ಕೋಲಾರ: ಮರಕ್ಕೆ ಡಿಕ್ಕಿ ಹೊಡೆದ ಆಡಿ ಕಾರು, ಸ್ಥಳದಲ್ಲೇ ಮೂವರು ವಿದ್ಯಾರ್ಥಿಗಳ ದುರ್ಮರಣ

By Girish Goudar  |  First Published Aug 3, 2024, 7:08 AM IST

ಅಪಘಾತದ ರಭಸಕ್ಕೆ ಆಡಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ನೇಹಿತರೆಲ್ಲರೂ ಸಾಯಿಗಗನ್ ಮನೆಗೆ ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಹೋಗುವಾಗ ಅಪಘಾತ ನಡೆದಿದೆ. 


ಕೋಲಾರ(ಆ.03):  ಆಡಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಆಶ್ಚರ್ಯಕರ ರೀತಿಯಲ್ಲಿ ಪಾರಾದ ಘಟನೆ ನಗರದ ‌ಹೊರವಲಯದ ಬಂಗಾರಪೇಟೆ ಮುಖ್ಯ ರಸ್ತೆ ಸಹಕಾರ ನಗರ ಬಳಿ ಇಂದು(ಶನಿವಾರ) ನಡೆದಿದೆ. 

ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಮೃತ ದುರ್ದೈವಿಗಳು. ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ ಆಗಿದ್ದಾರೆ. 

Tap to resize

Latest Videos

Bengaluru: ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ರಸ್ತೆ ಅಫಘಾತ: ಹೊಸ ರೂಲ್ಸ್ ಜಾರಿ!

ಅಪಘಾತದ ರಭಸಕ್ಕೆ ಆಡಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ನೇಹಿತರೆಲ್ಲರೂ ಸಾಯಿಗಗನ್ ಮನೆಗೆ ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಹೋಗುವಾಗ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

click me!