ಶಿವಮೊಗ್ಗ: ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

By Kannadaprabha News  |  First Published Nov 17, 2024, 5:00 AM IST

ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿ ಅವರ ನಿರ್ಲಕ್ಷ್ಯದಿಂದ ಮಗು ಸಾವು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಶಿಕಾರಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಶಿವಮೊಗ್ಗ(ನ.17):   ಶಿಕಾರಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆಯಲ್ಲಿ ಮೂರು ವರ್ಷದ ಮಗು ತೊಟ್ಟಿಗೆ ಬಿದ್ದು ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮತ್ತಿಕೋಟೆಯ ನಿವಾಸಿ ಇಮ್ರಾನ್ ಎಂಬುವರಿಗೆ ಸೇರಿದ ಅಯಾನ್ ಎಂಬ ಮೂರು ವರ್ಷದ ಮಗು ಆಸ್ಪತ್ರೆಯ ತೊಟ್ಟಿಯಲ್ಲಿ ಶವವಾಗಿ ಪತ್ತೆಯಾಗಿದೆ. ತೆರೆದ ನೆಲದ ತೊಟ್ಟಿಯಲ್ಲಿ ಮಗು ಬಿದ್ದು ಸಾವನ್ನಪ್ಪಿದ್ದು, ಈ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಎಂಬುವರ ಪುತ್ರ ಮಹಮ್ಮದ್ ಐಯಾನ್ ತಂದೆಯ ಸಂಬಂಧಿಕರು ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಮ್ರಾನ್ ಸಂಬಂಧಿಯನ್ನ ವಿಚಾರಿಸಲು ಕುಟುಂಬದವರ ಜೊತೆ ಆಸ್ಪತ್ರೆಗೆ ಆಗಮಿಸಿದ್ದ ಅಯಾನ್ ಆಸ್ಪತ್ರೆ ಒಳಗಡೆಯಿಂದ ಆಟವಾಡುತ್ತಾ ಹೊರಗೆ ಬಂದ ತೊಟ್ಟಿಗೆ ಬಿದ್ದಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. 

Tap to resize

Latest Videos

undefined

ಬುಡಕಟ್ಟು ಜನರೇ ಸಾಮಾಜಿಕವಾಗಿ ಸಬಲರಾಗಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿ ಅವರ ನಿರ್ಲಕ್ಷ್ಯದಿಂದ ಮಗು ಸಾವು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಶಿಕಾರಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

click me!