ಕಲಬುರಗಿ: ಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲಿಯೇ ಮೂವರು ದುರ್ಮರಣ

Published : Jun 19, 2019, 10:32 PM IST
ಕಲಬುರಗಿ: ಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲಿಯೇ ಮೂವರು ದುರ್ಮರಣ

ಸಾರಾಂಶ

ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಸಂಭವಿಸಿದೆ.

ಕಲಬುರಗಿ, [ಜೂ.19]: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬುಧವಾರ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಾಗಣಗೇರಾ ಕ್ರಾಸ್ ಬಳಿ ನಡೆದಿದೆ.

ರಾಮನಗೌಡ (24) ಹಾಗೂ ಶಾಂತಗೌಡ (24) ಸೇರಿದಂತೆ ಮತ್ತೊರ್ವ ಮೃತಪಟ್ಟಿದ್ದಾನೆ. ಮೃತರಲ್ಲಿ ಇಬ್ಬರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮದವರು ಎಂದು ತಿಳಿದುಬಂದಿದ್ದು, ಮತ್ತೋರ್ವ ಸುರಪುರ ತಾಲೂಕಿನವ ಎಂದು ಗುರುತಿಸಲಾಗಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಯಡ್ರಾಮಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV
click me!

Recommended Stories

ಬೆಂಗಳೂರು ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಅಗ್ನಿ ಅವಘಡ: ನಡುರಸ್ತೆಯಲ್ಲೇ ಭಸ್ಮವಾದ ಕಾರು
ಬೆಂಗಳೂರು ಹೋಟೆಲ್‌ನಲ್ಲಿ ಭರ್ಜರಿ ಪಾರ್ಟಿ, ಪೊಲೀಸ್ ಬಂದಾಕ್ಷಣ ಬಾಲ್ಕನಿಯಿಂದ ಜಿಗಿದ ಯುವತಿ!