ಬೈಕ್‌ಗೆ ಲಾರಿ ಹೊಡೆದ ಪರಿಣಾಮ ಒಂದು ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಬೈಕ್‌ಗೆ ಲಾರಿ ಹೊಡೆದಿದ್ದರಿಂದ ದೇಹಗಳು ಲಾರಿಯ ಚಕ್ರದ ಕೆಳಗೆ ಸಿಲುಕಿ ಛಿದ್ರ ಛಿದ್ರವಾಗಿವೆ.
ಶಿವಮೊಗ್ಗ(ಅ.01): ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಅರಹತೊಳಲು ಬಳಿ ಇಂದು(ಭಾನುವಾರ) ನಡೆದಿದೆ. ಶಶಿ (18), ವಿಕಾಸ್ (18 ), ಯಶವಂತ್ (19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಬೈಕ್‌ಗೆ ಲಾರಿ ಹೊಡೆದ ಪರಿಣಾಮ ಒಂದು ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಬೈಕ್‌ಗೆ ಲಾರಿ ಹೊಡೆದಿದ್ದರಿಂದ ದೇಹಗಳು ಲಾರಿಯ ಚಕ್ರದ ಕೆಳಗೆ ಸಿಲುಕಿ ಛಿದ್ರ ಛಿದ್ರವಾಗಿವೆ.
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಅಪಘಾತ, ಇನ್ಫೋಸಿಸ್, ಆ್ಯಕ್ಸೆಂಚರ್‌ನ ನಾಲ್ವರು ಟೆಕ್ಕಿ ಮೃತ!
ಮೃಥ ಯುವಕರು ಭದ್ರಾವತಿ ತಾಲೂಕಿನ ಜಂಬರಗಟ್ಟೆ ಗ್ರಾಮದವರು ಎನ್ನಲಾಗಿದೆ. ಭದ್ರಾವತಿ ತಾಲ್ಲೂಕಿನ ಅರದೂಟ್ಲು ಗ್ರಾಮದ ಗಗನ ಎಂಬುವನಿಗೆ ಬಲವಾದ ಪೆಟ್ಟು ಬಿದ್ದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.