ಚಿಕ್ಕಮಗಳೂರು: ತೋಟದಲ್ಲಿದ್ದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ, ಆತಂಕದಲ್ಲಿ ಜನತೆ..!

By Girish Goudar  |  First Published Jun 6, 2023, 9:30 PM IST

ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಕಾರ್ಮಿಕ ಮಹಿಳೆ, ಹಣೆ ಮತ್ತು ಮುಖಗೆ ಗಂಭೀರ ಗಾಯ, ಚಿಕ್ಕಮಗಳೂರು ತಾಲೂಕಿನ ಪಂಡರವಳ್ಳಿಯ ಕಾಫಿ ತೋಟದಲ್ಲಿ ಘಟನೆ, ಗಾಯಾಳು ಮಹಿಳೆ ಸರ್ಕಾರಿ ಆಸ್ಪತ್ರೆಗೆ ದಾಖಲು. 


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಜೂ.06):  ಮಲೆನಾಡಿನಲ್ಲಿ ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರವಾಸಿಗರ ಸ್ವರ್ಗ ಎಂದೇ ಕರೆಸಿಕೊಳ್ಳುವ ಮುಳ್ಳಯನ್ಯಗಿರಿ ತಪ್ಪಿನಲ್ಲಿ ಹುಲಿ ಕಾಟ ಆರಂಭವಾಗಿದೆ. ಕಳೆದ ಐದಾರು ವರ್ಷಗಳ ಹಿಂದೆ ಇದೇ ತಪ್ಪಿನಲ್ಲಿ ಹುಲಿ ಕಾಣಿಸಿಕೊಂಡು ಅದನ್ನು ಸೆರೆ ಹಿಡಿಯುವ ಕಾರ್ಯಚಾರಣೆ ಮಾಡಲಾಗಿತ್ತು. ಇದೀಗ ಮತ್ತೆ ಪಂಡರವಳ್ಳಿಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Tap to resize

Latest Videos

undefined

ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಕಾರ್ಮಿಕ ಮಹಿಳೆ : 

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನ ಪಂಡರವಳ್ಳಿ ಬಳಿ ನಡೆದಿದೆ. ಕಾಫಿತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ಹುಲಿ ದಾಳಿ ಮಾಡಿದೆ. ಅಸ್ಸಾಂ ಮೂಲದ ಕಾರ್ಮಿಕ ಮಹಿಳೆಯ ಮುಖ ಹಾಗೂ ಹಣೆಯ ಮೇಲೆ ಗಂಭೀರ ಗಾಯವಾಗಿದೆ. ಕೂಡಲೇ ಕಾಫಿ ತೋಟದಲ್ಲಿದ್ದ ಇತರೆ ಕಾರ್ಮಿಕರು ಕೂಗಾಡುತ್ತಿದ್ದಂತೆ ಹುಲಿ ಕಾಫಿ ತೋಟದಲ್ಲಿ ಕಣ್ಮರೆಯಾಗಿದೆ. ಹುಲಿ ಹೋಗುತ್ತಿದ್ದಂತೆ ಕಾರ್ಮಿಕರು ಮಹಿಳೆಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಹುಲಿಯನ್ನು ಸೆರೆ ಹಿಡಿಯುವ ಭರವಸೆ ವ್ಯಕ್ತಪಡಿಸಿದ್ದಾರೆ.

ಹಾಡಿನ ವಿಷ್ಯಕ್ಕೆ ಶುರುವಾದ ಗಲಾಟೆ: ದುಡ್ಡು ಹಾಕಿ ಸಮಾರಂಭ ಆಯೋಜಿಸಿದ್ದವನೇ ಕೊಲೆಯಾದ ..!

ನರಹಂತಕನಾಗಿದ್ದ ವ್ಯಾಘ್ರನನ್ನ ಗುಂಡಿಕ್ಕಿ ಕೊಲ್ಲಲಾಗಿತ್ತು : 

ಕಳೆದ ಐದಾರು ವರ್ಷಗಳ ಹಿಂದೆ ಕೂಡ ಇದೇ ಪಂಡರವಳ್ಳಿ ಗ್ರಾಮದಲ್ಲಿ ಹುಲಿ ದಾಳಿಗೆ ಸ್ಥಳೀಯ ಕಾರ್ಮಿಕ ಮಹಿಳೆ ಬಲಿಯಾಗಿದ್ದರು. ಹುಲಿಗಾಗಿ ಬೋನಿಟ್ಟು ನಾಲ್ಕೈದು ದಿನಗಳ ಕಾಲ ಕಾದು ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದಿದ್ದರು. ಚಿಕ್ಕಮಗಳೂರಿನಲ್ಲಿ ಸೆರೆಹಿಡಿದ ಹುಲಿಯನ್ನು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಬಿಟ್ಟಿದ್ದರು. ಆದರೆ, ಆ ಹುಲಿ ಖಾನಾಪುರದಲ್ಲೂ ಕೂಡ ಮಹಿಳೆಯನ್ನು ಬಲಿ ಪಡೆದಿತ್ತು. ಬಳಿಕ ನರಹಂತಕನಾಗಿದ್ದ ವ್ಯಾಘ್ರನನ್ನ ಕೋರ್ಟ್ ಸೂಚನೆ ಮೇರೆಗೆ ಗುಂಡಿಕ್ಕಿ ಕೊಲ್ಲಲಾಗಿತ್ತು. ಇದೀಗ ಮತ್ತೆ ಪಂಡರವಳ್ಳಿಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

click me!