಾಲ್ವರಿಗೂ ವಿದ್ಯುತ್ ಶಾಕ್ ಪ್ರವಹಿಸಿ ತಾಯಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ತಂದೆ ಅಂಬಣ್ಣನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಳುವನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

click me!