ಯಲಬುರ್ಗಾ: ಟಾಟಾ ಏಸ್‌ ಬೈಕ್‌ ಮುಖಾಮುಖಿ ಡಿಕ್ಕಿ, ಮೂವರು ಸಾವು

Kannadaprabha News   | Asianet News
Published : Oct 03, 2020, 03:23 PM ISTUpdated : Oct 03, 2020, 03:26 PM IST
ಯಲಬುರ್ಗಾ: ಟಾಟಾ ಏಸ್‌ ಬೈಕ್‌ ಮುಖಾಮುಖಿ ಡಿಕ್ಕಿ, ಮೂವರು ಸಾವು

ಸಾರಾಂಶ

ಟಾಟಾ ಏಸ್‌, ಬೈಕ್‌ ಮಧ್ಯೆ ಅಪಘಾತ| ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಹತ್ತಿರ ನಡೆದ ಘಟನೆ| ಗಾಯಾಳುಗಳಿಗೆ ಯಲಬುರ್ಗಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ| ಈ ಸಂಬಂಧ ಯಲಬುರ್ಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಯಲಬುರ್ಗಾ(ಅ.03): ಟಾಟಾ ಏಸ್‌ ವಾಹನ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಹತ್ತಿರ ನಿನ್ನೆ(ಶುಕ್ರವಾರ) ನಡೆದಿದೆ.

ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯಪುರದ ಬಳಿ ಭೀಕರ ಅಪಘಾತ: ಅಂಜನಾದ್ರಿ ಬೆಟ್ಟಕ್ಕೆ ಹೊರಟ್ಟಿದ್ದ ಮೂವರು ಭಕ್ತರ ದುರ್ಮರಣ

ಮೃತರನ್ನು ಬೈರಾಪುರ ಗ್ರಾಮದ ಈರಣ್ಣ ಸಿಂಧೋಗಿ (26), ಚಿಕ್ಕಮ್ಯಾಗೇರಿ ಗ್ರಾಮದ ಹನುಮಪ್ಪ ಉಪ್ಪಾರ (26), ಧರ್ಮಪ್ಪ ಹೊಸಳ್ಳಿ (55) ಎಂದು ಗುರುತಿಸಲಾಗಿದೆ. ಈ ಕುರಿತು ಯಲಬುರ್ಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!