ಮಡಿಕೇರಿಯಲ್ಲಿ ಗ್ರಾಮಸ್ಥರ ನೆಮ್ಮದಿ ಕೆಡಿಸಿದ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಕೊಡಗಿನಲ್ಲಿ ಹಸು ಕರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಕೊಡಗು(ಮಾ.15): ಮಡಿಕೇರಿಯಲ್ಲಿ ಗ್ರಾಮಸ್ಥರ ನೆಮ್ಮದಿ ಕೆಡಿಸಿದ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಕೊಡಗಿನಲ್ಲಿ ಹಸು ಕರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಗಾಯಗೊಂಡಿದ್ದ ಹುಲಿ ಸೆರೆಯಾಗಿದ್ದು, ವೀರಾಜಪೇಟೆ ತಾಲೂಕಿನ ಸುಳುಗೋಡು ಗ್ರಾಮದಲ್ಲಿ ಹೆಬ್ಬುಲಿ ಸೆರೆಯಾಗಿದೆ. ಗ್ರಾಮದ ಕೆರೆಯ ಬಳಿಯಿದ್ದ ಎಂಟು ವರ್ಷದ ಗಂಡು ಹುಲಿಗೆ ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ.
ಹುಟ್ಟೂರಲ್ಲೇ ರದ್ದಾಯ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ರೋಗ್ರಾಂ
ಸೆರೆಯಾದ ಹುಲಿ ಮೈಸೂರು ಮೃಗಾಲಯಕ್ಕೆ ರವಾನೆ ಮಾಡಲಾಗಿದ್ದು, ಸಿಸಿಎಫ್ ಹೀರಾಲಾಲ್ ಸೇರಿದಂತೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿ , ಪರಿಶೀಲನೆ ನಡೆಸಿದ್ದಾರೆ. ಹುಲಿಯ ಕಾಲಿನ ಭಾಗದಲ್ಲಿ ಗಾಯ ಕಂಡುಬಂದಿದೆ.